Homeಕರ್ನಾಟಕಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಉ.ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಮಾಡಿಸಿದ್ದಾರೆ: ಸುನೀಲ್ ಕುಮಾರ್

ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಉ.ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಮಾಡಿಸಿದ್ದಾರೆ: ಸುನೀಲ್ ಕುಮಾರ್

- Advertisement -
- Advertisement -

”ಪ್ರಮೋದ್ ಮುತಾಲಿಕ್ ಈ ಹಿಂದೆ ಅನಂತಕುಮಾರ್ ವಿರುದ್ಧ ಸ್ಪರ್ಧೆ ಮಾಡಿದ್ದರು. ಇವತ್ತು ಕಾರ್ಕಳದಲ್ಲಿ ಸ್ಪರ್ಧೆ ಮಾಡಿದ್ರಿ, ಲೋಕಸಭಾ ಚುನಾವಣೆಯಲ್ಲಿ ಎಲ್ಲಿಗೆ ಡೀಲ್‌ಗೆ ಹೊರಟಿದ್ದೀರಿ? ಪ್ರಮೋದ್ ಮುತಾಲಿಕ ಒಬ್ಬ ಡೀಲ್ ಮಾಸ್ಟರ್” ಎಂದು ಚುನಾವಣೆ ಬಳಿಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಸುನಿಲ್ ಮಾತನಾಡಿದ್ದು, ”ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಕಾಂಗ್ರೆಸ್‌ ಜತೆ ಸೇರಿಕೊಂಡು ಹಣ ಪಡೆದು ಬಿಜೆಪಿಯ ವಿರುದ್ಧ ಕಾರ್ಕಳದಲ್ಲಿ ಸ್ಪರ್ಧಿಸಿ ಸೋತಿರುವ ಪ್ರಮೋದ್ ಮುತಾಲಿಕ್ ಒರ್ವ ಡೀಲ್ ಮಾಸ್ಟರ್, ಹಣಕ್ಕಾಗಿ ಅವರು ಏನು ಬೇಕಾದರೂ ಮಾಡುವ ಮನಸ್ಥಿತಿಯುಳ್ಳವರು” ಎಂದು ಮುತಾಲಿಕ್ ವಿರುದ್ಧ ವಾಗ್ದಾಳಿ ನಡೆಸಿದರು.

”ಪ್ರಮೋದ್ ಮುತಾಲಿಕ್ ಪ್ರಹ್ಲಾದ್ ಜೋಷಿ, ಅನಂತ್ ಕುಮಾರ್ ವಿರುದ್ಧ ಸ್ಪರ್ಧಿಸಿ ಸೋತರು. ಎಲ್ಲಾ ಕಡೆಗಳಲ್ಲಿ ಸೋತು ಡೀಲ್ ಕುದುರಿಸುವವರು, ಟೈಗರ್ ಗ್ಯಾಂಗ್ ಹೆಸರಿನಲ್ಲಿ ಉತ್ತರ ಕರ್ನಾಟಕದಲ್ಲಿ ಹಿಂದುಗಳ ಹತ್ಯೆಯನ್ನು ಮಾಡಿಸಿದ್ದಾರೆ, ಆ ಹತ್ಯೆ ಮಾಡಿದ ಕೊಲೆಗಡುಗರು ಈಗಲೂ ಗುಲ್ಬರ್ಗಾ ಜೈಲಿನಲ್ಲಿದ್ದಾರೆ ದಾಖಲೆಗಳು ಬೇಕಾ?” ಎಂದು ಮುತಾಲಿಕ್‌ ಅವರನ್ನು ಪ್ರಶ್ನಿಸಿದರು.

”ಪ್ರಮೋದ್ ಮುತಾಲಿಕ್ ಅವರು ಕಾಂಗ್ರೆಸ್​ನವರಿಂದ ಹಣ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದರು. ನನ್ನ ವಿರುದ್ಧ ಸಾಕಷ್ಟು ಪ್ರತಿ ತಂತ್ರಗಳನ್ನು ಹೂಡಲಾಗಿತ್ತು. ಜನರಿಗೆ ನನ್ನ ಅಭಿವೃದ್ಧಿ ಕೆಲಸಗಳ ಬಗ್ಗೆ ತಪ್ಪು ಮಾಹಿತಿ ನೀಡುತ್ತಾ ಜನರನ್ನು ನಂಬಿಸುವ ಪ್ರಯತ್ನ ಮಾಡಿದ್ದರು. ಆದರೆ ಜನ ಕೊನೆಯಲ್ಲಿ ಸರಿಯಾದ ಉತ್ತರ ನೀಡಿದ್ದಾರೆ ಎನ್ನುವ ಮೂಲಕ ಹೊಸ ಬಾಂಬ್ ಹಾಕಿದ್ದಾರೆ. ಇತ್ತ ಸುನಿಲ್ ಆರೋಪಗಳಿಗೆ ದೇವರೇ ಉತ್ತರ ನೀಡಬೇಕು ಎಂದು ಪ್ರಮೋದ್ ಮುತಾಲಿಕ್ ದೇವರ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ನೊಂದ ಹಿಂದೂ ಕಾರ್ಯಕರ್ತರು ಹೆಸರಿನಲ್ಲಿ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಹಾರ

ಪ್ರಜಾಪ್ರಭುತ್ವ ಮೇಲೆ ನಂಬಿಕೆ ಹಾಗೂ ಕಾರ್ಕಳ ತಾಲೂಕಿನ ಅಭಿವೃದ್ಧಿಗೆ ಮತ ನೀಡಿದ್ದೀರಿ ಅದಕ್ಕಾಗಿ ಮತದಾರರಿಗೆ ಹಾಗೂ ಕಾರ್ಯಕರ್ತರ ಪರಿಶ್ರಮಕ್ಕೆ ಧನ್ಯವಾದ ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಮತಕ್ಷೇತ್ರದಿಂದ ಬಿಜೆಪಿಯ ಸುನೀಲ್ ಕುಮಾರ್ ವಿರುದ್ಧ ಪಕ್ಷೇತರರಾಗಿ ಪ್ರಮೋದ್ ಮುತಾಲಿಕ್ ಸ್ಪರ್ಧೆ ಮಾಡಿದ್ದರು. ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್ ಅವರ ವಿರುದ್ಧ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದರು.

ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್​ ವಿರುದ್ಧ ನೇರ ನೇರ ವಾಗ್ದಾಳಿ ನಡೆಸಿದ ಮುತಾಲಿಕ್, ಸುನಿಲ್ ವಿರುದ್ಧ ಹೊಸ ವಿವಾದಗಳನ್ನು ಸೃಷ್ಟಿಸಿದ್ದರು. ”ಅಭಿವೃದ್ಧಿ ಹೆಸರಿನಲ್ಲಿ ಕಾರ್ಕಳದಲ್ಲಿ ಸುನಿಲ್ ಕುಮಾರ್ ಏನು ಮಾಡಿಲ್ಲ, ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನಗಳನ್ನ ಸಮರ್ಪಕವಾಗಿ ಬಳಸಿಕೊಂಡಿಲ್ಲ” ಎನ್ನುವ ದೂರುಗಳ ಜೊತೆ ಹಿಂದೂ ಕಾರ್ಯಕರ್ತರನ್ನ ಕಡೆಗಣಿಸಿದ್ದಾರೆ. ದುರಹಂಕಾರದ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಹೇಳಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರಪ್ರದೇಶ: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಢಿಕ್ಕಿ: ಇಬ್ಬರು ಮೃತ್ಯು

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ಪುತ್ರ ಕೈಸರ್‌ಗಂಜ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರಣ್‌ ಭೂಷಣ್‌ ಸಿಂಗ್‌ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ...