HomeಅಂಕಣಗಳುKarnataka against SIRಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ ನೂರಾರು ಎಸ್‌ಐಆರ್ ಸಂತ್ರಸ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿದ್ದ ಧರಣಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸುವಂತೆ ಚುನಾವಣಾ ಆಯೋಗದ ಪ್ರತಿನಿಧಿಗಳಿಗೆ ಒಕ್ಕೂಟದಿಂದ ಆಹ್ವಾನ ನೀಡಲಾಗಿತ್ತು. ಆದರೆ, ಆಯೋಗದಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ ಸಂತ್ರಸ್ತರು ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದರು.
ಈ ಮುತ್ತಿಗೆ ಹೋರಾಟದಲ್ಲಿ ನಟ ಕಿಶೋರ್ ಕುಮಾರ್, ಹಿರಿಯ ಸಾಹಿತಿ ಎಲ್. ಎನ್. ಮುಕುಂದರಾಜ್, ದಸಂಸ ಹಿರಿಯ ನಾಯಕ ಎನ್. ವೆಂಕಟೇಶ್, ಜನಶಕ್ತಿ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಸೇರಿದಂತೆ ರಾಜ್ಯದ ದಲಿತ, ರೈತ, ಮಹಿಳಾ ಮತ್ತು ಭಾಷಾ ಚಳವಳಿಯ ಪ್ರಮುಖ ಮುಖಂಡರು ಭಾಗವಹಿಸಿದ್ದರು.

ಒಕ್ಕೂಟದ ಪ್ರಮುಖ ಹಕ್ಕೊತ್ತಾಯಗಳು:

ಸಾಕಷ್ಟು ಸಮರ್ಥ ಕಾರಣವಿಲ್ಲದೆ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಹೊರದಬ್ಬಬಾರದು. ಡಿಲೀಟ್ ಆಗಿರುವವರಿಗೆ ಅಪೀಲ್ ಸಲ್ಲಿಸಲು ಅವಕಾಶ ನೀಡಬೇಕು ಹಾಗೂ ಅರ್ಹರನ್ನು ಸೇರಿಸಲು ಪ್ರತಿ ಬೂತಿನ ಪ್ರತಿ ಮನೆ ತಲುಪುವ ವಿಶೇಷ ಡ್ರೈವ್ ನಡೆಸಬೇಕು.

ಸ್ಥಳಾಂತರಗೊಂಡ ಮತದಾರರಿಗೆ ಫಾರಂ 8 ನೀಡಿ, ಪ್ರಸ್ತುತ ವಾಸಿಸುತ್ತಿರುವ ವಿಳಾಸಕ್ಕೇ ಮತ ವರ್ಗಾಯಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು.

ನೋಟೀಸ್ ನೀಡುತ್ತಿರುವ 43 ಲಕ್ಷ ಮತದಾರರ ಹೆಸರುಗಳನ್ನು ಕಾರಣದ ಸಮೇತ ಪ್ರಕಟಿಸಬೇಕು. ಅವರನ್ನು ಅಪರಾಧಿಗಳಂತೆ ನಡೆಸಿಕೊಳ್ಳಬಾರದು ಮತ್ತು ಎರಡಕ್ಕಿಂತ ಹೆಚ್ಚು ದಾಖಲೆಗಳನ್ನು ಕೇಳಬಾರದು.
ಗ್ರಾಮ ಹಾಗೂ ವಾರ್ಡ್ ಸಭೆಗಳನ್ನು ಸೂಕ್ತ ಪ್ರಚಾರದೊಂದಿಗೆ ಕ್ರಮಬದ್ಧವಾಗಿ ಮತ್ತು ಅರ್ಥಪೂರ್ಣವಾಗಿ ನಡೆಸಬೇಕು.

ಅಭ್ಯಂತರ ಮತ್ತು ಅಪೀಲ್ ಸಲ್ಲಿಸುವ ಅವಧಿಯನ್ನು ಕನಿಷ್ಠ ಆರು ತಿಂಗಳ ಕಾಲ ವಿಸ್ತರಿಸಬೇಕು, ಏಕೆಂದರೆ ಕರ್ನಾಟಕದ ಚುನಾವಣೆಗಳಿಗೆ ಇನ್ನು ಸಾಕಷ್ಟು ಸಮಯವಿದೆ.

ಅರ್ಹ ನಾಗರಿಕರ ಮತದಾನದ ಹಕ್ಕನ್ನು ರಕ್ಷಿಸಲು ಈ ಕೂಡಲೇ ಚುನಾವಣಾ ಆಯೋಗವು ಈ ಬೇಡಿಕೆಗಳಿಗೆ ಸ್ಪಂದಿಸಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...