Homeಮುಖಪುಟಲೋಕಸಭೆ ಚುನಾವಣೆ-2024: ಕುಗ್ಗಿದ ಮೋದಿ ವರ್ಚಸ್ಸು; ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವಲೋಕನ...

ಲೋಕಸಭೆ ಚುನಾವಣೆ-2024: ಕುಗ್ಗಿದ ಮೋದಿ ವರ್ಚಸ್ಸು; ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವಲೋಕನ…

- Advertisement -
- Advertisement -

2014 ಮತ್ತು 2019ರ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ 2024ರಲ್ಲಿ ದೇಶದಲ್ಲಿ ಮೋದಿ ವರ್ಚಸ್ಸು ಕಡಿಮೆಯಾಗಿದೆ. ಈ ಬಾರಿ ಬ್ರ್ಯಾಂಡ್ ಮೋದಿ ದುರ್ಬಲವಾಗುತ್ತಿದೆ, ಮೋದಿ ಕುರಿತು ನಿರೂಪಣೆಯಲ್ಲಿ ಬದಲಾವಣೆ ಇದೆ, ಜನರಲ್ಲಿ ಮೋದಿ ಬಗ್ಗೆ ಉತ್ಸಾಹ ಕಡಿಮೆಯಾಗಿದೆ ಎಂದು ಒಂದು ಕಾಲದಲ್ಲಿ ಮೋದಿ ಗೆಲುವಿನ ಹಿಂದಿನ ಪ್ರಮುಖ ರಣತಂತ್ರಗಾರನಾಗಿದ್ದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

RTV ಆಂಧ್ರಪ್ರದೇಶದೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ಪ್ರಶಾಂತ್ ಕಿಶೋರ್, ಈ ಬಾರಿ ರಾಮಮಂದಿರದ ಹೆಸರಿನಲ್ಲಿ ಬಿಜೆಪಿಗೆ ಒಂದೇ ಒಂದು ಮತವೂ ಬರುವುದಿಲ್ಲ. ಈ ಹಿಂದೆ ರಾಮ ಮಂದಿರದ ಹೆಸರಲ್ಲಿ ಬಿಜೆಪಿಗೆ ಮತ ನೀಡದ ಆದರೆ ಈಗ ಅದೇ ಹೆಸರಲ್ಲಿ ಬಿಜೆಪಿಗೆ ಮತ ನೀಡಲು ಬಯಸುವ ಒಬ್ಬ ಮತದಾರ ಕೂಡ ನನಗೆ ಸಿಕ್ಕಿಲ್ಲ. ಹಾಗಾಗಿ ರಾಮ ಮಂದಿರದ ಹೆಸರಲ್ಲಿ ಈ ಬಾರಿ ಬಿಜೆಪಿಗೆ ಒಂದೇ ಒಂದು ಹೆಚ್ಚುವರಿ ಮತ ಸಿಗುವುದಿಲ್ಲ ಎನ್ನುವುದು ವಾಸ್ತವವಾಗಿದೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಮೋದಿ ವಿರೋಧ ಪಕ್ಷಗಳಿಂದ ಯಾವುದೇ ಸವಾಲನ್ನು ಎದುರಿಸದಿರಬಹುದು, ಆದರೆ ಅವರು ಖಂಡಿತವಾಗಿಯೂ ಈ ದೇಶದ ಜನರ ಕೋಪವನ್ನು ಎದುರಿಸುತ್ತಾರೆ. ಈ ಚುನಾವಣೆಯಲ್ಲಿ ಬ್ರಾಂಡ್ ಮೋದಿಯನ್ನು ಸೋಲಿಸಲು ಸಾಧ್ಯವಿಲ್ಲ ಎಂಬಂತಹ ಭಾವನೆಯಿಲ್ಲ, ಯಾರೂ ಅವರಿಗೆ ಸವಾಲು ಹಾಕಲು ಸಾಧ್ಯವಿಲ್ಲ ಎಂದಲ್ಲ. ರಾಜಕೀಯ ಪಕ್ಷ ಅಥವಾ ರಾಜಕೀಯ ನಾಯಕರು ಅವರಿಗೆ ಸವಾಲು ಹಾಕಲಿ ಅಥವಾ ಇಲ್ಲದಿರಲಿ ಆದರೆ ಜನರು ಮಾತ್ರ ಅವರಿಗೆ ಸವಾಲನ್ನು ಹಾಕುತ್ತಿದ್ದಾರೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ವಿರೋಧ ಪಕ್ಷಗಳು ಅಥವಾ ವಿರೋಧ ಪಕ್ಷಗಳ ಮೈತ್ರಿಕೂಟವು ದುರ್ಬಲವಾಗಿರಬಹುದು, ಆದರೆ ದೇಶದಲ್ಲಿ ಜನರ ವಿರೋಧ ದುರ್ಬಲವಾಗಿಲ್ಲ. 60 ಕೋಟಿಗೂ ಹೆಚ್ಚು ಜನರು ದಿನಕ್ಕೆ 100ರೂ.ಗಿಂತ ಹೆಚ್ಚು ಸಂಪಾದಿಸದ ದೇಶದಲ್ಲಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳನ್ನು ಎಂದಿಗೂ ದುರ್ಬಲಗೊಳಿಸಲು ಸಾಧ್ಯವಿಲ್ಲ. ಜನರ ವಿರೋಧ ದುರ್ಬಲವಾಗಿದೆ ಎಂದು ಎಂದೂ ಭಾವಿಸಬೇಡಿ, ಆ ತಪ್ಪನ್ನು ಎಂದಿಗೂ ಮಾಡಬೇಡಿ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಕಿಶೋರ್‌ ಅವರು ತಮ್ಮ ವಾದಗಳನ್ನು ಅಂಕಿ-ಅಂಶಗಳು ಮತ್ತು ಡೇಟಾದೊಂದಿಗೆ ಮತ್ತಷ್ಟು ಸಮರ್ಥಿಸಿಕೊಂಡಿದ್ದಾರೆ. ಭಾರತದಲ್ಲಿ ಯಾರೂ 50 ಪ್ರತಿಶತ ಮತಗಳನ್ನು ಪಡೆಯುವುದಿಲ್ಲ. ಸರಳವಾಗಿ ಹೇಳುವುದಾದರೆ, 100 ಜನರು ಮತ ಚಲಾಯಿಸಿದರೆ, ಕೇವಲ 40 ಜನರು ಮಾತ್ರ ಪ್ರಧಾನಿ ಮೋದಿಯನ್ನು ಬೆಂಬಲಿಸುತ್ತಾರೆ. ಅವರ ಸಿದ್ಧಾಂತ, ಅವರ ಕೆಲಸ, ಹಿಂದುತ್ವ, ರಾಮಮಂದಿರ, ಆರ್ಟಿಕಲ್ 370 ಇವೆಲ್ಲದರಲ್ಲಿ ಕೇವಲ 40 ಜನರು ಮಾತ್ರ ಸಂತೋಷವಾಗಿದ್ದಾರೆ, ಆದರೆ 60-62ರಷ್ಟು ಮಂದಿ ಅತೃಪ್ತರಾಗಿದ್ದಾರೆ ಎಂದು ಹೇಳಿದ್ದಾರೆ.

ಈ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಸವಾಲು ಎದುರಿಸುವುದು ಖಚಿತ. ಗ್ರಾಮೀಣ ಭಾಗದಲ್ಲಿನ ಸಂಕಷ್ಟವು ದೇಶದ ಪ್ರಮುಖ ಸಮಸ್ಯೆಯಾಗಿದೆ. ಇದಾದ ನಂತರವೂ ಬಿಜೆಪಿ ಗೆಲ್ಲುತ್ತದೆ ಎಂದರೆ ವಿರೋಧ ಪಕ್ಷಗಳು ಸಾಕಷ್ಟು ಬಲವಾಗಿಲ್ಲ ಅಥವಾ ವಿಶ್ವಾಸಾರ್ಹವಾಗಿಲ್ಲ ಎಂದಾಗಿದೆ ಹೊರತು ಈ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಮೋದಿ ಸರ್ಕಾರದಿಂದ ಸಂತೋಷವಾಗಿದ್ದಾರೆ ಎಂದು ಅರ್ಥವಲ್ಲ ಎಂದು ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ.

2014ರ ಚುನಾವಣೆಗೆ ಹೋಲಿಸಿದರೆ 2024ರ ಚುನಾವಣೆಯಲ್ಲಿ ‘ಪ್ರಧಾನಿ ಮೋದಿ’ ಬ್ರಾಂಡ್‌ ಕುಸಿದಿದೆ. 2024ರಲ್ಲಿ ಮತ ಹಾಕಲು ಬೇರೆ ಯಾರೂ ಇಲ್ಲ ಎಂಬ ಭಾವನೆ ಜನರಲ್ಲಿದೆ. ಬ್ರ್ಯಾಂಡ್ ಮೋದಿ ದುರ್ಬಲವಾಗುತ್ತಿದೆ. 2014ರಲ್ಲಿ ಬಿಜೆಪಿ ಮತದಾರರಲ್ಲಿ ‘ಉತ್ಸಾಹ’ದ ಭಾವನೆ ಇತ್ತು ಮತ್ತು 2019ರಲ್ಲಿ, ರಾಷ್ಟ್ರದ ಅಭಿವೃದ್ಧಿಗೆ ಪಕ್ಷಕ್ಕೆ ಇನ್ನೂ ಐದು ವರ್ಷಗಳು ಬೇಕು ಎಂದು ಜನರು ನಿರೀಕ್ಷಿಸಿದ್ದರು. ಮೋದಿ ಅಧಿಕಾರಕ್ಕೆ ಬಂದರೆ ದೇಶ ಪರಿವರ್ತನೆಯಾಗುತ್ತದೆ ಎಂದು 2014ರಲ್ಲಿ ನಂಬಿದ ಜನರ ದೊಡ್ಡ ವರ್ಗವಿತ್ತು. 2024ರಲ್ಲಿ ನಾವು ಏನು ಮಾಡೋಣ, ಬೇರೆ ಯಾರೂ ಇಲ್ಲ, ಆದ್ದರಿಂದ ನಾವು ಅವನಿಗೆ ಮಾತ್ರ ಮತ ಹಾಕೋಣ ಎಂದು ಹೇಳುವ ಸಂದಿಗ್ಧ ಸ್ಥಿತಿಯಲ್ಲಿದ್ದಾರೆ. ಮೋದಿ ಕುರಿತು ನಿರೂಪಣೆಯಲ್ಲಿ ಬದಲಾವಣೆ ಇದೆ. ಜನರಲ್ಲಿ ಉತ್ಸಾಹ ಕಡಿಮೆಯಾಗಿದೆ ಎಂದು ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...