Homeಕರ್ನಾಟಕಪ್ರಣವ್ ಮೊಹಾಂತಿ ವರ್ಗಾವಣೆ ತೀರ್ಮಾನವಾಗಿಲ್ಲ, ಧರ್ಮಸ್ಥಳ ಪ್ರಕರಣದಲ್ಲಿ ಸತ್ಯಾಂಶವೇ ಮುಖ್ಯ: ಗೃಹ ಸಚಿವ ಪರಮೇಶ್ವರ್

ಪ್ರಣವ್ ಮೊಹಾಂತಿ ವರ್ಗಾವಣೆ ತೀರ್ಮಾನವಾಗಿಲ್ಲ, ಧರ್ಮಸ್ಥಳ ಪ್ರಕರಣದಲ್ಲಿ ಸತ್ಯಾಂಶವೇ ಮುಖ್ಯ: ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ (SIT) ಮುಖ್ಯಸ್ಥ, ಡಿಜಿಪಿ ಪ್ರಣವ್ ಮೊಹಾಂತಿ ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರ್ಕಾರದ ನಿಯೋಜಿತ ಪಟ್ಟಿಯಲ್ಲಿ ಅವರ ಹೆಸರಿದ್ದರೂ, ಈ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಡಿಜಿ ಹಂತದ ಅಧಿಕಾರಿಯನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ನೇಮಿಸಬೇಕೆಂದು ಸರ್ಕಾರ ತೀರ್ಮಾನಿಸಿತ್ತು. ಅದರಂತೆ ಪ್ರಣವ್ ಮೊಹಾಂತಿಯವರನ್ನು ನೇಮಿಸಲಾಯಿತು. ಆದರೆ, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಈ ವಿಚಾರದಲ್ಲಿ ಸೋಷಿಯಲ್ ಮೀಡಿಯಾಗಳಲ್ಲಿ ತಪ್ಪುಕಲ್ಪನೆಗಳನ್ನು ಹರಡಲಾಗುತ್ತಿದೆ, ಇದು ಸರಿಯಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಧರ್ಮಸ್ಥಳ ಪ್ರಕರಣ: ರಾಜಕೀಯ ಹಸ್ತಕ್ಷೇಪ ಇಲ್ಲ

ಧರ್ಮಸ್ಥಳ ಪ್ರಕರಣದಲ್ಲಿ ಸತ್ಯಾಂಶ ಹೊರಬರುವುದಷ್ಟೇ ಸರ್ಕಾರದ ಮುಖ್ಯ ಉದ್ದೇಶ. ಈ ನಿಟ್ಟಿನಲ್ಲಿಯೇ ಎಸ್‌ಐಟಿ ರಚಿಸಲಾಗಿದೆ. ತನಿಖೆ ಪಾರದರ್ಶಕವಾಗಿ ನಡೆಯಬೇಕು ಮತ್ತು ವರದಿ ಸಲ್ಲಿಸಿದ ನಂತರ ಸತ್ಯಾಸತ್ಯತೆ ಹೊರಬರಬೇಕು ಎನ್ನುವುದು ಸರ್ಕಾರದ ನಿಲುವಾಗಿದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಯಾರನ್ನೂ ರಕ್ಷಿಸುವ ಅಥವಾ ಸಿಕ್ಕಿಹಾಕಿಸುವ ಅಜೆಂಡಾ ಸರ್ಕಾರಕ್ಕೆ ಖಂಡಿತ ಇಲ್ಲ ಎಂದು ಸಚಿವರು ಖಚಿತಪಡಿಸಿದರು. ಯಾರು ಕೂಡ ಈ ವಿಷಯವನ್ನು ತಪ್ಪು ಭಾವನೆಯಿಂದ ನೋಡಬಾರದು ಎಂದು ಅವರು ಮನವಿ ಮಾಡಿದರು.

ಒಳ ಮೀಸಲಾತಿ ಮತ್ತು ಇತರ ವಿಷಯಗಳು

ಒಳ ಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸರ್ಕಾರಕ್ಕೆ ವರದಿ ಸಲ್ಲಿಸುವ ಮೊದಲು ಒಳಪಂಗಡಗಳೊಂದಿಗೆ ಚರ್ಚೆ ನಡೆಸಲು ಸಭೆ ಕರೆದಿರುವುದಾಗಿ ಗೃಹ ಸಚಿವರು ತಿಳಿಸಿದರು. ಈ ವಿಚಾರದಲ್ಲಿ ಯಾರಿಗೂ ಬೇಸರವಾಗುವುದು ಬೇಡ, ನಮ್ಮಲ್ಲಿರುವ ಅಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು. ವರದಿ ಇನ್ನೂ ಸಲ್ಲಿಸಿಲ್ಲ, ಶೀಘ್ರದಲ್ಲೇ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಶಾಸಕರು ಒಳ ಮೀಸಲಾತಿ ಬಗ್ಗೆ ಚರ್ಚೆ ಮಾಡಿಕೊಳ್ಳುವುದಕ್ಕೆ ಯಾರು ಬ್ರೇಕ್ ಹಾಕುವುದಿಲ್ಲ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಟೋಯಿಂಗ್ ಪುನರಾರಂಭ: ಬೆಂಗಳೂರು ನಗರದಲ್ಲಿ ಇಲಾಖೆ ವತಿಯಿಂದಲೇ ಟೋಯಿಂಗ್ ಸೇವೆ ಪುನರಾರಂಭಿಸುವುದಾಗಿ ಸಚಿವರು ಘೋಷಿಸಿದರು. ಈ ಹಿಂದೆ ಗುತ್ತಿಗೆ ಕಂಪನಿಗಳಿಗೆ ನೀಡಲಾಗಿದ್ದ ಟೋಯಿಂಗ್ ಅನ್ನು ಇನ್ನು ಮುಂದೆ ಪೊಲೀಸರೇ ನಿರ್ವಹಿಸಲಿದ್ದಾರೆ. ರಸ್ತೆಗಳಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆಯಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ರಸ್ತೆಗಳು ಜನರ ಓಡಾಟಕ್ಕೆ ಇವೆ, ಪಾರ್ಕಿಂಗ್‌ಗೆ ಅಲ್ಲ. ಪೊಲೀಸರು ಮಾನವೀಯತೆಯಿಂದ ವರ್ತಿಸುವಂತೆ ಸೂಚಿಸುವುದಾಗಿ ತಿಳಿಸಿದರು. ಜಟಾಪಟಿ ಉಂಟಾದರೆ ಕಾನೂನು ಬಳಸಲು ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಇತರೆ ಸುರಕ್ಷತಾ ಕ್ರಮಗಳು: ರಾಹುಲ್ ಗಾಂಧಿಯವರ ಭೇಟಿಗಾಗಿ ಪೊಲೀಸರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅವರಿಗೆ ‘Z+’ ಭದ್ರತೆ ಒದಗಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಸ್ಲೀಪರ್ ಸೆಲ್‌ಗಳ ಬಗ್ಗೆ ತನಿಖಾ ಏಜೆನ್ಸಿಗಳು ಪತ್ತೆಹಚ್ಚಿವೆ ಎಂದು ಈ ಹಿಂದೆ ವರದಿಯಾಗಿತ್ತು. ಆದರೆ, ಅಲ್-ಖೈದಾ ಸಂಪರ್ಕ ಹೊಂದಿದ್ದ ಮಹಿಳೆ ಕರ್ನಾಟಕದವರಲ್ಲ ಮತ್ತು ತನಿಖಾ ಸಂಸ್ಥೆಗಳು ಈ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ MDMA ತಯಾರಿಸುತ್ತಿದ್ದ ಆರೋಪಿಗಳು 20 ದಿನದ ಹಿಂದೆ ಮುಂಬೈಯಿಂದ ಬಂದಿದ್ದರು, ಅಲ್ಲಿನ ಸುಳಿವಿನ ಮೇರೆಗೆ ನಮ್ಮ ಪೊಲೀಸರು ಅವರನ್ನು ಹಿಡಿದಿದ್ದಾರೆ ಎಂದು ತಿಳಿಸಿದರು. ಇದು ದೇಶಾದ್ಯಂತ ನಡೆಯುವ ಪ್ರಕ್ರಿಯೆ ಎಂದು ಅವರು ಸ್ಪಷ್ಟಪಡಿಸಿದರು.

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿದಂತೆ ಎಲ್ಲಾ 7 ಆರೋಪಿಗಳ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...