HomeಅಂಕಣಗಳುKarnataka against SIRSIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

- Advertisement -
- Advertisement -

“ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ,” ಎಂದು ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಚುನಾವಣಾ ಆಯೋಗದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆ ಮಂಗಳವಾರ ಆಯೋಜಿಸಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯ ಅಂಗವಾಗಿ ಅವರು ಬೆಂಗಳೂರಿನ ಬಾಪೂಜಿನಗರದಲ್ಲಿ ಸಂತ್ರಸ್ತ ಮತದಾರರೊಂದಿಗೆ ಸಂವಾದ ನಡೆಸಿದರು.

‘ನಾವೇನೂ ಕಳ್ಳರಲ್ಲ’

ಸಂವಾದದಲ್ಲಿ ಸಂತ್ರಸ್ತರ ಅಳಲನ್ನು ಆಲಿಸಿ ಮಾತನಾಡಿದ ಪ್ರಕಾಶ್ ರಾಜ್, “ಆಧಾರ್ ಕಾರ್ಡ್ ಸೇರಿದಂತೆ ಎಲ್ಲಾ ಅಧಿಕೃತ ದಾಖಲೆಗಳನ್ನು ಹೊಂದಿದ್ದರೂ ಜನರನ್ನು ಅನುಮಾನದಿಂದ ನೋಡುವುದು ಅವರ ಸ್ವಾಭಿಮಾನ ಮತ್ತು ಗೌರವಕ್ಕೆ ಧಕ್ಕೆ ತರುತ್ತಿದೆ. ನಾವೇನೋ ಕಳ್ಳರು, ಎಲ್ಲಿಂದಲೋ ಬಂದುಬಿಟ್ಟಿದ್ದೇವೆ, ಮೋಸ ಮಾಡಿಕೊಂಡು ವೋಟರ್ ಕಾರ್ಡ್ ತೆಗೆದುಕೊಂಡಿದ್ದೇವೆ ಎಂಬಂತೆ ನಮ್ಮನ್ನು ನಡೆಸಿಕೊಳ್ಳಲಾಗುತ್ತಿದೆ,” ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ನೇರವಾಗಿ ಪ್ರಶ್ನಿಸಿದ ಅವರು, “ಭಾರತ ನಮ್ಮ ಮನೆ, ನಮ್ಮ ದೇಶ, ನಾವು ಇಲ್ಲೇ ಹುಟ್ಟಿದವರು. ಆದರೂ, ಈಗ ನಾವು ಈ ದೇಶದವರು ಎಂದು ಸಾಬೀತುಪಡಿಸಿಕೊಳ್ಳಬೇಕಾದ ದುಸ್ಥಿತಿ ಬಂದಿದೆ. ನಾವಿಲ್ಲಿಯವರಲ್ಲ ಎಂದರೆ ನಮ್ಮನ್ನು ಎಲ್ಲಿಗೆ ಕಳುಹಿಸುತ್ತೀರಿ?” ಎಂದು ಖಾರವಾಗಿ ಪ್ರಶ್ನಿಸಿದರು.

‘ಒಂದೂವರೆ ಕೋಟಿ ಸಂತ್ರಸ್ತರಲ್ಲಿ ನಾನೂ ಒಬ್ಬ’

ಎಸ್‌ಐಆರ್ ಪ್ರಕ್ರಿಯೆಯ ಅಗತ್ಯವನ್ನೇ ಪ್ರಶ್ನಿಸಿದ ನಟ, “ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಕೊಂಡವರನ್ನು ತೆಗೆದುಹಾಕುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ದಶಕಗಳಿಂದ ಇಲ್ಲೇ ವಾಸವಾಗಿರುವ ಅರ್ಹ ನಾಗರಿಕರನ್ನು ಯಾಕೆ ಪಟ್ಟಿಯಿಂದ ಹೊರಗಿಡಬೇಕು? ಈಗಾಗಲೇ ಮತದಾರರಾಗಿರುವವರನ್ನೇ ಮತ್ತೆ ಮತದಾರರೆಂದು ಸಾಬೀತುಪಡಿಸಲು ಒತ್ತಾಯಿಸುತ್ತಿರುವುದು ಏಕೆ?” ಎಂದು ಆಕ್ಷೇಪಿಸಿದರು.

“ಎಸ್‌ಐಆರ್‌ನಿಂದ ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯ ಜನರು ಸಂತ್ರಸ್ತರಾಗಿದ್ದಾರೆ. ರಾಜ್ಯದ ಸುಮಾರು ಒಂದೂವರೆ ಕೋಟಿ ಕನ್ನಡಿಗರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ, ಅವರಲ್ಲಿ ನಾನೂ ಒಬ್ಬ,” ಎಂದರು.

‘ನಮಗಾಗಿ ನಾವೇ ಹೋರಾಡಬೇಕು’

ಸಂತ್ರಸ್ತರಿಗೆ ಧೈರ್ಯ ತುಂಬಿದ ಪ್ರಕಾಶ್ ರಾಜ್, ರಾಜ್ಯದಲ್ಲಿ ಚುನಾವಣೆಗೆ ಇನ್ನು ಎರಡು ವರ್ಷ ಸಮಯವಿದೆ. ಅದಕ್ಕೂ ಮುಂಚೆಯೇ ಈ ರೀತಿಯ ತಪ್ಪುಗಳನ್ನು ಎಸಗಲಾಗಿದೆ. ನಿಮ್ಮ ಜೊತೆ ನಾವೆಲ್ಲರೂ ಇದ್ದೇವೆ. ನಾವು ರಾಜಕಾರಣಿಗಳಲ್ಲ, ನಮಗೆ ರಾಜಕೀಯ ಪಕ್ಷಗಳ ಹಂಗೂ ಬೇಕಿಲ್ಲ. ನಮಗಾಗಿ ನಾವೇ ಹೋರಾಟ ಮಾಡಬೇಕು. ಈ ಹೋರಾಟದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ, ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...