Homeಮುಖಪುಟ2021ರಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ : ಡಿಎಂಕೆ ಪಕ್ಷಕ್ಕೆ ಪ್ರಶಾಂತ್‌ ಕಿಶೋರ್‌ ಬಲ...

2021ರಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ : ಡಿಎಂಕೆ ಪಕ್ಷಕ್ಕೆ ಪ್ರಶಾಂತ್‌ ಕಿಶೋರ್‌ ಬಲ…

- Advertisement -
- Advertisement -

ತಮಿಳುನಾಡಿನಲ್ಲಿ 2021ರಲ್ಲಿ ಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ರಾಜಕೀಯ ಚತುರ ಪ್ರಶಾಂತ್ ಕಿಶೋರ್ ಅವರ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ ಜೊತೆ ಒಪ್ಪಂದ ಮಾಡಿಕೊಳ್ಳಲು ಡಿಎಂಕೆ ಮುಂದಾಗಿದೆ. ಇದಕ್ಕೆ ಪ್ರತಿಪಕ್ಷಗಳು  ಮತ್ತು ರಾಜಕೀಯ ವಿಶ್ಲೇಷಕರು ಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಪ್ರಶಾಂತ್ ಕಿಶೋರ್ ಸಂಸ್ಥೆಯ ಸಹಯೋಗದೊಂದಿಗೆ ಮುನ್ನಡೆದರೆ ಗೆಲುವು ಖಚಿತ ಎಂಬುದನ್ನು ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ನಂಬಿದೆ. ಹೀಗಾಗಿ ಒಪ್ಪಂದಕ್ಕೆ ಮುದ್ರೆ ಒತ್ತಲು ಸ್ಟಾಲಿನ್ ಮುಂದಾಗಿದ್ದಾರೆ ಎಂದು ವರದಿಗಳು ಹೇಳಿವೆ.

2019ರ ನವೆಂಬರ್ ನಲ್ಲಿ ಮತ್ತೊಬ್ಬ ರಾಜಕೀಯ ವಿಶ್ಲೇಷಕ ಸುನಿಲ್ ಕೊನೆಲೆಲು ಮತ್ತು ಡಿಎಂಕೆ ನಡುವೆ ಅಸಮಾಧಾನದ ಭುಗಿಲೆದ್ದ ಹಿನ್ನೆಲೆಯಲ್ಲಿ ಅವರೊಂದಿಗೆ ಕೆಲಸ ಮಾಡಲು ಡಿಎಂಕೆ ಹಿಂದೇಟು ಹಾಕಿದೆ. ಅದೇ ಕಾರಣಕ್ಕಾಗಿಯೇ ಪ್ರಶಾಂತ್ ಕಿಶೋರ್ ಗುಂಪಿನೊಂದಿಗೆ ಕೈಜೋಡಿಸಲು ಸಿದ್ದತೆ ನಡೆಸಿದೆ.

ದ್ರಾವಿಡ ಮುನ್ನೇತ್ರ ಕಳಗಂ ಪಕ್ಷವು 2019ರ ಲೋಕಸಭಾ ಚುನಾವಣೆಯಲ್ಲಿ ಕೆಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದಿತ್ತು. ನಂತರ 22 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲೂ ಡಿಎಂಕೆ 13 ಸ್ಥಾನಗಳನ್ನು ಗಳಿಸಿ ಪ್ರಾಬಲ್ಯವನ್ನು ಮೆರೆದಿತ್ತು. ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಡಿಎಂಕೆ ಹೆಚ್ಚು ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ಈ ಬೆಳವಣಿಗೆಗಳು ಡಿಎಂಕೆ ಪಕ್ಷದಲ್ಲಿ ಹೊಸ ಆಶಾಭಾವನೆಯನ್ನು ಮೂಡಿಸಿದ್ದು 2021ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಭವಿಷ್ಯ ಉಜ್ವಲವಾಗಿರುವುದನ್ನು ಮನಗಂಡಿರುವ ಡಿಎಂಕೆ ಪ್ರಶಾಂತ್ ಕಿಶೋರ್ ಅವರನ್ನು ತಮ್ಮ ತಂಡದಲ್ಲಿ ಸೇರ್ಪಡೆ ಮಾಡಿಕೊಳ್ಳುವ ನಿರ್ಧಾರವು ವಿರೋಧಿಗಳ ಪಾಳೆಯದಲ್ಲಿ ಹುಬ್ಬೇರಿಸುವಂತೆ ಮಾಡಿದೆ.

ಸದ್ಯಕ್ಕೆ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್‌ ಆಪ್‌ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪರವಾಗಿ ಕೆಲಸ ಮಾಡಲಿದ್ದಾರೆ.

ಐ-ಪ್ಯಾಕ್ ಜೊತೆ ಕೈಜೋಡಿಸುವ ಡಿಎಂಕೆ ನಿರ್ಧಾರದ ಪ್ರತಿಕ್ರಿಯೆ ನೀಡಿರುವ ಎಐಎಡಿಎಂಕೆ ಸಚಿವ ಡಿ.ಜಯಕುಮಾರ್ ಎಂ.ಕೆ. ಸ್ಟಾಲಿನ್ ಅವರನ್ನು ಇನ್ನು ಮುಂದ ಪಿ.ಕೆ.ಸ್ಟಾಲಿನ್ ಎಂದು ಕರೆಯಬೇಕು ಎಂದು ಗೇಲಿ ಮಾಡಿದ್ದಾರೆ. ಏಕೆಂದರೆ ಡಿಎಂಕೆ ನಾಯಕ ಸ್ಟಾಲಿನ್, ರಾಜಕೀಯ ಚತುರ ಕಿಶೋರ್ ಅವರ ಆಜ್ಞೆಗಳನ್ನು ಕೇಳುವುದಿಲ್ಲ. ಡಿಎಂಕೆ ಪಕ್ಷದ ನಾಯಕರ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದೆ. ಆದ್ದರಿಂದ ಸ್ಟಾಲಿನ್ ವಿಧಾನಸಭಾ ಚುನಾವಣೆಗೆ ತಂತ್ರಜ್ಞರನ್ನು ನೇಮಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...