Homeಮುಖಪುಟಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: 'ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..'; ಮಹಿಳಾ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ‘ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..’; ಮಹಿಳಾ ಕಾಂಗ್ರೆಸ್

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತ ಮಹಿಳೆಯರ ಜೊತೆಗೆ ನಿಲ್ಲುವುದಾಗಿ ಮಹಿಳಾ ಕಾಂಗ್ರೆಸ್‌ ಹೇಳಿದ್ದು, ಧೈರ್ಯವಾಗಿ ಬಂದು ದೂರು ಕೊಡುವಂತೆ ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಅಲಕಾ ಲಂಬಾ, “ಹಾಸನದ ಸಂಸದ, ಎನ್ ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇದುವರೆಗೂ ನಡೆದ ಎಲ್ಲ ಮಹಿಳಾ ದೌರ್ಜನ್ಯಗಳ ದಾಖಲೆಗಳನ್ನು ಮುರಿದು ಹಾಕಿದ್ದಾರೆ. ದೇಶದ ಪ್ರಧಾನ ಮಂತ್ರಿ ತಮ್ಮ ಪ್ರತಿ ಭಾಷಣದಲ್ಲಿ ಕುಟುಂಬ ರಾಜಕಾರಣ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಲೇ ಇರುತ್ತಾರೆ; ಅವರ ಮಾತಿಗೆ ಏನಾದರೂ ಅರ್ಥವಿದೆಯೇ” ಎಂದು ಪ್ರಶ್ನಿಸಿದರು.

ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಜ್ವಲ್ ರೇವಣ್ಣ, ಬಿಜೆಪಿಯ ಕುಲ್ ದೀಪ್ ಸಿಂಗ್, ಉತ್ತರ ಪ್ರದೇಶದ ರಾಮ್ ದುಲ್ಹಾರೆ, ಬ್ರಿಜ್ ಭೂಷಣ್ ಸಿಂಗ್, ಹರಿಯಾಣದ ಸಚಿವ ಸಂದೀಪ್ ಸಿಂಗ್ ಇವರೆಲ್ಲಾ ಮಹಿಳೆಯರು, ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದವರು. ಇವರೇ ನಿಜವಾದ ಮೋದಿ ಪರಿವಾರದವರು. ಇದೇ ಮೋದಿ ಅವರ ಪರಿವಾರ ವಾದದ ಅರ್ಥ.

“ಪ್ರಜ್ವಲ್ ರೇವಣ್ಣ 2 ಸಾವಿರಕ್ಕೂ ಹೆಚ್ಚು ಬಾರಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ನಮ್ಮ ಹೆಣ್ಣು ಮಕ್ಕಳ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಮೋದಿಯವರು ಮಾತೆತ್ತಿದರೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಜೊತೆ ನಿಂತು ಪ್ರಧಾನಿಗಳು ಫೋಟೋಗೆ ಪೋಜು ಕೊಡುತ್ತಾರೆ. ಆದರೆ, ಭಾಷಣದಲ್ಲಿ ಮಾತ್ರ ಕುಟುಂಬ ರಾಜಕಾರಣ ಮತ್ತು ಬೇಟಿ ಬಚಾವೋ ಬಗ್ಗೆ ಮಾತನಾಡುತ್ತಾರೆ. ನಮ್ಮ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ತಿಳಿಸಬೇಕು. ಏಕೆಂದರೆ, ಈ ಘಟನೆ ಬೆಳಕಿಗೆ ಬಂದ ತಕ್ಷಣ ಗಂಭೀರತೆ ಅರಿತು ಎಸ್ ಐಟಿ ರಚನೆಗೆ ಆದೇಶ ನೀಡಿದ್ದಾರೆ” ಎಂದರು.

‘ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಅನೇಕ ಜನ ವಿದೇಶಕ್ಕೆ ಓಡಿ ಹೋಗಿದ್ದಾರೆ. ಹಣಕಾಸಿನ ವಿಚಾರದಲ್ಲಿ ದೇಶಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅದೇ ರೀತಿ ಪ್ರಜ್ವಲ್ ರೇವಣ್ಣ ಸಹ ಅದೇ ಹಾದಿ ತುಳಿದಿದ್ದಾರೆ. ಇಷ್ಟೊಂದು ಘೋರ ಘಟನೆ ನಡೆದಿದ್ದರೂ ಸಹ ಬಿಜೆಪಿಯ ಒಬ್ಬನೇ ಒಬ್ಬ ನಾಯಕನೂ ಬಾಯಿ ಬಿಟ್ಟಿಲ್ಲ. ಸ್ಮೃತಿ ಇರಾನಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರೇ, ಅಮಿತ್ ಶಾ, ಪ್ರಧಾನಿ ಮೋದಿ ಅವರೇ ಎಲ್ಲಿದ್ದೀರಿ? 2 ಜೂನ್ 2023 ರಲ್ಲಿ ನ್ಯಾಯಲಯದಿಂದ ಆದೇಶ ತಂದಿದ್ದ ಪ್ರಜ್ಷಲ್ ರೇವಣ್ಣ ಅವರ ವಿರುದ್ದ ಯಾವುದೇ ಸುದ್ದಿ, ವಿಡಿಯೋಗಳನ್ನು ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ತಂದಿದ್ದರು. ಅಂದರೆ, ಈ ವಿಚಾರ ಎಲ್ಲರಿಗೂ ತಿಳಿದಿತ್ತು. ಆದರೂ ಇದರ ಬಗ್ಗೆ ಕ್ರಮ ತೆಗದುಕೊಂಡಿಲ್ಲ ಎಂದರ್ಥವಲ್ಲವೇ” ಎಂದು ಅವರು ಪ್ರಶ್ನಿಸಿದರು.

‘ಅಧಿಕಾರದ ಮದದಿಂದ ಈ ಕೃತ್ಯಗಳು ನಡೆದಿದೆ. ತನ್ನ ಹುದ್ದೆ ಬಳಸಿಕೊಂಡು ಬಡ, ಅಮಾಯಕ ಹೆಣ್ಣು ಮಕ್ಕಳ ಮಾನಹಾನಿಯಾಗಿದೆ. ಪ್ರಧಾನ ಮಂತ್ರಿಗಳೇ ಜೊತೆಗಿರುವಾಗ ಆತ ಏಕೆ ಭಯಪಡಬೇಕು. ಅದಕ್ಕೆ ಸಾವಿರಾರು ವಿಡಿಯೋಗಳನ್ನು ಮಾಡಿದ್ದಾನೆ. ಕಾನೂನಿನ ಭಯವಿಲ್ಲದೆ ಕೃತ್ಯ ಎಸಗಿದ್ದಾನೆ. ಎಸ್ ಐಟಿಯಲ್ಲಿ ಮನವಿ ಮಾಡುತ್ತೇನೆ, ಶೋಷಣೆಗೆ ಒಳಗಾದ ಹೆಣ್ಣುಮಕ್ಕಳ ಗುರುತನ್ನು ಅದಷ್ಟು ಗುಪ್ತವಾಗಿ ಇರಿಸಿ ಹಾಗೂ ಅನ್ಯಾಯಕ್ಕೆ ಒಳಗಾದ ಎಲ್ಲಾ ಮಹಿಳೆಯರ ಪರವಾಗಿ ನಾವು ಇರುತ್ತೇವೆ. ನೀವು ಮುಂದೆ ಬಂದು ಆರೋಪಿ ತಪ್ಪಿಸಿಕೊಳ್ಳದಂತೆ ದೂರು ನೀಡಬೇಕು. ಪೊಲೀಸ್ ಠಾಣೆಗೆ ಬರಲು ಹೆದರಿಕೆಯಾದರೆ ಆನ್ ಲೈನ್ ಮೂಲಕ ದೂರು ದಾಖಲಿಸಿ” ಎಂದು ಕರೆ ನೀಡಿದರು.

ಮಾಹಿತಿ ಗೊತ್ತಿದ್ದರೂ ಬಿಜೆಪಿ ಟಿಕೆಟ್ ನೀಡಿದೆ: ಸೌಮ್ಯಾ ರೆಡ್ಡಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕಿ ಸೌಮ್ಯಾರೆಡ್ಡಿ, “ಕರ್ನಾಟಕದ ಇತಿಹಾಸದಲ್ಲಿ ಇಂತಹ ಹೀನ ಘಟನೆ ನಡೆಯುತ್ತದೆ ಎಂದು ಕನಸಿನಲ್ಲಿಯೂ ಎಣಿಸಿರಲಿಲ್ಲ. ದೇಶದ ಶೇ.50 ರಷ್ಟು ಜನಸಂಖ್ಯೆ ನಾವಿದ್ದೇವೆ. ನಮ್ಮನ್ನು ದೇವರ ಹೆಸರಿನಲ್ಲಿ ಪೂಜೆ ಮಾಡುತ್ತಾರೆ. ಹೆಣ್ಣು ದೇವರುಗಳಿಗೆ ಪೂಜೆ ಮಾಡುವುದು ಬೇಡ. ಗೌರವ ರಕ್ಷಣೆ ಕೊಟ್ಟರೇ ಸಾಕು. ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರ ಈ ಹೀನ ಕೃತ್ಯಗಳ ಬಗ್ಗೆ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ, ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ಈ ವಿಚಾರಗಳು ಗೊತಿದ್ದರೂ ಟಿಕೆಟ್ ನೀಡಿದ್ದು ಮಹಿಳೆಯರಿಗೆ ಅವಮಾನ ಮಾಡಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

“ನಾರಿಶಕ್ತಿ, ಮಹಿಳಾ ಸಮಾನತೆ ಎಂದು ಹೇಳುವ ಬಿಜೆಪಿಯವರೇ ನಿಮಗೆ ಮಹಿಳೆಯರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಮೋದಿ ಕೀ ಪರಿವಾರ್ ಎಂದು ಹೇಳುತ್ತಾರೆ, ಇದೆನಾ ನಿಮ್ಮ ಪರಿವಾರ. ಕತುವಾ, ಮಣಿಪುರ ಸೇರಿದಂತೆ ಅನೇಕ ಘಟನೆಗಳು ನಡೆದವು ಆದರೆ ದೇಶದ ಪ್ರಧಾನಿಗಳು ಇವುಗಳ ಬಗ್ಗೆ ಮಾತೇ ಆಡುತ್ತಿಲ್ಲ. ನಾಲ್ಕುಕ್ಕೂ ಹೆಚ್ಚು ಸಂತ್ರಸ್ತೆಯರು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದಾರೆ. ಇವರೆಲ್ಲಾ ಕಾರ್ಯಕರ್ತರು, ಕೆಲಸ ಕೇಳಿಕೊಂಡು ಹೋದವರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ರೀತಿಯ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಶೋಷಣೆ ಮಾಡಿದ್ದಾನೆ. ಇಷ್ಟೆಲ್ಲಾ ಮಾಹಿತಿ ಗೊತ್ತಿದ್ದರೂ ಸಹ ಬಿಜೆಪಿ ಏಕೆ ಟಿಕೆಟ್ ನೀಡಿದೆ” ಎಂದು ತೀವ್ರ ವಾಗ್ದಾಳಿ ನಡೆಸಿದರು.

“ವಿಜಯೇಂದ್ರ ಅವರೇ ನಿಮ್ಮ ಮನೆಯಲ್ಲಿ ಹೆಣ್ಣುಮಕ್ಕಳಿಲ್ಲವೇ?, ಶೋಭಕ್ಕ ಎಲ್ಲಿದ್ದೀರಿ? ಬಿಜೆಪಿ, ಜೆಡಿಎಸ್ ನಾಯಕರೇ ನಿಮಗೆ ಬಾಯಿ ಇಲ್ಲವೇ? ಸುಮಲತಾ ಅವರೇ ಏಕೆ ಮೌನವಾಗಿದ್ದೀರಿ. ದೇಶದ ಪ್ರತಿಯೊಬ್ಬ ನಾಗರೀಕನು ಈ ಕೃತ್ಯ ವಿರೋಧಿಸಿ ಛೀಮಾರಿ ಹಾಕುತ್ತಿದ್ದಾರೆ” ಎಂದು ಕಿಡಿಕಾರಿದರು.

ಇದನ್ನೂ ಓದಿ; ’19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..’; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...