Homeಮುಖಪುಟಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಪ್ರಕಾಶ್ ಅಂಬೇಡ್ಕರ್

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಪ್ರಕಾಶ್ ಅಂಬೇಡ್ಕರ್

- Advertisement -
- Advertisement -

ಮಹಾರಾಷ್ಟ್ರದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಲೋಕಸಭೆ ಚುನಾವಣೆಯಲ್ಲಿ ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ (ವಿಬಿಎ) ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲವನ್ನು ಸೂಚಿಸಿದೆ.

ಪ್ರತಿಪಕ್ಷ ಶಿವಸೇನೆಯ ಉದ್ದವ್‌ ಬಣ ಮತ್ತು ಎನ್‌ಸಿಪಿಯ (ಶರದ್‌ ಪವಾರ್‌ ಬಣದ) ಮೇಲೆ ಅವಿಶ್ವಾಸ ವ್ಯಕ್ತಪಡಿಸಿದ ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ, ಈ ಎರಡೂ ಪಕ್ಷಗಳಲ್ಲಿ ನಂಬಿಕೆಯನ್ನು ಕಳೆದುಕೊಂಡಿದ್ದೇವೆ, ಆದ್ದರಿಂದ ಕಾಂಗ್ರೆಸ್‌ ಸ್ಪರ್ಧಿಸುವ ಏಳು ಕ್ಷೇತ್ರಗಳಲ್ಲಿ ಬೆಂಬಲವನ್ನು ಸೂಚಿಸುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಫ್ಯಾಸಿಸ್ಟ್, ವಿಭಜಕ, ಪ್ರಜಾಸತ್ತಾತ್ಮಕವಲ್ಲದ ಬಿಜೆಪಿ-ಆರೆಸ್ಸೆಸ್‌ ಸರ್ಕಾರವನ್ನು ಕಿತ್ತೊಗೆಯುವುದು ನಮ್ಮ ಪ್ರಧಾನ ಕಾರ್ಯಸೂಚಿಯಾಗಿದೆ. ಈ ಚಿಂತನೆಯೊಂದಿಗೆ ಮಹಾರಾಷ್ಟ್ರದ 7 ಸ್ಥಾನಗಳಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ವಂಚಿತ್ ಬಹುಜನ ಅಘಾಡಿಯ ಸಂಪೂರ್ಣ ಬೆಂಬಲವನ್ನು ನೀಡಲು ನಾನು ನಿರ್ಧರಿಸಿದ್ದೇನೆ. ನಿಮ್ಮ ಆಯ್ಕೆಯ ಈ 7ಸ್ಥಾನಗಳಲ್ಲಿ ನಿಮ್ಮ ಪಕ್ಷದ ಅಭ್ಯರ್ಥಿಗಳಿಗೆ ನಮ್ಮ ಪಕ್ಷ  ಸಂಪೂರ್ಣ ಬೆಂಬಲವನ್ನು ಮತ್ತು ಸಹಕಾರವನ್ನು ನೀಡಲಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ಪ್ರಕಾಶ್‌ ಅಂಬೇಡ್ಕರ್‌ ಅವರು ತಿಳಿಸಿದ್ದಾರೆ.

ಎಂವಿಎ ಮತ್ತು ವಿಬಿಎ ನಡುವೆ ಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಪಕ್ಷಗಳು ಒಮ್ಮತಕ್ಕೆ ಬಂದಿಲ್ಲ ಮತ್ತು ವಿಬಿಎಗೆ ನಾಲ್ಕು ಸ್ಥಾನಗಳನ್ನು ನೀಡುವ ಪ್ರಸ್ತಾಪದಿಂದ ಅಸಮಾಧಾನಗೊಂಡಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಎರಡೂ ಪಕ್ಷಗಳು ಮೈತ್ರಿಯನ್ನು ಘೋಷಿಸಿದ ತಿಂಗಳ ನಂತರ ಠಾಕ್ರೆಯೊಂದಿಗೆ ಪ್ರಕಾಶ್‌ ಅಂಬೇಡ್ಕರ್ ಅವರಿಗೆ ಭಿನ್ನಾಭಿಪ್ರಾಯ ಬಂದಿದೆ.

ಪ್ರತಿಪಕ್ಷಗಳ ಮೈತ್ರಿಕೂಟವಾದಿ ಮಹಾ ವಿಕಾಸ್ ಅಘಾಡಿಯನ್ನು 2019ರ ವಿಧಾನ ಸಭೆ ಚುನಾವಣೆಗಳ ಬಳಿಕ ರೂಪಿಸಲಾಯಿತು. ಈ ಮೈತ್ರಿಕೂಟ ಮುಖ್ಯವಾಗಿ ಶಿವಸೇನೆಯ ಉದ್ಧವ್ ಠಾಕ್ರೆ ಬಣ, ಕಾಂಗ್ರೆಸ್ ಹಾಗೂ ಶರದ್ ಪವಾರ್ ಅವರ ಎನ್ಸಿಪಿ ಬಣವನ್ನು ಒಳಗೊಂಡಿದೆ. ಜನವರಿಯಲ್ಲಿ ಶಿವಸೇನೆ(ಉದ್ಧವ್ ಬಣ) ಸಂಸದ ಸಂಜಯ್ ರಾವತ್ ಅವರು ವಂಚಿತ್ ಬಹುಜನ ಅಘಾಡಿಯನ್ನು ಮೈತ್ರಿಕೂಟಕ್ಕೆ ಸೇರಲಿದೆ ಎಂದು ಹೇಳಿದ್ದರು. ಆದರೆ ಇದೀಗ ವಂಚಿತ್ ಬಹುಜನ ಅಘಾಡಿ ಕಾಂಗ್ರೆಸ್‌ಗೆ ಮಾತ್ರ ಬೆಂಬಲವನ್ನು ಸೂಚಿಸಿದೆ.

ಇದನ್ನು ಓದಿ: ಮೋದಿ ರೋಡ್‌ಶೋ ವೇಳೆ ನೀತಿ ಸಂಹಿತೆ ಉಲ್ಲಂಘನೆ: ಕೇಸರಿ ಬಟ್ಟೆ ಧರಿಸಿ ಶಾಲಾ ಮಕ್ಕಳು ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...