Homeಮುಖಪುಟಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ವಿಡಿಯೋ ಬಗ್ಗೆ ಮೊದಲೇ ಗೊತ್ತಿದ್ದೂ ಸುಮ್ಮನಿದ್ರಾ ಮೈತ್ರಿ ನಾಯಕರು?

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ವಿಡಿಯೋ ಬಗ್ಗೆ ಮೊದಲೇ ಗೊತ್ತಿದ್ದೂ ಸುಮ್ಮನಿದ್ರಾ ಮೈತ್ರಿ ನಾಯಕರು?

- Advertisement -
- Advertisement -

ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣದ ‘ಪೆನ್‌ಡ್ರೈವ್’ ಸುದ್ದಿ ದೇಶದಾದ್ಯಂತ ಭಾರೀ ಸದ್ದು ಮಾಡುತ್ತಿರುವುದು, ಗೌಡ ಕುಟುಂಬಕ್ಕೆ ಹಾಗೂ ಮೈತ್ರಿ ಪಕ್ಷ ಬಿಜೆಪಿ ನಾಯಕರಿಗೆ ಮುಜುಗರ ಅನುಭವಿಸುವಂತೆ ಮಾಡಿದೆ. ಜೆಡಿಎಸ್ ಸಂಸದರ ಅಶ್ಲೀಲ ವಿಡಿಯೋ ಪ್ರಕರಣ ಚುನಾವಣೆಗೂ ಮೊದಲೇ ಉಭಯ ಪಕ್ಷಗಳಿಗೆ ನಾಯಕರಿಗೆ ಗೊತ್ತಿದ್ದರೂ, ಮುಚ್ಚಿಟ್ಟಿದ್ಯಾಕೆ ಎಂಬ ಪ್ರಶ್ನೆ ಮೂಡಿದೆ.

ಪ್ರಜ್ವಲ್ ಪೆನ್‌ಡ್ರೈವ್‌ಗೆ ಕುರಿತು ಚುನಾವಣೆಗೂ ಮೊದಲೇ ಹಾಸನದ ಬಿಜೆಪಿ ನಾಯಕ ದೇವರಾಜೇಗೌಡ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಗಮನಕ್ಕೆ ತಂದಿದ್ದ ವಿಚಾರ ಇದೀಗ ಬಹಿರಂಗವಾಗಿದ್ದು, ಅವರು ‘ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಬೇಡಿ’ ಎಂದು ಹೇಳಿದ್ದರು. ಮೈತ್ರಿ ಮಾಡಿಕೊಂಡರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಎಂದು ಪತ್ರ ಬರೆದು ವಿನಂತಿಸಿದ್ದರು.

“ಅಶ್ಲೀಲ ವಿಡಿಯೋ ಪ್ರಕರಣ ಚುನಾವಣೆಗೆ ಎರಡು ದಿನ ಮುನ್ನವೇ ಗೊತ್ತಿತ್ತು” ಎಂದು ಬಿಜೆಪಿಯ ಮಾಜಿ ಶಾಸಕ ಸಿ.ಟಿ ರವಿ ಕೂಡ ಇಂದು ಬಾಯಿ ಬಿಟ್ಟಿದ್ದಾರೆ.

‘ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಮಾಹಿತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಗೊತ್ತಿತ್ತು’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಲೈಂಗಿಕ ಹಗರಣದ ಕುರಿತು ಮಾತನಾಡಿರುವ ಸಿಟಿ ರವಿ, “ಈ ಕೇಸ್‌ ಬಗ್ಗೆ ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟವಾಗಿ ಮಾತನಾಡಿದ್ದಾರೆ. ಮಾಜಿ ಶಾಸಕರು ಪತ್ರ ಬರೆದಿರುವ ವಿಚಾರ ನಮಗೆ ಗೊತ್ತಿಲ್ಲ. ಪ್ರಜ್ವಲ್‌ ರೇವಣ್ಣಗೆ ಟಿಕೆಟ್‌ ಕೊಟ್ಟಿರುವುದು ಜೆಡಿಎಸ್‌, ನಾವಲ್ಲ” ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ.

‘ಪ್ರಜ್ವಲ್ ಲೈಂಗಿಕ ಹಗರಣವು ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅಮಿತ್‌ ಶಾಗೂ ಗೊತ್ತಿತ್ತು: ಹೆಬ್ಬಾಳ್ಕರ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಮಾಹಿತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಗೊತ್ತಿತ್ತು. ಆದರೂ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

‘ಇದು ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರುವ ನಾಚಿಕೆಗೇಡಿನ ಕೃತ್ಯ. ಇಡೀ ರಾಜ್ಯ ತಲೆ ತಗ್ಗಿಸುವ ಕೆಲಸ ಪ್ರಜ್ವಲ್ ರೇವಣ್ಣ ಮಾಡಿದ್ದಾರೆ. ಕೇಂದ್ರ ಗೃಹಸಚಿವ ಅಮಿತ್ ಶಾ ಮೈಸೂರಿಗೆ ಬಂದಾಗ ಪ್ರೀತಂಗೌಡ ಈ ಎಲ್ಲ ವಿಷಯಗಳನ್ನು ಹೇಳಿದ್ದರು. ಅಮಿತ್ ಶಾ ಅವರಿಗೆ ಎಲ್ಲ ಗೊತ್ತಿದ್ದರೂ ಬಿಜೆಪಿಯವರು ಮೈತ್ರಿ ಮಾಡಿಕೊಂಡರು” ಎಂದು ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ.

ಇದನ್ನೂ ಓದಿ; ಹಾಸನ ಲೈಂಗಿಕ ಹಗರಣ: ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತಿಗೆ ಶಾಸಕ ಶರಣಗೌಡ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...