HomeಅಂಕಣಗಳುSIRನ್ಯಾಯಾಲಯದ ಆಕ್ಷೇಪದ ಬಳಿಕವೂ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸಿ ಎಂದ ಚು. ಆಯೋಗ : ಸುಪ್ರೀಂ...

ನ್ಯಾಯಾಲಯದ ಆಕ್ಷೇಪದ ಬಳಿಕವೂ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸಿ ಎಂದ ಚು. ಆಯೋಗ : ಸುಪ್ರೀಂ ಕೋರ್ಟ್ ಗಮನಕ್ಕೆ ತಂದ ಪ್ರಶಾಂತ್ ಭೂಷಣ್

- Advertisement -
- Advertisement -

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ಪ್ರಶ್ನಿಸಿರುವ ಅರ್ಜಿದಾರರು, ಡಿಲೀಟ್ ಆದ ಮತದಾರರು ಹೊಸ ಮತದಾರರಾಗಿ ನೋಂದಾಯಿಸಿಕೊಳ್ಳಲು ಫಾರಂ 6 ಸಲ್ಲಿಸಬಹುದು ಎಂದು ಭಾರತೀಯ ಚುನಾವಣಾ ಆಯೋಗ ಇತ್ತೀಚೆಗೆ ನೀಡಿರುವ ಸ್ಪಷ್ಟೀಕರಣವನ್ನು ಇಂದು (ನ.4) ಸುಪ್ರೀಂ ಕೋರ್ಟ್‌ನ ಗಮನಕ್ಕೆ ತಂದಿದ್ದಾರೆ.

ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ನೇತೃತ್ವದ ಪೀಠದ ಮುಂದೆ ಅರ್ಜಿದಾರರ ಪರವಾಗಿ ಮೌಖಿಕವಾಗಿ ವಿಷಯ ಪ್ರಸ್ತಾಪಿಸಿದ ವಕೀಲ ಪ್ರಶಾಂತ್ ಭೂಷಣ್ ಅವರು, ನ. 3ರಂದು ಚುನಾವಣಾ ಆಯೋಗವು ಹೊರಡಿಸಿರುವ ಹೇಳಿಕೆಯು ಕಳೆದ ವಾರ ಸುಪ್ರೀಂ ಕೋರ್ಟ್ ನೀಡಿದ್ದ ಅವಲೋಕನಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

2026ರ ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಪ್ರಸ್ತುತ ಕೈಬಿಡಲಾಗಿರುವ (ಡಿಲೀಟ್ ಆಗಿರುವ) ಮತದಾರರನ್ನು ಫಾರಂ 6 ಬಳಸಿಕೊಂಡು ಹೊಸ ಮತದಾರರಾಗಿ ನೋಂದಾಯಿಸಿಕೊಳ್ಳುವಂತೆ ಒತ್ತಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಕಳೆದ ವಾರ ತಿಳಿಸಿತ್ತು ಎಂಬುದನ್ನು ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಪ್ರಶಾಂತ್ ಭೂಷಣ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಜೆಐ, ಈ ವಿಷಯವು ಸದ್ಯ ನ್ಯಾಯಾಲಯದ ಪರಿಶೀಲನೆಯಲ್ಲಿದೆ ಮತ್ತು ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಚುನಾವಣಾ ಆಯೋಗದ ಸ್ಪಷ್ಟೀಕರಣವನ್ನು ಎತ್ತಿ ತೋರಿಸುವಂತೆ ಅರ್ಜಿದಾರರಿಗೆ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಲು ಸೂಚಿಸಿದ ಸಿಜೆಐ, ಈ ವಿಷಯದ ಕುರಿತು ನ. 19ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಅಗತ್ಯ ಬಿದ್ದಲ್ಲಿ ಮತದಾನದ ನೋಂದಣಿ ಗಡುವನ್ನು ಮತ್ತಷ್ಟು ವಿಸ್ತರಿಸುವಂತೆ ಚುನಾವಣಾ ಆಯೋಗಕ್ಕೆ ನ್ಯಾಯಾಲಯವು ಸೂಚಿಸಬಹುದು ಎಂದೂ ಸಿಜೆಐ ತಿಳಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಲು ‘ಗೈರುಹಾಜರು, ವಲಸೆ ಹೋದವರು, ಮೃತಪಟ್ಟವರು ಅಥವಾ ನಕಲಿ’ (ASDD) ಪಟ್ಟಿಯಲ್ಲಿರುವ ವ್ಯಕ್ತಿಗಳು ಫಾರಂ 6 ಸಲ್ಲಿಸಬಹುದು ಎಂದು ಭಾರತೀಯ ಚುನಾವಣಾ ಆಯೋಗ ನೀಡಿದ್ದ ಸ್ಪಷ್ಟೀಕರಣದ ಹಿನ್ನೆಲೆಯಲ್ಲಿ ಈ ವಿಷಯದ ಪ್ರಸ್ತಾಪ ನ್ಯಾಯಾಲಯದಲ್ಲಿ ನಡೆದಿದೆ.

ASDD ಪಟ್ಟಿಯಲ್ಲಿ ಇರುವವರು ಫಾರಂ 8 ಅಥವಾ ಗಣತಿ ನಮೂನೆಯನ್ನು (enumeration form) ಬಳಸಲು ಅನುಮತಿಸಬೇಕು ಎಂದು ಅ. 28ರಂದು ಸುಪ್ರೀಂ ಕೋರ್ಟ್ ನೀಡಿದ್ದ ಮೌಖಿಕ ನಿರ್ದೇಶನಗಳಿಗೆ ಚುನಾವಣಾ ಆಯೋಗದ ಈ ನಿಲುವು ಸಂಪೂರ್ಣ ವಿರುದ್ಧವಾಗಿದೆ ಎಂದು ಅರ್ಜಿದಾರರಾದ ಅಂಜಲಿ ಭಾರದ್ವಾಜ್ ಮತ್ತು ಅಮೃತಾ ಜೋಹ್ರಿ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಗಣತಿ ನಮೂನೆಗಳನ್ನು (enumeration forms) ಸಲ್ಲಿಸದ ಕಾರಣಕ್ಕಾಗಿ ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಮತದಾರರು, ಫಾರಂ 6ರ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂಬ ಚುನಾವಣಾ ಆಯೋಗದ ಹಠಮಾರಿ ಧೋರಣೆಯನ್ನು ಅ. 28ರಂದು ನ್ಯಾಯಾಲಯವು ಪ್ರಶ್ನಿಸಿತ್ತು. ಮತದಾರರ ಹೆಸರುಗಳು ಹಿಂದಿನ ಮತದಾರರ ಪಟ್ಟಿಯಲ್ಲಿ ಇದ್ದಾಗ್ಯೂ, ಫಾರಂ 6 ಭರ್ತಿ ಮಾಡುವಾಗ ಅರ್ಜಿದಾರರು ‘ತಾವು ಮೊದಲ ಬಾರಿಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಕೋರುತ್ತಿದ್ದೇವೆ’ ಎಂದು ಘೋಷಿಸಬೇಕಾಗುತ್ತದೆ ಎಂಬುದನ್ನು ನ್ಯಾಯಾಲಯವು ಎತ್ತಿ ತೋರಿಸಿತ್ತು.

ನ. 3ರಂದು ನೀಡಿದ ಹೇಳಿಕೆಯಲ್ಲಿ, ಮತದಾರರ ಪಟ್ಟಿಯಿಂದ ಕೈಬಿಡಲಾದ ವ್ಯಕ್ತಿಯೊಬ್ಬರು ‘ಫಾರ್ಮ್ 6’ ಸಲ್ಲಿಸುವುದು, ಅವರು ಈ ಹಿಂದೆ ಮತ ಚಲಾಯಿಸಿದ್ದರೂ ಸಹ, ಸುಳ್ಳು ಘೋಷಣೆ ನೀಡಿದಂತಾಗುವುದಿಲ್ಲ ಎಂದು ಚುನಾವಣಾ ಆಯೋಗ ಪ್ರತಿಪಾದಿಸಿದೆ.

ನಿಲೋತ್ಪಾಲ್ ದತ್ತಾ V/s ಚುನಾವಣಾ ಆಯೋಗ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಮಾಡಿದ್ದ ಅವಲೋಕನವನ್ನು ಚುನಾವಣಾ ಆಯೋಗ ಇಲ್ಲಿ ಉಲ್ಲೇಖಿಸಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಫಾರಂ 6 ಬಳಸುವ ವ್ಯಕ್ತಿಗಳು ಸುಳ್ಳು ಘೋಷಣೆಯ ಆರೋಪದಡಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂಬ ಭಯ ಪಡುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿತ್ತು. ಈ ಹಿಂದೆ ಮತ ಚಲಾಯಿಸಿದ್ದಾರೆ ಎಂಬ ಒಂದೇ ಕಾರಣಕ್ಕಾಗಿ ಅಂತಹ ವ್ಯಕ್ತಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ.

















ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡಕ್ಕಿಂತ ಹೆಚ್ಚು ಮಕ್ಕಳು ಹೊಂದುವುದನ್ನು ದಂಡನೀಯವಾಗಿಸುವ ಕಾನೂನುಗಳು ಪ್ರಸ್ತುತತೆ ಕಳೆದುಕೊಂಡಿವೆ : ಸುಪ್ರೀಂ ಕೋರ್ಟ್

ಭಾರತದ ಕುಸಿಯುತ್ತಿರುವ ಫಲವತ್ತತೆ ದರವನ್ನು (fertility rate) ಗಮನದಲ್ಲಿಟ್ಟುಕೊಂಡು, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ವ್ಯಕ್ತಿಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸುವ ಕಾನೂನುಗಳು ತಮ್ಮ ಪ್ರಸ್ತುತತೆಯನ್ನು ಕಳೆದುಕೊಂಡಿವೆ ಎಂದು ಸುಪ್ರೀಂ ಕೋರ್ಟ್...

ಅಮೆರಿಕ ಮಧ್ಯಂತರ ಚುನಾವಣೆ : ಜಗತ್ತಿನ ಗಮನ ಸೆಳೆದ ಅಬ್ದುಲ್ ಸಯೀದ್, ಡೆಬ್ ಹಾಲೆಂಡ್ ಮತ್ತು ಇಲ್ಹಾನ್ ಉಮರ್ ಆಯ್ಕೆ!

ಅಮೆರಿಕದ ರಾಜಕೀಯ ಅಖಡಾದಲ್ಲಿ ಭಾರಿ ಕುತೂಹಲ ಮೂಡಿಸಿದ್ದ 2026ರ ಮಧ್ಯಂತರ ಚುನಾವಣೆಯ ಪ್ರಾಥಮಿಕ ಫಲಿತಾಂಶಗಳು ಹೊರಬಿದ್ದಿದ್ದು, ಡೆಮಾಕ್ರಟಿಕ್ ಪಕ್ಷದ ಸುಧಾರಣಾವಾದಿ ನಾಯಕರ ಜಯಯಾನ ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸಕ್ಕೆ ನಾಂದಿ ಹಾಡಿದೆ. ಅಸೋಸಿಯೇಟೆಡ್...

ಅಮೆರಿಕ ಮಧ್ಯಂತರ ಚುನಾವಣೆ : ಮೇಲ್ಮನೆ ಸೆನೆಟ್‌ನಲ್ಲಿ ಡೆಮಾಕ್ರಟಿಕ್ ಪಕ್ಷಕ್ಕೆ ಬಹುಮತ, ಕೆಳಮನೆಯಲ್ಲೂ ಮುನ್ನಡೆ

ಅಮೆರಿಕದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ 2026ರ ಮಧ್ಯಂತರ ಚುನಾವಣೆಗಳ (US Midterm Elections) ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಪ್ರಸ್ತುತ ಮತ ಎಣಿಕೆ ಕಾರ್ಯ ಚುರುಕಿನಿಂದ ಸಾಗಿದೆ. ಹಾಲಿ ರಿಪಬ್ಲಿಕನ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

RSS ಕುರಿತು ಪೋಸ್ಟ್ ಹಾಕಿದ್ದಕ್ಕೆ ಎಕ್ಸ್‌ ಖಾತೆ ಬ್ಲಾಕ್ ಮಾಡಲು ಸೂಚಿಸಿದ ದೆಹಲಿ ಪೊಲೀಸರು : ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಸಿದ ಐಎಫ್‌ಎಫ್‌

ತನ್ನ ಖಾತೆ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೋರಿದ್ದಾರೆ ಎಂದು ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ (ಐಎಫ್‌ಎಫ್‌) ಮಂಗಳವಾರ (ನ.3) ತಿಳಿಸಿದೆ. ಐಎಫ್‌ಎಫ್‌ ಭಾರತದಲ್ಲಿ...

ರಾಜ್ಯದ 226 ತಾಲೂಕುಗಳಲ್ಲಿ 57.93 ಲಕ್ಷ ಹೆಕ್ಟೇರ್ ಬೆಳೆ ಹಾನಿ; ಕೇಂದ್ರದ ಸಣ್ಣ ನೆರವು ಸಾಕಾಗಲ್ಲ; ಪ್ರಧಾನಿ ಮೋದಿಗೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಪತ್ರ!

ಕರ್ನಾಟಕದ 226 ತಾಲೂಕುಗಳಲ್ಲಿ ಬರದ ಭೀಕರತೆಯಿಂದ ತತ್ತರಿಸಿರುವ ಲಕ್ಷಾಂತರ ರೈತರನ್ನು ರಕ್ಷಿಸಲು ತಕ್ಷಣವೇ ಬೃಹತ್ ಮಟ್ಟದ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ...

‘ಭಾರತ ಒಂದು ಜಾತ್ಯತೀತ ದೇಶ’: ದಿಯಾ ಮಿರ್ಜಾ ವಿಡಿಯೋ ಕುರಿತ ಬಿಜೆಪಿ ನಾಯಕರ ಟೀಕೆಗೆ ಬಾಂಬೆ ಹೈಕೋರ್ಟ್ ಆಕ್ಷೇಪ : ವಿಡಿಯೋ ಮರುಸ್ಥಾಪಿಸಲು ಬಿಎಂಸಿಗೆ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಪಟಾಕಿ ಸಿಡಿಸದಂತೆ ದೀಪಾವಳಿ ಹಬ್ಬದ ಮುನ್ನ ನಾಗರಿಕರಲ್ಲಿ ನಟಿ ದಿಯಾ ಮಿರ್ಜಾ ಮನವಿ ಮಾಡಿಕೊಂಡಿದ್ದ ವಿಡಿಯೋ ವಿರುದ್ಧ ಕೆಲವು ರಾಜಕಾರಣಿಗಳು ಮಾಡಿದ ಟೀಕೆಗಳನ್ನು ಬಾಂಬೆ ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ನ್ಯಾಯಮೂರ್ತಿ ಗಿರೀಶ್...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ‘ಕುಮಾರಸ್ವಾಮಿ ಸಮ್ಮುಖದಲ್ಲೇ ವಿಡಿಯೋ ಅಪ್‌ಲೋಡ್’; ವರದಿಯ ಶೇ.10ರಷ್ಟನ್ನೇ ಬಹಿರಂಗಪಡಿಸಿದ್ದೇವೆ ಎಂದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತಿರುವು ನೀಡಿದೆ. ಸ್ಟಿಂಗ್ ಕಾರ್ಯಾಚರಣೆಗೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸಚಿವ...

ಕರ್ನಾಟಕ ಎಸ್‌ಐಆರ್‌ನ ಹಲವು ಅವಾಂತರಗಳು ಬಯಲು : ಸಂಪೂರ್ಣ ಮೌನ ಪಾಲಿಸಿದ ಚುನಾವಣಾ ಆಯೋಗ

ತೀವ್ರ ವಿರೋಧದ ನಡುವೆಯೂ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಿದ ಚುನಾವಣಾ ಆಯೋಗ, 2026ರ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿ ಕೈತೊಳೆದುಕೊಂಡಿದೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತ...

ವಕ್ಫ್ ತಿದ್ದುಪಡಿ ಕಾಯ್ದೆ 2025: ಸೀಮಿತ 5 ಅರ್ಜಿಗಳ ನಿಯಮ ತೆರವು; ಹೊಸ ರಿಟ್ ಅರ್ಜಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ!

ಕೇವಲ ಮಧ್ಯಂತರ ಅರ್ಜಿದಾರರಾಗಿ ವಾದ ಮಂಡಿಸಲು ಸಾಧ್ಯವಿಲ್ಲ ಎಂದ ಪೀಠ: 2027ರ ಜನವರಿಯಲ್ಲಿ ಅಂತಿಮ ವಿಸ್ತೃತ ವಿಚಾರಣೆ! ಕೇಂದ್ರ ಸರ್ಕಾರದ ವಿವಾದಾತ್ಮಕ ‘ವಕ್ಫ್ (ತಿದ್ದುಪಡಿ) ಕಾಯ್ದೆ 2025’ ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಡೆಯುತ್ತಿರುವ...

ಸ್ಥಳೀಯ ಸಂಸ್ಥೆ ಚುನಾವಣೆಗೆ ಯಾವುದೇ ಕಾರಣಕ್ಕೂ ‘SIR’ ಪಟ್ಟಿಯನ್ನು ಬಳಸಬೇಡಿ! ರಾಜ್ಯ ಸರ್ಕಾರಕ್ಕೆ ಹೋರಾಟಗಾರರ ಎಚ್ಚರಿಕೆ!

ಯುಪಿ, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರಗಳೇ ಬದಿಗೊತ್ತಿದ ‘SIR’ ಪಟ್ಟಿಯನ್ನು ಕರ್ನಾಟಕ ಸರ್ಕಾರವೂ ಕೈಬಿಡಬೇಕು! ಕೇಂದ್ರ ಚುನಾವಣಾ ಆಯೋಗವು ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅಂತಿಮ ಪಟ್ಟಿ ಪ್ರಕಟಿಸಿದ ನಂತರವೂ ಲಕ್ಷಾಂತರ...