Homeಕರ್ನಾಟಕಕಚೇರಿಯಿಂದ ಅಂಬೇಡ್ಕರ್‌, ವಾಲ್ಮೀಕಿ ಫೋಟೋ ತೆಗೆಸಿದ ಆರೋಪ : ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಕಚೇರಿಯಿಂದ ಅಂಬೇಡ್ಕರ್‌, ವಾಲ್ಮೀಕಿ ಫೋಟೋ ತೆಗೆಸಿದ ಆರೋಪ : ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಆಕ್ರೋಶ

- Advertisement -
- Advertisement -

ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಅವರು ತಮ್ಮ ಕಚೇರಿಯಲ್ಲಿದ್ದ ವಾಲ್ಮಿಕಿ ಮಹರ್ಷಿ ಮತ್ತು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಫೋಟೊಗಳನ್ನು ತೆಗೆಸಿರುವ ಆರೋಪ ಕೇಳಿ ಬಂದಿದೆ.

ಪ್ರಲ್ಹಾದ್ ಜೋಶಿ ಅವರು ತಮ್ಮ ಕಚೇರಿಯಿಂದ ಅಂಬೇಡ್ಕರ್‌ ಮತ್ತು ವಾಲ್ಮಿಕಿ ಫೋಟೊ ತೆಗೆಸಿದ್ದಾರೆ ಎಂದು ವಿಡಿಯೋ ಒಂದನ್ನು ಕನ್ನಡ ಸುದ್ದಿ ವಾಹಿನಿ ಪ್ರಸಾರ ಮಾಡಿದ್ದು, ಈ ಸುದ್ದಿಯನ್ನು ಕಾಂಗ್ರೆಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

“ಬಿಜೆಪಿ & ಆರೆಸ್ಸೆಸ್‌ಗೆ ಅಂಬೇಡ್ಕರ್ ಕಂಡರೆ ಕೋಪ, ಬಸವಣ್ಣನ ಕಂಡರೆ ದ್ವೇಷ, ವಾಲ್ಮೀಕಿಯನ್ನು ಕಂಡರೆ ಅಸಹನೆ. ಸಂಘ ಪರಿವಾರದ ಮುದ್ದಿನ ಕೂಸಾದ ಪ್ರಲ್ಹಾದ್ ಜೋಶಿ ಅವರು ತಮ್ಮೊಳಗಿನ ಲಿಂಗಾಯತ, ದಲಿತ, ಹಿಂದುಳಿದ ವರ್ಗಗಳ ಮೇಲಿನ ದ್ವೇಷವನ್ನು ಮಹನೀಯರ ಫೋಟೋವನ್ನು ಹೊರಹಾಕುವ ಮೂಲಕ ವ್ಯಕ್ತಪಡಿಸಿದ್ದಾರೆ” ಎಂದು ಕಾಂಗ್ರೆಸ್ ಬರೆದುಕೊಂಡಿದೆ.

“ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಅಡಿಯಲ್ಲೇ ಚುನಾವಣೆ ನಿಂತಿದ್ದರೂ, ಅಂಬೇಡ್ಕರ್ ರನ್ನು ಆಚೆ ಎಸೆಯುವ ಸಂಘದ ಮನಸ್ಥಿತಿಯನ್ನು ನಾಡಿನ ಜನತೆ ಸಹಿಸುವುದಿಲ್ಲ. ಬಿಜೆಪಿ ಹಾಗೂ ಜೋಷಿಯ ದುರಹಂಕಾರ ಪರಮಾವಧಿಗೆ ತಲುಪಿದೆ, ಜನತೆ ಬಿಜೆಪಿಯನ್ನು ಹೆಸರಿಲ್ಲದಂತೆ ನಿರ್ನಾಮ ಮಾಡಲಿದ್ದಾರೆ” ಎಂದಿದೆ.

ಈ ಕುರಿತು ಪ್ರಲ್ಹಾದ್ ಜೋಶಿಯಾಗಲಿ, ಬಿಜೆಪಿಯಾಗಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ : ‘ನಕಲಿ ಎನ್ನುವುದಕ್ಕೆ ಅದು ನಿಮ್ಮ ಡಿಗ್ರಿ ಅಲ್ಲ..; ಶಿವಸೇನೆ ಕುರಿತ ಮೋದಿ ಟೀಕೆಗೆ ಉದ್ಧವ್ ತಿರುಗೇಟು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಒಂದು ವರ್ಷ: ನೆಮ್ಮದಿಯ ಬದುಕಿಗಾಗಿ ಇನ್ನೂ ಹೆಣಗಾಡುತ್ತಿರುವ ಜನರು

0
ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭಗೊಂಡು ಇಂದಿಗೆ (ಮೇ 3, 2024) ಒಂದು ವರ್ಷ ಪೂರ್ಣಗೊಂಡಿದೆ. ಭಾರತದ ಈಶಾನ್ಯದಲ್ಲಿರುವ ಪ್ರಶಾಂತವಾದ ಬೆಟ್ಟ ಗುಡ್ಡಗಳಾವೃತ ಪುಟ್ಟ ರಾಜ್ಯದ ಮೇ 3, 2023ರಿಂದ ಹಿಂಸಾಚಾರದ ಸುಳಿಯಲ್ಲಿ ಸಿಲುಕಿ ಹೆಣಗಾಡುತ್ತಿದೆ....