Homeಮುಖಪುಟ2022ರ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಕೆಲಸ ಮಾಡಲಿರುವ ಪ್ರಶಾಂತ್ ಕಿಶೋರ್?: ಮೇ ತಿಂಗಳಲ್ಲಿ ಘೋಷಣೆ...

2022ರ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಕೆಲಸ ಮಾಡಲಿರುವ ಪ್ರಶಾಂತ್ ಕಿಶೋರ್?: ಮೇ ತಿಂಗಳಲ್ಲಿ ಘೋಷಣೆ ಸಾಧ್ಯತೆ

"ಕಾಂಗ್ರೆಸ್ ಸಂಪೂರ್ಣ ಮನಸ್ಸು ಮಾಡಿದರೆ ಕೇವಲ ಎರಡು ವರ್ಷದಲ್ಲಿ ಅಂದರೆ 2024 ರಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯ" ಎಂದು ಪ್ರಶಾಂತ್ ಕಿಶೋರ್ ಇತ್ತೀಚೆಗೆ ಹೇಳಿದ್ದರು.

- Advertisement -
- Advertisement -

ಕಾಂಗ್ರೆಸ್ ಪಕ್ಷದ ವಿರುದ್ಧ ಅದರಲ್ಲಿಯೂ ಗಾಂಧಿ ಕುಟುಂಬದ ವಿರುದ್ಧ ಟೀಕೆ ಮಾಡುತ್ತಿದ್ದ ಪ್ರಶಾಂತ್ ಕಿಶೋರ್ ಮತ್ತೆ ಗಾಂಧಿ ಕುಟುಂಬದ ಜೊತೆ ಮುಂದಿನ ಚುನಾವಣೆಗಳ ಕುರಿತು ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. 2022ರ ಅಂತ್ಯದಲ್ಲಿ ನಡೆಯುವ ಗುಜರಾತ್‌ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷದ ಪರ ಕೆಲಸ ಮಾಡುವಂತೆ ಮನವಿ ಮಾಡಲಾಗಿದ್ದು, ಈ ಕುರಿತು ಮೇ ತಿಂಗಳಿನಲ್ಲಿ ಕಿಶೋರ್ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡುವಂತೆ ಪ್ರಶಾಂತ್ ಕಿಶೋರ್ ಮೇಲೆ ಒತ್ತಡ ಹೇರಲಾಗುತ್ತಿರುವುದು ನಿಜ. ಆದರೆ ಕೇವಲ ಅದೊಂದು ಚುನಾವಣೆ ಮಾತ್ರವಲ್ಲದೇ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಬೃಹತ್ ಯೋಜನೆ ರೂಪಿಸುವುದು ಪ್ರಶಾಂತ್ ಕಿಶೋರ್‌ರವರ ಮಹತ್ವಕಾಂಕ್ಷೆಯಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ. ಈಗ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜೊತೆ ಮಾತುಕತೆ ಮುಂದುವರೆಸಲು ಬಯಸಿದ್ದು ಈ ಎಲ್ಲದರ ಕುರಿತು ಮೇ 02 ರಂದು ಪ್ರಶಾಂತ್ ಕಿಶೋರ್ ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನಲಾಗಿದೆ.

ಪ್ರಶಾಂತ್ ಕಿಶೋರ್‌ರವರು ಕಾಂಗ್ರೆಸ್‌ಗೆ ಸಲಹೆ ನೀಡುವುದನ್ನು ಬಿಟ್ಟು ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್ ಸೇರಬೇಕೆಂಬ ಚರ್ಚೆ ಕೂಡ ಬದಿಗೆ ಸರಿದಿಲ್ಲ. ಅದನ್ನು ಪರಿಗಣಿಸಿಯೇ ಪ್ರಶಾಂತ್ ಕಿಶೋರ್ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.

2021ರಲ್ಲಿ ಜುಲೈನಲ್ಲಿ ಪ್ರಶಾಂತ್ ಕಿಶೋರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿದ್ದವು. ಮುಖ್ಯವಾಗಿ ರಾಹುಲ್ ಗಾಂಧಿ ಮತ್ತು ಪ್ರಶಾಂತ್ ಕಿಶೋರ್ ಹಲವು ಸುತ್ತಿನ ಮಾತುಕತೆ ನಡೆಸಿದ್ದರು. ಆದರೆ ಆನಂತರ ಹಲವು ಭಿನ್ನಾಭಿಪ್ರಾಯಗಳ ಕಾರಣಕ್ಕೆ ಮಾತುಕತೆ ಮುರಿದು ಬಿದ್ದಿತ್ತು. ಆನಂತರ ಕಾಂಗ್ರೆಸ್ ನಾಯಕತ್ವದ ವಿರುದ್ಧ ಪ್ರಶಾಂತ್ ಕಿಶೋರ್ ಹಲವಾರು ಟೀಕೆಗಳನ್ನು ಮಾಡಿದ್ದರು.

“ಬಿಜೆಪಿ ಇನ್ನು ಹಲವು ವರ್ಷಗಳ ಕಾಲ ಭಾರತದ ರಾಜಕೀಯದ ಕೇಂದ್ರವಾಗಲಿದೆ… ಈ ಹಿಂದೆ ಕಾಂಗ್ರೆಸ್‌ ಇದ್ದಂತೆ ಈಗ ಬಿಜೆಪಿ ಕೂಡಾ ಗೆದ್ದರೂ, ಸೋತರೂ ಎಲ್ಲಿಯೂ ಹೋಗುವುದಿಲ್ಲ. ಆದರೆ ಸಮಸ್ಯೆ ಇರುವುದು ರಾಹುಲ್ ಗಾಂಧಿಗೆ. ಬಹುಶಃ ಜನರು ಬಿಜೆಪಿಯನ್ನು ಕಿತ್ತೊಗೆಯುತ್ತಾರೆ ಎಂದು ಅವರು ಭಾವಿಸುತ್ತಾರೆ, ಅದು ಆಗುತ್ತಿಲ್ಲ, ಆ ಅರಿವು ರಾಹುಲ್ ಗಾಂಧಿಗೆ ಇಲ್ಲ” ಎಂದು ಪ್ರಶಾಂತ್‌ ಕಿಶೋರ್‌ 2021ರ ಅಕ್ಟೋಬರ್‌ನಲ್ಲಿ ರಾಹುಲ್ ಗಾಂಧಿ ಮೇಲೆ ವಾಗ್ದಾಳಿ ನಡೆಸಿದ್ದರು.

“ಕಾಂಗ್ರೆಸ್ ಪ್ರತಿನಿಧಿಸುವ ಚಿಂತನೆ ಮತ್ತು ಅದಕ್ಕಿರುವ ಸಾಮರ್ಥ್ಯವು ಪ್ರಬಲ ಪ್ರತಿಪಕ್ಷಕ್ಕೆ ಅತ್ಯಗತ್ಯ. ಆದರೆ ಕಾಂಗ್ರೆಸ್‌ನ ನಾಯಕತ್ವವು ವ್ಯಕ್ತಿಯೊಬ್ಬರ ದೈವಿಕ ಹಕ್ಕಲ್ಲ. ವಿಶೇಷವಾಗಿ ಕಳೆದ 10 ವರ್ಷಗಳಲ್ಲಿ ಪಕ್ಷವು 90% ಕ್ಕಿಂತ ಹೆಚ್ಚು ಚುನಾವಣೆಗಳನ್ನು ಸೋತಿದೆ. ವಿರೋಧ ಪಕ್ಷವು ತನ್ನ ನಾಯಕತ್ವವನ್ನು ಪ್ರಜಾಸತ್ತಾತ್ಮಕವಾಗಿ ನಿರ್ಧರಿಸಲಿ ಎಂದು ಡಿಸೆಂಬರ್ ವೇಳೆಗೆ ಪ್ರಶಾಂತ್ ಕಿಶೋರ್ ನುಡಿದಿದ್ದರು. ಪ್ರಶಾಂತ್ ಕಿಶೋರ್‌ರವರ ಎಷ್ಟೆಲ್ಲಾ ಟೀಕೆಗಳ ನಡುವೆಯೂ ರಾಹುಲ್ ಗಾಂಧಿ ತಾಳ್ಮೆ ವಹಿಸಿದ್ದಾರೆ ಹೊರತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದು ಈಗ ಮತ್ತೊಂದು ಸುತ್ತಿನ ಮಾತುಕತೆಗೆ ಅನುಕೂಲವಾಗಲಿದೆ ಎನ್ನಲಾಗುತ್ತಿದೆ. ಅದೇ ಸಂದರ್ಭದಲ್ಲಿ ಪ್ರಶಾಂತ್ ಕಿಶೋರ್ ಸಹ ಕಾಂಗ್ರೆಸ್ ಮನಸ್ಸು ಮಾಡಿದ್ದರೆ 2024ರಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯ ಎಂದು ಉಚ್ಚರಿಸಿದ್ದಾರೆ.

ಐದು ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಇಂಡಿಯಾ ಟುಡೇ ಚಾನೆಲ್ ಜೊತೆ ಮಾತನಾಡಿದ್ದ ಪ್ರಶಾಂತ್ ಕಿಶೋರ್ “ಕಾಂಗ್ರೆಸ್ ಸಂಪೂರ್ಣ ಮನಸ್ಸು ಮಾಡಿದರೆ ಕೇವಲ ಎರಡು ವರ್ಷದಲ್ಲಿ ಅಂದರೆ 2024 ರಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯ” ಎಂದು ನುಡಿದಿದ್ದರು.

“ಬಿಜೆಪಿ ಮತ್ತು ಮೋದಿ ಎಷ್ಟೇ ಪ್ರಭಾವಿಯಾಗಿದ್ದರೂ ಈಶಾನ್ಯ ಭಾರತ ಮತ್ತು ದಕ್ಷಿಣ ಭಾರತದ 200 ಸ್ಥಾನಗಳಲ್ಲಿ (ಬಿಹಾರ, ಪ.ಬಂಗಾಳ, ಒಡಿಸ್ಸಾ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಕೇರಳ) ಇಂದಿಗೂ 50 ಸೀಟು ಪಡೆಯಲು ತಿಣುಕಾಡುತ್ತಿದೆ. ಅಂದರೆ ಬಿಹಾರ, ಓಡಿಸ್ಸಾ ಮತ್ತು ಬಂಗಾಳದಲ್ಲಿ ಬಿಜೆಪಿ ಯಶಸ್ವಿಯಾಗಿದ್ದರೂ ಸಹ 50ಕ್ಕಿಂತ ಹೆಚ್ಚು ಸೀಟು ಪಡೆಯಲು ಸಾಧ್ಯವಾಗುತ್ತಿಲ್ಲ. ಬಿಜೆಪಿಗೆ ಬಿಹಾರದಲ್ಲಿ 18, ಬಂಗಾಳದಲ್ಲಿ 18,  ಒಡಿಸ್ಸಾದಲ್ಲಿ 12, ತೆಲಂಗಾಣದಲ್ಲಿ 4-5 ಬಿಜೆಪಿ ಸಂಸದರಿದ್ದಾರೆ ಅಷ್ಟೆ. ಅಂದರೆ 150 ರಷ್ಟು ಸೀಟುಗಳು ಇಂದಿಗೂ ವಿರೋಧ ಪಕ್ಷಗಳ ಕೈಯಲ್ಲಿವೆ. ಅವರೆಲ್ಲರೂ ಬಿಜೆಪಿಯನ್ನು ವಿರೋಧಿಸುತ್ತಿದ್ದಾರೆ” ಎಂದು ಪ್ರಶಾಂತ್ ಕಿಶೋರ್ ತಿಳಿಸಿದ್ದರು.

ಉಳಿದ 350ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಯಾವುದೇ ಪಕ್ಷವಾದರೂ ಅಂದರೆ ಆಪ್, ತೃಣಮೂಲ ಕಾಂಗ್ರೆಸ್ ಅಥವಾ ಮರುಹುಟ್ಟಿನ ಕಾಂಗ್ರೆಸ್ ಪಕ್ಷವಾಗಲಿ 120 ಸೀಟುಗಳನ್ನು ಗೆದ್ದುಕೊಂಡಲ್ಲಿ ರಾತ್ರೋರಾತ್ರಿ ಸಂಪೂರ್ಣ ಪರಿಸ್ಥಿತಿ ಬದಲಾಗಲಿದೆ. ಸೈದ್ದಾಂತಿಕವಾಗಿ ಹೇಳಬಹುದಾದರೆ ಕೇವಲ 2 ವರ್ಷದಲ್ಲಿ ಬಿಜೆಪಿಯನ್ನು ಸೋಲಿಸಬಹುದಾಗಿದೆ. ಕಾಂಗ್ರೆಸ್ ಥರದ ಪಕ್ಷ 120 ಸೀಟುಗಳನ್ನು ಗೆಲ್ಲಲಾಗುವುದಿಲ್ಲ ಎಂದು ಹೇಳಲು ಸಾಧ್ಯವೇ? ಈಗ 50 ಕ್ಷೇತ್ರಗಳಲ್ಲಿ ಗೆದ್ದಿರುವ ಕಾಂಗ್ರೆಸ್ ಇನ್ನು ಎರಡು ವರ್ಷಗಳಲ್ಲಿ ಅದನ್ನು ಡಬಲ್ ಮಾಡುವುದು ಸಾಧ್ಯವಿದೆ ಎಂದು ಪ್ರಶಾಂತ್ ಕಿಶೋರ್ ಲೆಕ್ಕಾಚಾರ ಹಾಕಿದ್ದಾರೆ.

ಅದಕ್ಕಾಗಿ ಕಾಂಗ್ರೆಸ್ ಅನ್ನು ಪುನಃ ಸ್ಥಾಪಿಸಬೇಕಾಗಿದೆ. ಅದರ ಆತ್ಮ, ಮುನ್ನೋಟ ಮತ್ತು ಸೈದ್ದಾಂತಿಕತೆಯನ್ನು ಇಟ್ಟುಕೊಂಡು ಉಳಿದೆಲ್ಲವನ್ನು ಬದಲಿಸಬೇಕಿದೆ. ಕಾಂಗ್ರೆಸ್ ಮನಸ್ಸು ಮಾಡಿ ಕೆಲಸ ಮಾಡಿದರೆ ಇದನ್ನು ಸಾಧಿಸಬಹುದು. ಬಿಜೆಪಿ ಸೋಲಿಸಲು ಇತರ ವಿರೋಧ ಪಕ್ಷಗಳ ಬೆಂಬಲ ಖಂಡಿತ ಬೇಕಾಗಿದೆ. ಅದಕ್ಕಾಗಿ ಮೊದಲಿಗೆ ಕಾಂಗ್ರೆಸ್ ಪ್ರತಿಪಕ್ಷಗಳ ಎದುರು ಬಿಜೆಪಿಯನ್ನು ಸೋಲಿಸುವ ಮುನ್ನೋಟವನ್ನು ಮುಂದಿಡಬೇಕು. ಎರಡನೇದಾಗಿ ಇದರಿಂದ ಅತಿ ಹೆಚ್ಚು ಲಾಭ ತನಗಾಗಲಿದೆ ಎನ್ನುವುದನ್ನು ಮನಗಾಣಬೇಕು ಮತ್ತು ಮೂರನೇಯದಾಗಿ ಬಿಜೆಪಿಯನ್ನು ಮಣಿಸಿದ ನಂತರ ಯಾರು ನಾಯಕತ್ವ ವಹಿಸಬೇಕು ಎಂಬುದನ್ನು ಪಡೆದ ಸೀಟುಗಳ ಆಧಾರದಲ್ಲಿ ನಿರ್ಧರಿಸಬೇಕು. ಆದರೆ ಕಾಂಗ್ರೆಸ್ ಇಂದು ಇದಕ್ಕೆ ವಿರುದ್ಧವಾಗಿ ಚಿಂತಿಸುತ್ತಿದೆ. ಬಹುದೊಡ್ಡ ಪಕ್ಷವಾಗಿ ಕಾಂಗ್ರೆಸ್‌ಗೆ ಖಂಡಿತ ಅನುಕೂಲಗಳಿವೆ, ಅದು ತನ್ನ ಚಿಂತನೆಯನ್ನು ಅದಲು ಬದಲು ಮಾಡಿದರೆ ಖಂಡಿತ ಬಿಜೆಪಿಯನ್ನು ಸೋಲಿಸಲು ಸಾಧ್ಯ ಎಂದು ಕಿಶೋರ್ ವಿಶ್ವಾಸ ವ್ಯಕ್ತಪಡಿಸಿದ್ದರು.

ಟಿಎಂಸಿಯ ಮಮತಾ ಬ್ಯಾನರ್ಜಿ, ಎನ್‌ಸಿಪಿಯ ಶರದ್ ಪವಾರ್, ಆಪ್‌ನ ಅರವಿಂದ್ ಕೇಜ್ರಿವಾಲ್, ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ತಮಿಳುನಾಡಿನ ಸ್ಟಾಲಿನ್ ಜೊತೆ ಉತ್ತಮ ಸಂಬಂಧ ಹೊಂದಿರುವ ಪ್ರಶಾಂತ್ ಕಿಶೋರ್ 2024ರ ಮುಂಚೆ ಈ ಎಲ್ಲಾ ವಿರೋಧ ಪಕ್ಷಗಳನ್ನು ಬಿಜೆಪಿ ವಿರುದ್ಧ ಐಕ್ಯ ಶಕ್ತಿಯಾಗಿ ಅಣಿನೆರೆಸಲು ಕಿಶೋರ್ ಬಯಸಿದ್ದಾರೆ. ಇದರ ಭಾಗವಾಗಿ ಅವರು ಇತ್ತೀಚೆಗೆ ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್‌ ಕುಮಾರ್‌ರವರನ್ನು ಸಹ ಭೇಟಿ ಮಾಡಿದ್ದಾರೆ. ಎರಡು ವರ್ಷಗಳ ಹಿಂದೆ ಜೆಡಿಯುನಿಂದ ಉಚ್ಛಾಟಿತರಾಗಿದ್ದ ಪ್ರಶಾಂತ್ ಕಿಶೋರ್ ವೈಮನಸ್ಸು ಮರೆತು ನಿತೀಶ್‌ ಕುಮಾರ್‌ರವರನ್ನು ಭೇಟಿ ಮಾಡಿರುವುದು ಅವರ ನರೇಂದ್ರ ಮೋದಿ ವಿರುದ್ಧ ವಿರೋಧ ಪಕ್ಷಗಳನ್ನು ಗಟ್ಟಿಗೊಳಿಸುವ ಪ್ರಯತ್ನದ ಭಾಗ ಎನ್ನಲಾಗುತ್ತಿದೆ. ಈಗ ಕಾಂಗ್ರೆಸ್ ನಾಯಕತ್ವದ ಜೊತೆ ಮಾತುಕತೆ ಪುನಃ ಆರಂಭಿಸಿದ್ದಾರೆ. ಫಲಿತಾಂಶ ಏನಾಗಲಿದೆ ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ, ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...