Homeಚಳವಳಿಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಬಹಳಷ್ಟು ಪ್ರಕರಣಗಳಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಪತ್ರಿಕಾ ಮಾಧ್ಯಮ (ತಾಂತ್ರಿಕ ಮಾಧ್ಯಮ) ಗಳಲ್ಲಿ ಪ್ರಸಾರವಾಗುವ ವಿಚಾರಗಳು ನಿರ್ಣಾಯಕ ಸಾಕ್ಷ್ಯವಾಗಿ ಪರಿಗಣಿಸಲು ಬರುವುದಿಲ್ಲ ಎಂದು ತೀರ್ಪನ್ನು ನೀಡಿದೆ ಎಂದು ವಕೀಲರಾದ ಅನೀಶ್ ಪಾಶರವರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ರವರ ವಿರುದ್ಧ ನೀಡಿದ ತೀರ್ಪನ್ನು ಪುನರ್ ಪರಿಶೀಲಿಸಲು ಸರ್ವೋಚ್ಚ ನ್ಯಾಯಾಲಯಕ್ಕೆ ಎಲ್ಲಾ ಪ್ರಗತಿಪರ ವಕೀಲರು ಮನವಿ ಸಲ್ಲಿಸಬೇಕೆಂದು ಪ್ರಗತಿಪರ ಚಿಂತಕ ವಕೀಲರ ವೇದಿಕೆಯ ಸಂಚಾಲಯಕರಾದ ಅನೀಸ್ ಪಾಶರವರು ಕರೆ ನೀಡಿದ್ದಾರೆ.

14-08-2020 ರಂದು ಸರ್ವೋಚ್ಚ ನ್ಯಾಯಾಲಯವು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ರವರು ತಪ್ಪಿತಸ್ತರೆಂದು ತೀರ್ಪು ನೀಡಿರುತ್ತದೆ. ಈ ತೀರ್ಪು ಇಡೀ ವಕೀಲ ವೃಂದದಲ್ಲಿ ಸಂಚಲನವನ್ನು ಮೂಡಿಸಿದ್ದು, ತುಂಬಾ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಬಹಳಷ್ಟು ಪ್ರಕರಣಗಳಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಪತ್ರಿಕಾ ಮಾಧ್ಯಮ (ತಾಂತ್ರಿಕ ಮಾಧ್ಯಮ) ಗಳಲ್ಲಿ ಪ್ರಸಾರವಾಗುವ ವಿಚಾರಗಳು ನಿರ್ಣಾಯಕ ಸಾಕ್ಷ್ಯವಾಗಿ ಪರಿಗಣಿಸಲು ಬರುವುದಿಲ್ಲ ಎಂದು ತೀರ್ಪನ್ನು ನೀಡಿದೆ. ಹಿರಿಯ ವಕೀಲರು ಮಾಡಿರುವಂತಹ ಆರೋಪಗಳು ಸರಿ ಇದೇಯೋ ಇಲ್ಲವೋ ಎಂದು ತನಿಖೆ ನಡೆಸದೆ ನೇರವಾಗಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಿ ಒಬ್ಬ ಸಾಮಾಜಿಕ ಹೋರಾಟಗಾರರಾದ ವಕೀಲರನ್ನು ಶಿಕ್ಷಿಸಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಎಂಬ ಚರ್ಚೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಭಾರತ ದೇಶದ ಇತಿಹಾಸವನ್ನು ಗಮನಿಸಿದರೆ ಸ್ವಾತಂತ್ರ್ಯ ಹೋರಾಟದಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದಾಗಿತ್ತು, ಸಂವಿಧಾನವನ್ನು ರಚನೆ ಮಾಡಿರುವಂತಹ ಬಾಬಾ ಸಾಹೇಬ್ ಅಂಬೇಡ್ಕರ್ ರವರೂ ಕೂಡ ಒಬ್ಬ ವಕೀಲರಾಗಿದ್ದರು. ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ದೇಶದ ಏಕತೆ ಮತ್ತು ಅಖಂಡತೆ ಮತ್ತು ನ್ಯಾಯಾದಾನದ ವ್ಯವಸ್ಥೆಯನ್ನು ಎತ್ತಿ ಹಿಡಿಯುವಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದಾಗಿದೆ.
ಕೊರೋನ ಕಾಯಿಲೆ ಸಲುವಾಗಿ ನ್ಯಾಯಾಲಯಗಳಲ್ಲಿ ತುರ್ತು ವಿಷಯಗಳನ್ನು ಹೊರತುಪಡಿಸಿ ಬೇರೆ ಪ್ರಕರಣಗಳನ್ನು ವಿಚಾರಣೆಗೆ ತೆಗೆದುಕೊಳ್ಳದೆ ಇರುವುದರಿಂದ ದೇಶದ ಹೆಚ್ಚಿನ ವಕೀಲರು ಆರ್ಥಿಕವಾಗಿ ಕಂಗಾಲಾಗಿದ್ದಾರೆ. ತುರ್ತು ಪ್ರಕರಣಗಳನ್ನು ಕೂಡ ಆನ್ ಲೈನ್ ಮುಖಾಂತರ ಮಂಡನೆ ಮಾಡುತ್ತಿದ್ದು, ಇಂತಹ ಸಂದರ್ಭದಲ್ಲಿ ಹಳೆಯ ಪ್ರಕರಣಗಳನ್ನು ಇತ್ಯಾರ್ಥ ಪಡಿಸುವುದನ್ನು ಬಿಟ್ಟು ಹೊಸ ಪ್ರಕರಣವನ್ನು ತರಾತುರಿಯಲ್ಲಿ ಕೈಗೆತ್ತಿಕೊಂಡು ತೀರ್ಪು ನೀಡಿರುವುದು ಇಡೀ ಭಾರತ ದೇಶದ ಜನತೆಗೆ ಆಶ್ಚರ್ಯಚಕಿತರನ್ನಾಗಿಸಿದೆ ಹಾಗೂ ನ್ಯಾಯಾಂಗ ವ್ಯವಸ್ಥೆಯ ಘನತೆಗೆ ಮತ್ತು ವಕೀಲ ವೃಂದದ ಘನತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಘನತೆಯನ್ನು ಎತ್ತಿಹಿಡಿಯುವ ಜವಾಬ್ದಾರಿ ವಕೀಲರಾದ ನಮ್ಮ ಮೇಲೆ ಹೆಚ್ಚು ಇದೆ. ಹಾಗಾಗಿ ಎಲ್ಲರೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಬೇಕೆಂದು ಕೋರಲಾಗಿದೆ ಎಂದು ಹೇಳಿಕೆಯಲ್ಲಿ ಅನೀಸ್ ಪಾಶ ತಿಳಿಸಿದ್ದಾರೆ.

ಪ್ರಶಾಂತ್ ಭೂಷಣ್ ರವರು ತಮ್ಮ ಟ್ವೀಟ್‌ಗಳಲ್ಲಿ ಆರೋಪಿಸಿದಂತಹ ಅಂಶಗಳು ಸರಿಯೋ ತಪ್ಪೋ ಎಂದು ತನಿಖೆ ಮಾಡಲು ಒಂದು ನ್ಯಾಯಮೂರ್ತಿಗಳ ತಂಡವನ್ನು ರಚಿಸಬೇಕೆಂದು, ತದನಂತರದಲ್ಲಿ ಅವರು ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಕಂಡುಬಂದಾಗ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಶಿಕ್ಷೆಯನ್ನು ವಿಧಿಸಿದರೆ ಇಡೀ ಭಾರತ ದೇಶದ ಜನತೆ ನ್ಯಾಯಾಲಯದ ಮೇಲೆ ಇಟ್ಟಿರುವ ಗೌರವ ಮತ್ತು ಘನತೆಯು ಇನ್ನೂ ಹೆಚ್ಚಾಗುವುದು ಹಾಗೂ ಸಂವಿಧಾನ ನಮಗೆ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮತ್ತು ಪ್ರಜಾ ಪ್ರಭುತ್ವವನ್ನು ನ್ಯಾಯಾಲಯ ಎತ್ತಿ ಹಿಡಿದಂತಾಗುವುದು ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯಗಳ ಮತ್ತು ವಕೀಲ ವೃಂದದ ಗೌರವವನ್ನು ಹೆಚ್ಚಿಸಲು ಮತ್ತು ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಲು ನಾವೆಲ್ಲ ಈ ತಕ್ಷಣ ಕಾರ್ಯಪ್ರವೃತ್ತರಾಗಿ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಿಗೆ ರಿಜಿಸ್ಟ್ರಾರ್ ರವರ ಮೂಲಕ ದಿನಾಂಕ:14-8-2020 ರಂದು ಪ್ರಶಾಂತ್ ಭೂಷಣ್ ರವರ ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಪುನರ್ ಪರಿಶೀಲಿಸಬೇಕು ಮತ್ತು ಪ್ರಶಾಂತ್ ಭೂಷಣ್ ರವರು ಆರೋಪಿಸಿರುವ ಆರೋಪಗಳನ್ನು ಕೂಲಂಕುಂಶವಾಗಿ ತನಿಖೆ ಮಾಡಬೇಕು ಎಂದು ಇ-ಮೇಲ್ ಮೂಲಕ ಮನವಿ ಸಲ್ಲಿಸಲು ಎಲ್ಲಾ ಪ್ರಗತಿಪರ ವಕೀಲರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಗಂಭೀರ ನ್ಯಾಯಾಂಗ ನಿಂದನೆ ಎಸಗಿದ್ದಾರೆ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...