Homeಮುಖಪುಟಪ್ರಶಾಂತ್ ಭೂಷಣ್ 1 ರೂ ದಂಡ ಕಟ್ಟುವರೋ, ಇಲ್ಲ ಜೈಲಿಗೆ ಹೋಗುವರೋ?

ಪ್ರಶಾಂತ್ ಭೂಷಣ್ 1 ರೂ ದಂಡ ಕಟ್ಟುವರೋ, ಇಲ್ಲ ಜೈಲಿಗೆ ಹೋಗುವರೋ?

"1 ರೂ ರಾಷ್ಟ್ರೀಯ ಚಳವಳಿಯಾಗಲಿ" ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರು ಮತ್ತು ಪ್ರಶಾಂತ್ ಭೂಷಣ್‌ರವರ ಆತ್ಮೀಯ ಒಡನಾಡಿ ಯೋಗೇಂದ್ರ ಯಾದವ್ ಘೋಷಿಸಿದ್ದಾರೆ.

- Advertisement -
- Advertisement -

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಬಗ್ಗೆ ಟೀಕಿಸಿದ್ದಕ್ಕಾಗಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ “ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ವರ್ಷಗಲ ಕಾಲ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪಿತ್ತಿದೆ.

ಬೇಷರತ್ ಕ್ಷಮೆ ಕೇಳಿದ್ದಲ್ಲಿ ಪ್ರಕರಣ ರದ್ದು ಮಾಡುವುದಾಗಿ ಮೂರು ಬಾರಿ ಸುಪ್ರೀಂ ಅವಕಾಶ ನೀಡಿದಾಗಲೂ ಪ್ರಶಾಂತ್ ಭೂಷಣ್ ದಿಟ್ಟ ದನಿಯಲ್ಲಿ ಶಿಕ್ಷೆ ಎದುರಿಸುತ್ತೇನೆ, ಕ್ಷಮೆ ಕೇಳುವುದಿಲ್ಲ ಎಂದು ನುಡಿದಿದ್ದರು.

“ತನ್ನ ಹೇಳಿಕೆಗಳು ನ್ಯಾಯಾಲಯದ ‘ರಚನಾತ್ಮಕ ವಿಮರ್ಶೆ’ಯಾಗಿದೆ. ಆದ್ದರಿಂದ ಅದನ್ನು ಹಿಂತೆಗೆದುಕೊಳ್ಳುವುದು ‘ಅಪ್ರಾಮಾಣಿಕ ಕ್ಷಮೆಯಾಚನೆ’ಯಾಗುತ್ತದೆ, ನಾನು ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ” ಎಂದು ಭೂಷಣ್ ಪದೇ ಪದೇ ಹೇಳಿದ್ದರು.

ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಪ್ರಶಾಂತ್ ಭೂಷಣ್‌ರವರ ತಂದೆ ಶಾಂತಿ ಭೂಷಣ್‌ “ದೇಶದ ದನಿಯನ್ನು ಸುಪ್ರೀಂಕೋರ್ಟು ಕೇಳಲಿ ಎಂದು ನಾನು ಕೋರಿದ್ದೆ. ಈಗ ನಾನು ದೇಶದ ಪ್ರತಿಯೊಬ್ಬ ನಾಗರಿಕರು ಒಂದು ರೂಪಾಯಿಯನ್ನು ಸುಪ್ರೀಂಕೋರ್ಟಿಗೆ ಕಳಿಸಲಿ ಎಂದು ಕೋರುತ್ತೇನೆ” ಎಂದು ಭಾರತದ ಮಾಜಿ ಕಾನೂನು ಸಚಿವರು ಹಾಗೂ ಇಂದಿರಾಗಾಂಧಿಯವರ ವಿರುದ್ಧ ಐತಿಹಾಸಿಕ ಮೊಕದ್ದಮೆಯಲ್ಲಿ ವಾದಿಸಿದ್ದ ಶಾಂತಿ ಭೂಷಣ್ ಹೇಳಿದ್ದಾರೆ.

ದೇಶಾದ್ಯಂತ ಪ್ರಶಾಂತ್ ಭೂಷಣ್ ಅವರನ್ನು ಬೆಂಬಲಿಸಿ ಇಂದು‌ ಆನ್‌ಲೈನ್‌ನಲ್ಲಿ ನಡೆದ ‘ಸತ್ಯಮೇವ ಜಯತೇ’ ಕಾರ್ಯಕ್ರಮದಲ್ಲಿ ಅವರು ಮನವಿ ಮಾಡಿದ್ದಾರೆ.

“1 ರೂ ರಾಷ್ಟ್ರೀಯ ಚಳವಳಿಯಾಗಲಿ” ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರು ಮತ್ತು ಪ್ರಶಾಂತ್ ಭೂಷಣ್‌ರವರ ಆತ್ಮೀಯ ಒಡನಾಡಿ ಯೋಗೇಂದ್ರ ಯಾದವ್ ಘೋಷಿಸಿದ್ದಾರೆ.

ತೀರ್ಪಿನಲ್ಲಿ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಹಾಗೂ ವಕೀಲಿ ವೃತ್ತಿ ನಿ‍ಷೇಧಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಭೂಷಣ್ ಯಾವುದು ಆಯ್ದುಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಸಹಜವಾಗಿ ಎದ್ದಿದೆ. ಅವರ ಒಡನಾಡಿಗಳು ಖಂಡಿತ ಅವರು ಜೈಲು ಶಿಕ್ಷೆಯನ್ನು ಆಯ್ದುಕೊಂಡು ದೇಶಕ್ಕೆ, ಹೊರಾಟಕ್ಕೆ, ಸತ್ಯಕ್ಕೆ ಮಾದರಿಯಾಗಿ ನಿಲ್ಲುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಹಿತಿ ನೀಡಲು ಸಂಜೆ ಪತ್ರಿಕಾಗೋಷ್ಠಿ ನಡೆಸುವುದಾಗಿ ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.


ಇದನ್ನೂ ಓದಿ: ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ: ಪ್ರಶಾಂತ್ ಭೂಷಣ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...