Homeಮುಖಪುಟಪ್ರಶಾಂತ್ ಕಿಶೋರ್‌ ನೇತೃತ್ವದ ಪಕ್ಷಕ್ಕೆ ಅಕ್ರಮ ಹಣ - ಜೆಡಿ(ಯು) ಆರೋಪ

ಪ್ರಶಾಂತ್ ಕಿಶೋರ್‌ ನೇತೃತ್ವದ ಪಕ್ಷಕ್ಕೆ ಅಕ್ರಮ ಹಣ – ಜೆಡಿ(ಯು) ಆರೋಪ

- Advertisement -
- Advertisement -

ಜನ ಸ್ವರಾಜ್ ಪಾರ್ಟಿ (ಜೆಎಸ್‌ಪಿ) ಸಂಸ್ಥಾಪಕ ಪ್ರಶಾಂತ್ ಕಿಶೋರ್‌ ಅವರು ಕಾನೂನಿಗೆ ವಿರುದ್ಧವಾಗಿ ದತ್ತಿ ಕಂಪನಿಯಿಂದ ತಮ್ಮ ಪಕ್ಷಕ್ಕೆ ಹಣಕಾಸು ಒದಗಿಸುತ್ತಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಕ್ಷವಾದ ಜೆಡಿ(ಯು) ಗುರುವಾರ ಆರೋಪಿಸಿದ್ದು, ತನಿಖೆಗೆ ಒತ್ತಾಯಿಸಿದೆ. 

ಜೆಡಿ(ಯು) ಮುಖ್ಯ ವಕ್ತಾರ ಮತ್ತು ಎಂಎಲ್‌ಸಿ ನೀರಜ್ ಕುಮಾರ್ ಅವರು ಕಿಶೋರ್ ಅವರು ಕಂಪನಿಗಳ ಕಾಯ್ದೆಯಡಿಯಲ್ಲಿ ಕಂಪನಿಯಾಗಿ ನೋಂದಾಯಿಸಲಾದ ಜಾಯ್ ಆಫ್ ಗಿವಿಂಗ್ ಗ್ಲೋಬಲ್ ಫೌಂಡೇಶನ್‌ನಿಂದ ಹಣವನ್ನು ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಜೆಜಿಜಿಎಫ್ ದತ್ತಿ ಪ್ರತಿಷ್ಠಾನದ ಹೆಸರಿನಲ್ಲಿ ರಾಜಕೀಯ ಚಟುವಟಿಕೆಗಳನ್ನು ನಡೆಸಿದ್ದು, ತೆರಿಗೆ ವಿನಾಯಿತಿಗಳನ್ನು ಸಹ ಪಡೆದಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023-24ರ ಅವಧಿಯಲ್ಲಿ ವಿವಿಧ ಕಂಪನಿಗಳಿಂದ ಈ ಫೌಂಡೇಶನ್ 48.75 ಕೋಟಿ ರೂ. ಮೌಲ್ಯದ ದೇಣಿಗೆಗಳನ್ನು ಪಡೆದಿರುವುದರಿಂದ ದತ್ತಿ ಪ್ರತಿಷ್ಠಾನವು ಹಣಕಾಸಿನ ವಹಿವಾಟಿನಲ್ಲಿ ಗಂಭೀರ ಅಕ್ರಮಗಳನ್ನು ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

ವಿಚಿತ್ರವೆಂದರೆ, ಈ ಕಂಪನಿಗಳ ಬಂಡವಾಳ ಮೂಲವು ಅವರ ದೇಣಿಗೆಗಳಿಗಿಂತ ಕಡಿಮೆಯಾಗಿದ್ದು, ಕಿಶೋರ್ ಅವರು ದತ್ತಿ ಸಂಸ್ಥೆಗೆ 50 ಲಕ್ಷ ರೂ.ಗಳನ್ನು ಏಕೆ ದೇಣಿಗೆ ನೀಡಿದ್ದಾರೆ ಮತ್ತು ಅದು ಅವರ ವೈಯಕ್ತಿಕ ಆದಾಯದಿಂದವೇ ಅಥವಾ “ಲೆಕ್ಕವಿಲ್ಲದ” ಆದಾಯದಿಂದ ಬಂದಿದೆಯೇ ಎಂಬುದನ್ನು ವಿವರಿಸಬೇಕು ಎಂದು ಅವರು ಹೇಳಿದ್ದಾರೆ.

ಕಿಶೋರ್ ಮತ್ತು ಅವರ ಪಕ್ಷದ ಇಬಿಸಿ ಸೆಲ್ ಮುಖ್ಯಸ್ಥ ರಂಬಾಲಿ ಸಿಂಗ್ ಅವರ ಹಣಕಾಸು ಹೇಳಿಕೆಗಳು ಪರಸ್ಪರ ವಿರುದ್ಧವಾಗಿವೆ ಎಂದು ಅವರು ಹೇಳಿದ್ದರೆ. ಪಕ್ಷವು ಯಾವುದೇ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿಲ್ಲ ಎಂದು ಕಿಶೋರ್ ಹೇಳಿಕೊಂಡರೆ, ಸಿಂಗ್ ಅದಕ್ಕೆ ಬ್ಯಾಂಕ್ ಖಾತೆಯೂ ಇಲ್ಲ ಎಂದು ಹೇಳಿದ್ದಾರೆ ಎಂದು ಅವರು ಹೇಳಿದ್ದಾರೆ. ಪ್ರಶಾಂತ್ ಕಿಶೋರ್‌

ಇತ್ತೀಚೆಗೆ ಪತ್ರಕರ್ತರ ಗುಂಪಿನೊಂದಿಗೆ ಅನೌಪಚಾರಿಕ ಸಂಭಾಷಣೆಯಲ್ಲಿ, ಕಿಶೋರ್ ಅವರು ಚುನಾವಣಾ ತಂತ್ರಜ್ಞರಾಗಿ ಹಲವಾರು ರಾಜಕೀಯ ಪಕ್ಷಗಳಿಗೆ ಕೆಲಸ ಮಾಡಿ ಗಳಿಸಿದ ಹಣದಿಂದ ಪಕ್ಷವನ್ನು ನಡೆಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದರು. “ಪಕ್ಷವನ್ನು ನಡೆಸಲು ನಿಧಿಯ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಾನು ನನ್ನ ‘ಕೌಶಲ್ಯ’ವನ್ನು ಬಳಸಿಕೊಂಡು ಕೋಟ್ಯಂತರ ರೂಪಾಯಿಗಳನ್ನು ಗಳಿಸುತ್ತೇನೆ” ಎಂದು ಅವರು ಪ್ರಶ್ನೆಗೆ ಉತ್ತರಿಸಿದ್ದರು.

ಇದನ್ನೂಓದಿ:  ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ

ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...