Homeಮುಖಪುಟಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

- Advertisement -
- Advertisement -

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ ಅಕ್ರಮಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳು ನಡೆದಿವೆ ಎಂದು ಪಕ್ಷವು ಗಂಭೀರ ಆರೋಪ ಮಾಡಿದೆ. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ನೈತಿಕತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ, ಫಲಿತಾಂಶಗಳನ್ನು ಅಸಿಂಧುಗೊಳಿಸಿ, ರಾಜ್ಯದಲ್ಲಿ ಮತ್ತೊಮ್ಮೆ ಹೊಸದಾಗಿ ಚುನಾವಣೆ ನಡೆಸಬೇಕೆಂದು ಮನವಿ ಮಾಡಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ, ರಾಜ್ಯದ ಸುಮಾರು 25 ರಿಂದ 35 ಲಕ್ಷ ಮಹಿಳಾ ಮತದಾರರಿಗೆ ತಲಾ 10,000 ರೂಪಾಯಿಗಳನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ. ‘ಮುಖ್ಯಮಂತ್ರಿ ಮಹಿಳಾ ರೋಜಗಾರ್ ಯೋಜನೆ’ಯ ಅಡಿಯಲ್ಲಿ ಈ ಹಣವನ್ನು ಹಂಚಲಾಗಿದ್ದು, ಚುನಾವಣೆ ಘೋಷಣೆಯಾದ ನಂತರವೇ ಹೊಸ ಫಲಾನುಭವಿಗಳನ್ನು ಈ ಯೋಜನೆಗೆ ಸೇರ್ಪಡಿಸಲಾಗಿದೆ. ಈ ಕ್ರಮವು ಮತದಾರರಿಗೆ ಆಮಿಷವೊಡ್ಡುವ ‘ಭ್ರಷ್ಟಾಚಾರದ ನಡೆ’ ಮತ್ತು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯ ಸಾಂವಿಧಾನಿಕ ಆಶಯಗಳ ಉಲ್ಲಂಘನೆಯಾಗಿದೆ ಎಂದು ಜನ್‌ ಸುರಾಜ್ ತನ್ನ ಅರ್ಜಿಯಲ್ಲಿ ಹೇಳಿದೆ.

ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ ಹೊಸ ಫಲಾನುಭವಿಗಳನ್ನು ಸೇರಿಸುವುದು ಮತ್ತು ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಅವರಿಗೆ ಹಣ ಪಾವತಿ ಮಾಡಿರುವುದು ಕಾನೂನುಬಾಹಿರ ಮತ್ತು ಸಂವಿಧಾನದ 14, 21, 112, 202 ಮತ್ತು 324 ನೇ ವಿಧಿಗಳ ಉಲ್ಲಂಘನೆಯಾಗಿದೆ ಎಂದು ಘೋಷಿಸಲು ಅರ್ಜಿಯಲ್ಲಿ ಕೋರಲಾಗಿದೆ. ಸಂವಿಧಾನದ 324ನೇ ವಿಧಿ ಮತ್ತು ಜನಪ್ರತಿನಿಧಿ ಕಾಯ್ದೆ 1951ರ 123ನೇ ವಿಧಿಯಡಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಲಾಗಿದೆ.

ಎಸ್ ಸುಬ್ರಮಣಿಯಂ ಬಾಲಾಜಿ VS ಸ್ಟೇಟ್ ಆಫ್ ತಮಿಳುನಾಡು (2013) 9 ಎಸ್‌ಸಿಸಿ 659 ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ನಿರ್ದೇಶನಗಳನ್ನು ಜಾರಿಗೆ ತರಲು ಮತ್ತು ಉಚಿತ ಕೊಡುಗೆಗಳು, ನೇರ ಪ್ರಯೋಜನ ವರ್ಗಾವಣೆ ಯೋಜನೆಗಳು ಇತ್ಯಾದಿಗಳ ಕುರಿತು ಸಮಗ್ರ ಮಾರ್ಗಸೂಚಿಗಳನ್ನು ಸಿದ್ಧಪಡಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡಲು ಅರ್ಜಿಯಲ್ಲಿ ಕೋರಲಾಗಿದೆ

ಅಲ್ಲದೆ, ಮತದಾನದ ಎರಡೂ ಹಂತಗಳಲ್ಲಿ ಸ್ವಸಹಾಯ ಗುಂಪು ‘ಜೀವಿಕ’ದಿಂದ 1.8 ಲಕ್ಷ ಮಹಿಳಾ ಫಲಾನುಭವಿಗಳನ್ನು ಮತಗಟ್ಟೆಯಲ್ಲಿ ನಿಯೋಜಿಸಿರುವುದು ಕಾನೂನುಬಾಹಿರ ಮತ್ತು ಅನ್ಯಾಯವಾಗಿದೆ ಎಂದು ಘೋಷಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳ ಮೇಲೆ ಪ್ರಭಾವ ಬೀರುವಂತಹ ಉಚಿತ ಕೊಡುಗೆಗಳು, ನೇರ ನಗದು ವರ್ಗಾವಣೆ ಮತ್ತು ಇತರ ಜನ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲು ಚುನಾವಣಾ ಆಯೋಗವು ಒಂದು ನಿರ್ದಿಷ್ಟ ಕನಿಷ್ಠ ಅವಧಿಯನ್ನು ನಿಗದಿಪಡಿಸಬೇಕು ಎಂದು ಅರ್ಜಿದಾರರು ವಿನಂತಿಸಿದ್ದಾರೆ.

ವಿಶೇಷವಾಗಿ, ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳು ಚುನಾವಣೆ ಘೋಷಣೆಯಾಗುವ ಕನಿಷ್ಠ ಆರು ತಿಂಗಳ ಮೊದಲೇ ಇಂತಹ ಯೋಜನೆಗಳ ಅನುಷ್ಠಾನವನ್ನು ಪೂರ್ಣಗೊಳಿಸಬೇಕು ಅಥವಾ ಸ್ಥಗಿತಗೊಳಿಸಬೇಕು ಎಂಬ ನಿಯಮವನ್ನು ಜಾರಿಗೆ ತರಲು ನಿರ್ದೇಶನ ನೀಡುವಂತೆ ಕೋರಿದ್ದಾರೆ.

ಚುನಾವಣೆ ಹತ್ತಿರವಿರುವಾಗ ಇಂತಹ ಯೋಜನೆಗಳನ್ನು ಘೋಷಿಸುವುದು ಅಥವಾ ಹಣ ಹಂಚುವುದು ಮತದಾರರ ನಿರ್ಧಾರದ ಮೇಲೆ ಪ್ರಭಾವ ಬೀರುತ್ತದೆ ಎಂಬುದು ಪಕ್ಷದ ವಾದವಾಗಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಶುಕ್ರವಾರ (ಫೆ.6) ಈ ಅರ್ಜಿ ವಿಚಾರಣೆ ನಡೆಸಲಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್‌ ಲಾ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...