Homeಕರ್ನಾಟಕಪ್ರಜ್ವಲ್ ರೇವಣ್ಣ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್‌ ನಿರ್ಬಂಧ

ಪ್ರಜ್ವಲ್ ರೇವಣ್ಣ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್‌ ನಿರ್ಬಂಧ

- Advertisement -
- Advertisement -

ದೇಶದಲ್ಲೇ ಭಾರೀ ಸುದ್ದಿಯಾಗಿರುವ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ನಿರ್ಬಂಧ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳು ತಮ್ಮ ಹೆಸರು ಬಳವುದನ್ನು ನಿರ್ಬಂಧಿಸುವವಂತೆ ಕೋರಿ‌ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ. ಮಾಧ್ಯಮಗಳಲ್ಲಿ ತಮ್ಮ ಹೆಸರು ಬಳಸುವುದರಿಂದ ತಮ್ಮ ಘನತೆ, ಗೌರವಕ್ಕೆ ಧಕ್ಕೆಯಾಗುತ್ತಿದೆ. ನಮಗೆ ಸಮಾಜದಲ್ಲಿ ಉತ್ತಮ ಗೌರವ ಇದೆ. ಗೌರವಾನ್ವಿತ ಕುಟುಂಬದಿಂದ ಬಂದಿದ್ದೇವೆ. 70 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿರುವ ಕಕ್ಷಿದಾರರ ಬಗ್ಗೆ ಯಾವುದೇ ಆರೋಪಗಳಿಲ್ಲ ಎಂದು ಕೋರ್ಟ್‌ನಲ್ಲಿ ಹೇಳಲಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗುತ್ತಿದ್ದಂತೆ ರೇವಣ್ಣ ಮತ್ತು ಅವರ ಕುಟುಂಬದಿಂದ ದೇವೇಗೌಡ ಮತ್ತು ಕುಮಾರಸ್ವಾಮಿ ದೂರ ಉಳಿದಿದ್ದಾರೆ. ಫಿರ್ಯಾದಿದಾರರು ಸಾರ್ವಜನಿಕ ಹೇಳಿಕೆಗಳನ್ನು ನೀಡುವ ಮೂಲಕ ಸಮಸ್ಯೆಯಿಂದ ದೂರ ಸರಿದಿದ್ದರೂ, ಪ್ರತಿವಾದಿಗಳು ಪದೇ ಪದೇ ಮತ್ತು ಉದ್ದೇಶಪೂರ್ವಕವಾಗಿ ಲಿಂಕ್‌ ಮಾಡುತ್ತಿದ್ದಾರೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ.

ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್‌ನ ನ್ಯಾಯಾಧೀಶರು ಹೆಚ್.ಡಿ ದೇವೇಗೌಡ ಮತ್ತು ಎಚ್. ಡಿ ಕುಮಾರಸ್ವಾಮಿ ಹೆಸರು ಬಳಸಂತೆ ಎಲೆಕ್ಟ್ರಾನಿಕ್‌ ಮಾದ್ಯಮಗಳು, ಪತ್ರಿಕೆಗಳು ಮತ್ತು ಸಾಮಾಜಿಕ ಜಾಲತಾಣಗಳಿಗೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ.

ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋಗಳ ವೈರಲ್‌ ಬಳಿಕ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾನೆ. ಎಚ್‌ಡಿ ರೇವಣ್ಣ ಅವರನ್ನು ಎರಡು ದಿನಗಳ ಹಿಂದೆ ಪ್ರಜ್ವಲ್ ಲೈಂಗಿಕ ದೌರ್ಜನ್ಯ ನಡೆಸಿದ್ದ ಎನ್ನಲಾದ ಮಹಿಳೆಯನ್ನು ಅಪಹರಿಸಿರುವ ಆರೋಪದಲ್ಲಿ ಬಂಧಿಸಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ‘ಬ್ಲೂ ಕಾರ್ನರ್ ನೋಟಿಸ್’ ಜಾರಿ ಮಾಡಲಾಗಿದ್ದು, ಆತನ ಬಂಧನಕ್ಕೆ ದೇಶದಲ್ಲಿ ಭಾರೀ ಕೂಗು ಕೇಳಿ ಬಂದಿದೆ.

ಇದನ್ನು ಓದಿ: ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...