Homeಮುಖಪುಟಹಳೆಯ ಹೇಳಿಕೆ ಉಲ್ಲೇಖಿಸಿದ ಕರಣ್ ಥಾಪರ್: ಸಿಟ್ಟಾದ ಪ್ರಶಾಂತ್ ಕಿಶೋರ್

ಹಳೆಯ ಹೇಳಿಕೆ ಉಲ್ಲೇಖಿಸಿದ ಕರಣ್ ಥಾಪರ್: ಸಿಟ್ಟಾದ ಪ್ರಶಾಂತ್ ಕಿಶೋರ್

ಹಿಮಾಚಲದಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂದಿದ್ದನ್ನು ನೆನಪಿಸಿದ್ದಕ್ಕೆ ತಬ್ಬಿಬ್ಬಾದ ಚುನಾವಣಾ ತಂತ್ರಜ್ಞ

- Advertisement -
- Advertisement -

‘ದಿ ವೈರ್’ ಗಾಗಿ ಕರಣ್ ಥಾಪರ್ ನಡೆಸಿದ ಸಂದರ್ಶನದಲ್ಲಿ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಚುನಾವಣಾ ಫಲಿತಾಂಶಗಳ ಕುರಿತ ತನ್ನ ಹಳೆಯ ಭವಿಷ್ಯವಾಣಿಗಳ ಬಗ್ಗೆ ಉಲ್ಲೇಖಿಸಿದ್ದಕ್ಕೆ ತೀವ್ರ ಸಿಟ್ಟಾದ ಘಟನೆ ನಡೆದಿದೆ.

ಕರಣ್ ಥಾಪರ್ ಅವರು ಪ್ರಶಾಂತ್ ಕಿಶೋರ್ ಅವರ ಈ ಹಿಂದಿನ ಎಕ್ಸ್‌ ಪೋಸ್ಟ್‌ ಒಂದರ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಆದರೆ, ಪ್ರಶಾಂತ್ ಕಿಶೋರ್ ಮಾತ್ರ ತಾನು ಆ ರೀತಿ ಹೇಳಿಕೆ ನೀಡೇ ಇಲ್ಲ ಎಂದು ವಾದಿಸಿದ್ದಾರೆ. ಈ ವಿಚಾರ ಇಂಟರ್‌ನೆಟ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಮೇ 2022ರಲ್ಲಿ ನಡೆದ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂದು ಪ್ರಶಾಂತ್ ಕಿಶೋರ್ ಈ ಹಿಂದೆ ಭವಿಷ್ಯ ನುಡಿದಿದ್ದರು. ಆದರೆ, ಕಾಂಗ್ರೆಸ್ ಗೆಲುವು ದಾಖಲಿಸಿತ್ತು. ಈ ವಿಚಾರವನ್ನು ಕರಣ್ ಥಾಪರ್ ನೆನಪಿಸಿದಾಗ ಕಿಶೋರ್ ಅವರು ಕಾಂಗ್ರೆಸ್ ಬಗ್ಗೆ ಈ ಹಿಂದೆ ಹೇಳಿದ್ದನ್ನೆಲ್ಲಾ ನಿರಾಕರಿಸಿದ್ದಾರೆ. ಏರುದನಿಯಲ್ಲಿ ಥಾಪರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ತಬ್ಬಿಬ್ಬಾಗಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300 ಸ್ಥಾನಗಳನ್ನು ಗೆಲ್ಲಬಹುದು ಮತ್ತು ಕಾಂಗ್ರೆಸ್ 100 ಸ್ಥಾನಗಳನ್ನು ಕೂಡಾ ಗೆಲ್ಲುವುದು ಕಷ್ಟ ಎಂದು ಸಂದರ್ಶನದಲ್ಲಿ ಕಿಶೋರ್ ಭವಿಷ್ಯ ನುಡಿದಿದ್ದಾರೆ. ಈ ವೇಳೆ ಪ್ರಶಾಂತ್ ಕಿಶೋರ್ ಅವರ ಈ ಹಿಂದಿನ ಭವಿಷ್ಯಗಳು ಸುಳ್ಳಾಗಿರುವುದನ್ನು ಥಾಪರ್ ಉಲ್ಲೇಖಿಸಿದ್ದಾರೆ.

“ಕಾಂಗ್ರೆಸ್ ಹಿಮಾಚಲದಲ್ಲಿ ಸೋಲುತ್ತದೆ ಎಂದು ನಾನು ಹೇಳಿದ ವಿಡಿಯೋ ತೋರಿಸಬೇಕು, ಇಲ್ಲದಿದ್ದರೆ ನೀವು ಕ್ಷಮೆ ಯಾಚಿಸಬೇಕು ” ಎಂದು ಕರಣ್ ಥಾಪರ್ ಮುಂದೆ ಪ್ರಶಾಂತ್ ಪಟ್ಟು ಹಿಡಿದಿದ್ದಾರೆ. ಅದಕ್ಕೆ ಮಾಧ್ಯಮಗಳಲ್ಲಿ ಬಂದಿರುವ ಅವರ ಹೇಳಿಕೆಗಳನ್ನು ಕರಣ್ ಥಾಪರ್ ಉಲ್ಲೇಖಿಸಲು ಮುಂದಾಗಿದ್ದಾರೆ. ಆದರೆ, ಅದಕ್ಕೆ ಆಸ್ಪದವನ್ನೇ ಕೊಡದ ಕಿಶೋರ್, “ಮಾಧ್ಯಮಗಳು ಏನು ಬೇಕಾದರೂ ಬರೆಯುತ್ತವೆ. ಅದಕ್ಕೆ ನಾನು ಜವಾಬ್ದಾರನಲ್ಲ. ನಿಮ್ಮಂತಹ ಪತ್ರಕರ್ತರು ಏನು ಬೇಕಾದರೂ ಬರೀತೀರಿ” ಎಂದು ಕರಣ್ ಥಾಪರ್ ವಿರುದ್ಧವೇ ಆರೋಪ ಮಾಡಿದ್ದಾರೆ.

ತೀವ್ರ ಕೋಪಗೊಂಡಂತೆ ಕಂಡ ಪ್ರಶಾಂತ್‌ ಕಿಶೋರ್‌ಗೆ “ನೀವು ಸಂದರ್ಶನ ಮುಂದುವರಿಸಲು ಇಚ್ಛಿಸುತ್ತೀರಾ? ಅಥವಾ ಮುಗಿಸಲು ಬಯಸುತ್ತೀರಾ?” ಎಂದು ಕರಣ್ ಥಾಪರ್ ಕೇಳಿದ್ದು, ಇನ್ನಷ್ಟು ಸಿಟ್ಟಾಗಿಸಿದೆ. “ನಿಮ್ಮಂತಹ ಒಬ್ಬರಲ್ಲ ನಾಲ್ವರನ್ನು ನಾನು ಸುಧಾರಿಸಬಲ್ಲೆ, ನನಗೆ ನಿಮ್ಮನ್ನು ಹೇಗೆ ಎದುರಿಸಬೇಕು ಎಂದು ಚೆನ್ನಾಗಿ ಗೊತ್ತಿದೆ. ನಾನೇನೂ ಎದ್ದು ಹೋಗುವುದಿಲ್ಲ. ನೀವೇ ದೊಡ್ಡ ಖಡಕ್ ಸಂದರ್ಶಕ ಎಂಬ ಭ್ರಮೆಯಲ್ಲಿರಬೇಡಿ” ಎಂದು ಕರಣ್ ಥಾಪರ್ ಮೇಲೆ ಎಗರಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ತೀವ್ರ ವಿಚಲಿತರಾದಂತೆ ಕಂಡು ಬಂದಿದ್ದು, ಪಕ್ಕದಲ್ಲಿದ್ದ ಲೋಟ ಎತ್ತಿ ನೀರನ್ನೂ ಕುಡಿದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಾಂತ್ ಕಿಶೋರ್‌ರ ಈ ಹಿಂದಿನ ಎಕ್ಸ್‌ನ ಪೋಸ್ಟ್‌ನ ಸ್ಕ್ರೀನ್‌ಶಾಟ್‌ ಮತ್ತು ಈ ಸಂದರ್ಶನದ ವಿಡಿಯೋ ವೈರಲ್ ಆಗುತ್ತಿದೆ. ಜೊತೆಗೆ ಈ ಹಿಂದೆ ಥಾಪರ್ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೀರು ಕುಡಿಯುತ್ತಿರುವ ಮತ್ತು ಈಗ ಪ್ರಶಾಂತ್ ಕಿಶೋರ್ ನೀರು ಕುಡಿದ ಚಿತ್ರವನ್ನು ಹಂಚಿಕೊಂಡಿರುವ ನೆಟ್ಟಿಗರು, “ನೀರು ಉಳಿಸಿ, ಕರಣ್ ಥಾಪರ್‌ಗೆ ಸಂದರ್ಶನ ನೀಡಬೇಡಿ” ಎಂದು ಗೇಲಿ ಮಾಡಿದ್ದಾರೆ.

ಇದನ್ನೂ ಓದಿ : ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...