Homeಮುಖಪುಟದೇವರನ್ನು ರಾಜಕೀಯದಿಂದ ದೂರವಿರಿಸಿದ್ದಕ್ಕೆ ಕೇರಳದ ಜನತೆಗೆ ಧನ್ಯವಾದಗಳು: ಪ್ರಕಾಶ್ ರಾಜ್‌

ದೇವರನ್ನು ರಾಜಕೀಯದಿಂದ ದೂರವಿರಿಸಿದ್ದಕ್ಕೆ ಕೇರಳದ ಜನತೆಗೆ ಧನ್ಯವಾದಗಳು: ಪ್ರಕಾಶ್ ರಾಜ್‌

- Advertisement -
- Advertisement -

ದೇವರನ್ನು ರಾಜಕೀಯದಿಂದ ದೂರವಿರಿಸಿದ್ದಕ್ಕೆ ಕೇರಳದ ಜನತೆಗೆ ಧನ್ಯವಾದಗಳು ಎಂದು ಬಹುಭಾಷಾ ನಟ ಪ್ರಕಾಶ್ ರಾಜ್‌ ಅವರು ಹೇಳಿದ್ದಾರೆ.

ತಿರುವನಂತಪುರಂನಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಬಹುಭಾಷಾ ನಟ ಪ್ರಕಾಶ್ ರಾಜ್‌, ನನ್ನ ಪ್ರೀತಿಯ ಕೇರಳ, ಇಲ್ಲಿ ನಾನು ಇರಲು ಸಂತಸಪಡುತ್ತೇನೆ. ನಿಮ್ಮ ಪ್ರೀತಿಗಾಗಿ ಸಂತೋಷವಾಗುತ್ತದೆ, ನೀವು ಹೊಂದಿರುವ ನಂಬಿಕೆಗಳಿಗಾಗಿ ಮತ್ತು ವಿಶೇಷವಾಗಿ ಇದು ದೇವರ ಸ್ವಂತ ನಾಡು, ಆದರೂ ನೀವು ದೇವರನ್ನು ರಾಜಕೀಯದಿಂದ ದೂರವಿರಿಸಿದ್ದೀರಿ ನಿಮಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಉತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಹಿರಿಯ ನಿರ್ದೇಶಕ ಕ್ರಿಸ್ಜ್ಟೋಫ್ ಜನುಸ್ಸಿ ಅವರಿಗೆ ನೀಡಿರುವ ಬಗ್ಗೆ ಮಾತನಾಡಿದ ಪ್ರಕಾಶ್ ರಾಜ್, ಕೆಲವೊಮ್ಮೆ ರಾಜಕೀಯ ದೃಷ್ಟಿಕೋನಗಳಲ್ಲಿ ಭಿನ್ನವಾಗಿದ್ದರೂ  ಕೇರಳ ಅವರಿಗೆ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಶ್ಲಾಘಿಸಿದರು. ರಾಜಕೀಯವು ನಮ್ಮ ಜೀವನದಲ್ಲಿ ಅದರದ್ದೇ ಆದ ಸ್ಥಾನವನ್ನು ಹೊಂದಿದೆ ಆದರೆ ಕಲೆಯು ರಾಜಕೀಯವನ್ನು ಮೀರಿದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಚಲನಚಿತ್ರೋತ್ಸವವನ್ನು ಶ್ಲಾಘಿಸಿದರು. ಸಿದ್ಧಾಂತಗಳ ಬಗ್ಗೆ ವಿವರಿಸಲು ಸಂಸತ್ತಿನಲ್ಲಿ ಇತ್ತೀಚೆಗೆ ನಡೆದ ದಾಳಿಯನ್ನು ಉಲ್ಲೇಖಿಸಿದ ಅವರು, ಆಡಳಿತ ಮತ್ತು ವಿರೋಧ ಪಕ್ಷಗಳ ನಿರೂಪಣೆಗಳನ್ನು ಮತ್ತು ಟಿಆರ್‌ಪಿಗಳಿಗಾಗಿ ಡಬ್ಬಿಯೊಂದಿಗೆ ಜೋಕರ್‌ಗಳಂತೆ ಹೋರಾಡುವ ಪತ್ರಕರ್ತರ ಬಗ್ಗೆ ಪ್ರಸ್ತಾಪಿಸಿದರು. ವಿರೋಧ ಪಕ್ಷಗಳು ಆಡಳಿತ ಪಕ್ಷವನ್ನು ಟೀಕಿಸುತ್ತದೆ. ಆಡಳಿತ ಪಕ್ಷದ ನಾಯಕರ ಜೊತೆ ಆರೋಪಿಗಳಿರುವ ಪೋಟೋಗಳಿದೆ ಎಂದು ಆಡಳಿತ ಪಕ್ಷಗಳು ಹೇಳುತ್ತಿದೆ. ಆದರೆ ಯುವಕರು ಈ ದಾಳಿ ಮಾಡಲು ಕಾರಣವೇನು ಎಂದು ಚರ್ಚಿಸುವ ಅಗತ್ಯ ಇರುತ್ತದೆ. ನಿರುದ್ಯೋಗಿಯಾಗಿರುವುದು, ಮಣಿಪುರದ ವಿಚಾರದಲ್ಲಿ ಉತ್ತರ ಸಿಗದಿರುವುದು ಎಷ್ಟು ಹತಾಶೆಯನ್ನು ಉಂಟುಮಾಡುತ್ತದೆ ಎಂಬುದರ ಬಗ್ಗೆ ಅವಲೋಕಿಸಿದ್ದೇವೆಯೇ?  ಈ ಪರಿಸ್ಥಿತಿಗಳಲ್ಲಿ ನಿಮ್ಮೆಲ್ಲರ ನಡುವೆ ಇರುವುದು, ಚರ್ಚಿಸುವುದು, ನೋಡುವುದು ಮತ್ತು ಕೇಳುವುದು ಸಂತಸ ತಂದಿದೆ ಎಂದು ಅವರು ಕೇರಳದ ಜನರಿಗೆ ಹೇಳಿದರು.

ಡಿ.8ರಿಂದ 15ರವೆರೆಗೆ ತಿರುವನಂತಪುರಂನಲ್ಲಿ 28ನೇ ಕೇರಳದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆದಿದೆ. ಉತ್ಸವದಲ್ಲಿ 175 ಚಲನಚಿತ್ರಗಳನ್ನು ಪ್ರದರ್ಶಿಸಲಾಯಿತು ಮತ್ತು ಈವೆಂಟ್‌ನಲ್ಲಿ ಸುಮಾರು 14,000 ಜನರು ಭಾಗವಹಿಸಿದ್ದರು. ಸಮಾರಂಭದಲ್ಲಿ ಏಸ್ ಪೋಲಿಷ್ ಚಲನಚಿತ್ರ ನಿರ್ಮಾಪಕ ಕ್ರಿಸ್ಜ್ಟೋಫ್ ಜನುಸ್ಸಿ ಅವರು ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆಗಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...