Homeಮುಖಪುಟಕಣ್ಣನ್ ಗೋಪಿನಾಥನ್ ಹಾಗೂ ಪ್ರಶಾಂತ್ ಭೂಷಣ್‌ ವಿರುದ್ದ ಕೇಸು ದಾಖಲು

ಕಣ್ಣನ್ ಗೋಪಿನಾಥನ್ ಹಾಗೂ ಪ್ರಶಾಂತ್ ಭೂಷಣ್‌ ವಿರುದ್ದ ಕೇಸು ದಾಖಲು

ಮಾಜಿ ಐಎಎಸ್ ಅಧಿಕಾರಿಯಾದ ಗೋಪಿನಾಥನ್ ಅವರಿಗೆ ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣವೇ ತಮ್ಮ ಕರ್ತವ್ಯಕ್ಕೆ ಸೇರಲು ಕೇಳಲಾಯಿತು. ಆಗ ಗೋಪಿನಾಥನ್ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತೇನೆ ಬದಲಿಗೆ ಸರ್ಕಾರಿ ಸೇವೆಗೆ ಸೇರುವ ಪ್ರಶ್ನೆಯೆ ಇಲ್ಲ ಎಂದು ಉತ್ತರಿಸಿದ್ದರು.

- Advertisement -
- Advertisement -

ಸುಪ್ರೀಂ ಕೋರ್ಟ್‌‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹಾಗೂ ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಅವರ ವಿರುದ್ದ ಗುಜರಾತ್ ಪೊಲೀಸರು ಕೇಸು ದಾಖಲು ಮಾಡಿದ್ದಾರೆ.

ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್‌ ಅವರನ್ನು ರಾಮಾಯಣದ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಕ್ಕಾಗಿ ಹಾಗೂ ಜನರ ದಾರಿ ತಪ್ಪಿಸಲು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ಆದೇಶಗಳನ್ನು ಬಳಸಿದ್ದಕ್ಕಾಗಿ ಕಣ್ಣನ್ ಗೋಪಿನಾಥನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಎಫ್‌ಐಆರ್ ಅನ್ನು ಭಾನುವಾರ ಸಂಜೆ ರಾಜ್‌ಕೋಟ್ ನಗರದ ಭಕ್ತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿ, ತನಿಖೆಯನ್ನು ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಗೆ ವರ್ಗಾಯಿಸಲಾಯಿತು.

ರಾಜ್‌ಕೋಟ್ ಮೂಲದ ನಿವೃತ್ತ ಕ್ಯಾಪ್ಟನ್ ಜಯದೇವ್ ಭಾಯ್ ಜೋಶಿ ಎಂಬವರು, ಮಾರ್ಚ್ 28 ರಂದು ಪ್ರಶಾಂತ್‌ ಭೂಷಣ್ ಮಾಡಿದ ಟ್ವೀಟ್‌ನಲ್ಲಿ ರಾಮಾಯಣ ಮತ್ತು ಮಹಾಭಾರತದ ಜೊತೆ ಅಫೀಮು ಪದವನ್ನು ಬಳಸಿದ್ದಾರೆ, ಇದು ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ ಎಂದು ಎಸ್‌ಒಜಿಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಪ್ರಕರಣದ ತನಿಖಾ ಅಧಿಕಾರಿಯಾದ ರೋಹಿತ್ ರಾವಲ್ ಹೇಳಿದ್ದಾರೆ.

“ಬಲವಂತದ ಲಾಕ್‌ಡೌನ್‌ನಿಂದಾಗಿ ಕೋಟ್ಯಂತರ ಜನರು ಹಸಿವಿನಿಂದ ಬಳಲುತ್ತಿರುವಾಗ, ನಮ್ಮ ಹೃದಯಹೀನ ಮಂತ್ರಿಗಳು ರಾಮಾಯಣ ಮತ್ತು ಮಹಾಭಾರತದ ಅಫೀಮನ್ನು ಜನರಿಗೆ ನೀಡುತ್ತಿದ್ದಾರೆ” ಎಂದು ಭೂಷಣ್ ಮಾರ್ಚ್ 28 ರಂದು ಟ್ವೀಟ್ ಮಾಡಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಸುದ್ದಿ ಸಂಪಾದಕ ಅಶ್ಲಿನ್ ಮ್ಯಾಥ್ಯೂ ಮತ್ತು ಕಣ್ಣನ್‌ ಗೋಪಿನಾಥನ್ ಅವರು ಸರ್ಕಾರದ ಆದೇಶಗಳನ್ನು ತಪ್ಪುದಾರಿಗೆಳೆಯುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಮತ್ತು ಇದು ಸಮಾಜದಲ್ಲಿ ಶಾಂತಿಗೆ ಭಂಗ ತರುತ್ತದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

“ದೂರಿನ ಆಧಾರದ ಮೇಲೆ, ನಾವು ಈ ಮೂವರ ವಿರುದ್ಧ ಸೆಕ್ಷನ್ 34 (ಹಲವಾರು ವ್ಯಕ್ತಿಗಳು ಮಾಡಿದ ಅಪರಾಧ ಕೃತ್ಯ), 295-ಎ (ಯಾವುದೇ ವರ್ಗದವರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳನ್ನು ಅದರ ಧರ್ಮವನ್ನು ಅವಮಾನಿಸುವ ಮೂಲಕ ಅಥವಾ ಧಾರ್ಮಿಕ ನಂಬಿಕೆಗಳು), 505 (1) (ಜನರಲ್ಲಿ ಭಯ ಮತ್ತು ಎಚ್ಚರಿಕೆಯನ್ನು ಉಂಟುಮಾಡುವ ಯಾವುದೇ ಹೇಳಿಕೆ, ವದಂತಿ ಅಥವಾ ವರದಿಯನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು) ಮತ್ತು ಸೆಕ್ಷನ್ 120-ಬಿ (ಭಾರತೀಯ ದಂಡ ಸಂಹಿತೆಯ ಕ್ರಿಮಿನಲ್ ಪಿತೂರಿ) ದಾಖಲಿಸಿದ್ದೇವೆ, ಹೆಚ್ಚಿನ ತನಿಖೆಗಾಗಿ ನಾವು ಟ್ವೀಟ್ ಅನ್ನು ಪರಿಶೀಲಿಸುತ್ತಿದ್ದೇವೆ” ಎಂದು ರಾವಲ್ ಹೇಳಿದ್ದಾರೆ.

ದಾಖಲಾದ ದೂರಿನ ಬಗ್ಗೆ ಪ್ರತಿಕ್ರಿಯೆಸಲು ಪ್ರಶಾಂತ್ ಭೂಷಣ್ ನಿರಾಕರಿಸಿದ್ದಾರೆ.

ದೂರು ದಾಖಲಾದ ಬಗ್ಗೆ ಗೋಪಿನಾಥನ್ ಸೋಮವಾರ ಟ್ವೀಟ್ ಮಾಡಿದ್ದು “ಒಳ್ಳೆ ಪ್ರಯತ್ನ. ನೀವು ನನ್ನನ್ನು ಬಂಧಿಸಬಹುದು, ಆದರೆ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಇಲ್ಲಿ ಯಾರೂ ನಿಮ್ಮನ್ನು ಹೆದರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಮಾಜಿ ಐಎಎಸ್ ಅಧಿಕಾರಿಯಾದ ಗೋಪಿನಾಥನ್ ಅವರಿಗೆ ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣವೇ ತಮ್ಮ ಕರ್ತವ್ಯಕ್ಕೆ ಸೇರಲು ಕೇಳಲಾಯಿತು. ಆಗ ಗೋಪಿನಾಥನ್ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತೇನೆ ಬದಲಿಗೆ ಸರ್ಕಾರಿ ಸೇವೆಗೆ ಸೇರುವ ಪ್ರಶ್ನೆಯೆ ಇಲ್ಲ ಎಂದು ಉತ್ತರಿಸಿದ್ದರು.

ಗೋಪಿನಾಥನ್ ಅವರು “ಅಸಹಿಷ್ಣುತೆ ಮತ್ತು ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸುತ್ತಿದ್ದಾರೆ” ಎಂದು ಆರೋಪಿಸಿ ಸೇವೆಗೆ ರಾಜಿನಾಮೆ ಕೊಟ್ಟಿದ್ದರು.


ಇದನ್ನೂ ಓದಿ: ಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಟ್ಲರ್ ನ ಆಡಳಿತವು, ಸಂವಿಧಾನದ ಕೈ ಮೀರಿ ಹೋಗುವುದರೊಳಗೆ ಎಲ್ಲರೂ ಎಚ್ಚರಗೊಂಡು ಸರಿದಾರಿಗೆ ತರಬೇಕು.

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...