Homeಮುಖಪುಟಪ್ರಶಾಂತ್‌ ಕಿಶೋರ್‌, ರಾಹುಲ್ ಗಾಂಧಿ ಭೇಟಿ-ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ

ಪ್ರಶಾಂತ್‌ ಕಿಶೋರ್‌, ರಾಹುಲ್ ಗಾಂಧಿ ಭೇಟಿ-ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ

- Advertisement -
- Advertisement -

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್‌ ಮಂಗಳವಾರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದೆಹಲಿಯ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿದ ಪ್ರಶಾಂತ್‌ ಕಿಶೋರ್‌ ಗಂಟೆಗಳ ಕಾಲ ಕಾಂಗ್ರೆಸ್‌ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಹಾಜರಿದ್ದರು.

ಜೂನ್‌ 21ರಂದು ಪ್ರಶಾಂತ್‌ ಕಿಶೋರ್‌ ಹಾಗೂ ಶರದ್‌ ಪವಾರ್‌ ಚರ್ಚೆ ನಡೆಸಿದ್ದು ದೇಶದಲ್ಲಿ ಹೊಸ ರಾಜಕೀಯ ಸಾಧ್ಯತೆಗಳ ಕುರಿತು ಚರ್ಚೆ ಆರಂಭವಾಗಿತ್ತು. 2 ವಾರಗಳ ನಂತರ ಅವರು ರಾಹುಲ್ ಗಾಂಧಿಯವರನ್ನು ಭೇಟಿಯಾಗಿರುವುದು ದೆಹಲಿ ರಾಜಕೀಯದಲ್ಲಿ ಹೊಸ ರಾಜಕೀಯ ಗಾಳಿ ಬೀಸುವ ಮುನ್ಸೂಚನೆಯಾಗಿದೆ ಎಂದು ಹಲವು ರಾಜಕೀಯ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಶರದ್ ಪವಾರ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ: ಪವಾರ್-ಕಿಶೋರ್ ಸರಣಿ ಭೇಟಿಗೆ ಮಹತ್ವ..

ಬಿಜೆಪಿ ವಿರುದ್ಧ ವಿರೊಧ ಪಕ್ಷಗಳ ಒಕ್ಕೂಟವನ್ನು ರಚಿಸುವ ಪ್ರಯತ್ನದಲ್ಲಿ ಅವರು ತೊಡಗಿದ್ದಾರೆ ಎಂಬ ಚರ್ಚೆ ಕಳೆದ ತಿಂಗಳಲ್ಲಿಯೇ ಆರಂಭವಾಗಿತ್ತು. ಪ್ರಶಾಂತ್ ಕಿಶೋರ್‌ ಭೇಟಿಯ ಮಾರನೇ ದಿನ ಶರದ್‌ ಪವಾರ್‌ ತಮ್ಮ ನಿವಾಸದಲ್ಲಿ ವಿರೋಧ ಪಕ್ಷಗಳ ಮುಖಂಡರ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಕಾಂಗ್ರೆಸ್‌ ನಾಯಕರ ಅನುಪಸ್ಥಿತಿ ತ್ರತೀಯ ರಂಗದ ರಚನೆಯ ಊಹಾಪೋಹಗಳು ಹರಿದಾಡಲು ಕಾರಣವಾಗಿತ್ತು. ಶರದ್‌ ಪವಾರ್ ತೃತೀಯ ರಂಗದ ಎಲ್ಲಾ ವದಂತಿಗಳನ್ನು ತಳ್ಳಿಹಾಕಿ ಕಾಂಗ್ರೆಸ್‌ ಇಲ್ಲದ ವಿರೊಧ ಪಕ್ಷಗಳ ಒಕ್ಕೂಟದಿಂದ ಬಿಜೆಪಿ ಎದುರಿಸುವುದು ಸಾಧ್ಯವಿಲ್ಲ ಎಂದಿದ್ದರು.

ಇದನ್ನೂ ಓದಿ: ಶರದ್ ಪವಾರ್‌ ಮತ್ತು ಪ್ರಶಾಂತ್‌ ಕಿಶೋರ್‌ 2 ನೇ ಭೇಟಿ; 2024 ರ ಚುನಾವಣೆಗೆ ವಿರೋಧ ಪಕ್ಷಗಳು ಸಜ್ಜು?

ಶರದ್‌ ಪವಾರ್‌ ಹೇಳಿಕೆಯ ಬೆನ್ನಲ್ಲೇ ಮಂಗಳವಾರ ಮಧ್ಯಾಹ್ನ ಪ್ರಶಾಂತ್‌ ಮತ್ತು ರಾಹುಲ್ ಭೇಟಿಯಾಗಿರುವುದು 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನ ನಡೆಯುತ್ತಿದೆ ಎಂಬ ವದಂತಿಗಳಿಗೆ ಪುಷ್ಠಿ ನೀಡಿದೆ.

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್, ಶಿವಸೇನೆ ಸಂಸದ ಸಂಜಯ್‌ ರಾವತ್‌ ಸೇರಿದಂತೆ ಹಲವು ನಾಯಕರು 2024ರ ಲೋಕಸಭೆ ಚುನಾವಣೆಯಲ್ಲಿ ವಿರೊಧ ಪಕ್ಷಗಳು ಒಟ್ಟಾಗಿ ಬಿಜೆಪಿ ವಿರುದ್ಧ ಸ್ಪರ್ಧಿಸಬೇಕು ಎಂಬ ಪ್ರಶಾಂತ್‌ ಕಿಶೊರ್‌ ಅಭಿಪ್ರಾಯಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಸಂಸತ್‌ ಮುಂಗಾರು ಅಧಿವೇಶನಕ್ಕೂ ವಾರ ಮೊದಲು ಪ್ರಶಾಂತ್‌ ಕಿಶೋರ್‌ ಮತ್ತು ಕಾಂಗ್ರೆಸ್‌ ನಾಯಕರ ಭೇಟಿ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಘಟಿಸುವ ಮುನ್ಸೂಚನೆ ನೀಡುತ್ತಿದೆ.

ಈ ಬಾರಿ ಸಂಸತ್‌ ಮುಂಗಾರು ಅಧಿವೇಶನ ಜುಲೈ 19ರಿಂದ ಅರಂಭವಾಗಿದ್ದು, ಕೋವಿಡ್‌ ಎರಡನೇ ಅಲೆಯ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯಗಳು ತೀವ್ರ ಚರ್ಚೆಗೆ ಗುರಿಯಾಗುವ ಸಾಧ್ಯತೆ ಇದೆ. ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿಯಲ್ಲಿ ಸುಮಾರು 9 ತಿಂಗಳಿನಿಂದ ಧರಣಿ ನಡೆಸುತ್ತಿದ್ದಾರೆ. ಇದೆರಡು ಮುಖ್ಯ ವಿಷಯಗಳು ಸಂಸತ್‌ ಅಧಿವೇಶನದಲ್ಲಿ ಪ್ರತಿಧ್ವನಿಸುವ ಸಾಧ್ಯತೆ ಇದೆ. ವಿರೋಧ ಪಕ್ಷಗಳು ಎಂದಿನ ತಮ್ಮ ಪರಸ್ಪರ ಕಚ್ಚಾಟವನ್ನು ನಿಲ್ಲಿಸಿ ಜನರ ಸಮಸ್ಯೆಯನ್ನು ಸರ್ಕಾರದ ಮುಂದಿಡಲಿವೆಯೇ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ವಿಪಕ್ಷಗಳನ್ನು ಭೇಟಿಯಾಗುತ್ತಿರುವ ಪ್ರಶಾಂತ್‌ ಕಿಶೋರ್‌: ಪರ್ಯಾಯ ಒಕ್ಕೂಟದ ಚರ್ಚೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...