Homeಮುಖಪುಟವಿಪಕ್ಷಗಳನ್ನು ಭೇಟಿಯಾಗುತ್ತಿರುವ ಪ್ರಶಾಂತ್‌ ಕಿಶೋರ್‌: ಪರ್ಯಾಯ ಒಕ್ಕೂಟದ ಚರ್ಚೆ?

ವಿಪಕ್ಷಗಳನ್ನು ಭೇಟಿಯಾಗುತ್ತಿರುವ ಪ್ರಶಾಂತ್‌ ಕಿಶೋರ್‌: ಪರ್ಯಾಯ ಒಕ್ಕೂಟದ ಚರ್ಚೆ?

ರಾಜ್ಯದ ಅಭಿವೃದ್ಧಿಗೆ ವಿಶ್ವಾಸಾರ್ಹ ಪರ್ಯಾಯವನ್ನು ಒದಗಿಸುವುದಕ್ಕಾಗಿ ಕಿಶೋರ್, ಮಾಂಝಿ, ಕನ್ಹಯ್ಯ ಕುಮಾರ್ ಮತ್ತು ಎಡ ಪಕ್ಷಗಳೊಂದಿಗೆ ಸೇರಲು ನಾನು ಸಿದ್ಧನಿದ್ದೇನೆ" ಎಂದು ಪಪ್ಪು ಯಾದವ್ ಹೇಳಿದ್ದಾರೆ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಮುಂದಿನ ನಡೆಯ ಬಗ್ಗೆ ಚರ್ಚಿಸಲು ಬಿಹಾರದ ವಿವಿಧ ವಿರೋಧ ಪಕ್ಷಗಳ ರಾಜಕೀಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) ನಿಂದ ಇತ್ತೀಚೆಗೆ ವಜಾಗೊಳಿಸಲ್ಪಟ್ಟ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಬಿಹಾರದ ಯುವಜನರನ್ನು ಸಂಪರ್ಕಿಸಲು ಗುರುವಾರ ತಮ್ಮ ‘ಬಾತ್ ಬಿಹಾರ ಕಿ’ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಬಿಹಾರವನ್ನು ಅಭಿವೃದ್ಧಿಪಡಿಸಲು ಕಿಶೋರ್ ಅವರೊಂದಿಗೆ ಕೈಜೋಡಿಸಲು ಬಯಸುವ ಸಮಾನ ಮನಸ್ಕ ಯುವಜನರ ನೋಂದಣಿಯನ್ನು ಈ ಅಭಿಯಾನ ಪ್ರಾರಂಭಿಸಿದೆ. ಕಿಶೋರ್ ಅವರ ‘ಬಾತ್ ಬಿಹಾರ ಕಿ’ ಕಾರ್ಯಕ್ರಮವು ಮುಂದಿನ 10 ವರ್ಷಗಳಲ್ಲಿ ಬಿಹಾರವನ್ನು ದೇಶದ 10 ಅತ್ಯುತ್ತಮ ರಾಜ್ಯಗಳಲ್ಲಿ ಒಂದನ್ನಾಗಿ ಮಾಡುವ ಗುರಿಯನ್ನು ಹೊಂದಿದೆ.

ಕಿಶೋರ್‌ ಗುರುವಾರ ಹಿಂದೂಸ್ತಾನಿ ಅವಮ್ ಮೋರ್ಚಾ ಮುಖ್ಯಸ್ಥ ಜಿತಾನ್ ರಾಮ್ ಮಾಂಝಿಯನ್ನು ಭೇಟಿಯಾಗಿದ್ದಾರೆ. ಅದಕ್ಕೂ ಮುಂಚೆ ಆರ್‌ಎಲ್‌ಎಸ್‌ಪಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಅವರನ್ನು ಭೇಟಿ ಮಾಡಿದ್ದರು. ಮಾಂಝಿ ಮತ್ತು ಕುಶ್ವಾಹ ಇಬ್ಬರೂ ಮಹಾ ಮೈತ್ರಿಕೂಟದ ನಾಯಕರಾಗಿದ್ದು, ಇದರಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಕೂಡ ಸೇರಿವೆ.

ಕಿಶೋರ್ ಅವರನ್ನು ಭೇಟಿಯಾಗಿದ್ದನ್ನು ದೃಢಪಡಿಸಿದ ಆರ್‌ಎಲ್‌ಎಸ್‌ಪಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಅವರು ಸಭೆಯಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಮಾತನಾಡಲು ನಿರಾಕರಿಸಿದ್ದಾರೆ. ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತು ರೈತರ ದುಃಸ್ಥಿತಿಯ ಬಗ್ಗೆ ಸರ್ಕಾರ ಪೂರ್ಣ ವೈಫಲ್ಯ ಕಂಡಿದ್ದರಿಂದ ಆರ್‌ಎಲ್‌ಎಸ್‌ಪಿ ಜೆಡಿಯು ನೇತೃತ್ವದ ಸರ್ಕಾರವನ್ನು ಗುರಿಯಾಗಿಸಿಕೊಂಡು ಹೋರಾಟ ನಡೆಸಿತ್ತು. ಅವರ ಪಕ್ಷವು ಕಿಶೋರ್‌ರೊಂದಿಗೆ ಒಂದು ಸಾಮಾನ್ಯ ನೆಲೆಯನ್ನು ಹೊಂದಿದೆ ಎಂದು ಹೇಳಿದ್ದಾರೆ.

“ಸೈದ್ಧಾಂತಿಕ ವಿಷಯದಲ್ಲಿ ನಾವು ಒಂದೇ ಪುಟದಲ್ಲಿದ್ದೇವೆ. ಇದು ಅನೌಪಚಾರಿಕ ಸಭೆಯಾಗಿದ್ದು ಬಿಹಾರದ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದೆ” ಎಂದು ಪಕ್ಷದ ಮಾಜಿ ರಾಷ್ಟ್ರೀಯ ಪದಾಧಿಕಾರಿ ಫಜಲ್ ಇಮಾಮ್ ಮುಲ್ಲಿಕ್ ಹೇಳಿದ್ದಾರೆ.

ಜನ್‌ ಅಧಿಕಾರ್‌ ಪಕ್ಷದ ಮುಖ್ಯಸ್ಥ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರು ಕಿಶೋರ್ ಅವರು ಬಿಹಾರದ ಭವಿಷ್ಯದಲ್ಲಿ ಬದಲಾವಣೆಗಾಗಿ ಕೆಲಸ ಮಾಡುವ ಉದ್ದೇಶವನ್ನು ಶ್ಲಾಘಿಸಿದರು, “ಜನರು ಆಡಳಿತ ಮತ್ತು ವಿರೋಧ ಪಕ್ಷಗಳಿಂದ ಬೇಸರಗೊಂಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ ವಿಶ್ವಾಸಾರ್ಹ ಪರ್ಯಾಯವನ್ನು ಒದಗಿಸುವುದಕ್ಕಾಗಿ ಕಿಶೋರ್, ಮಾಂಝಿ, ಕನ್ಹಯ್ಯ ಕುಮಾರ್ ಮತ್ತು ಎಡ ಪಕ್ಷಗಳೊಂದಿಗೆ ಸೇರಲು ನಾನು ಸಿದ್ಧನಿದ್ದೇನೆ” ಎಂದು ಅವರು ಹೇಳಿದ್ದಾರೆ.

ಬಿಹಾರದ ಅಭಿವೃದ್ದಿಗಾಗಿ ರಾಜಕೀಯ ಬಿಟ್ಟು ಕೆಲಸ ಮಾಡುತ್ತೇನೆಂದು ಘೋಷಿಸಿದ ಪ್ರಶಾಂತ್‌ ಕಿಶೋರ್‌ ಈಗ ಯಾಕೆ ರಾಜಕೀಯ ಮುಖಂಡರನ್ನು ಭೇಟಿಯಾಗುತ್ತಿದ್ದಾರೆ ಎಂದು ಹಲವರು ಪ್ರಶ್ನಿಸಿದ್ದಾರೆ. ಜೆಡಿಯು ಇವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲು ಮುಂದಾಗಿದ್ದು ಶಾಸಕನೊಬ್ಬ ಪ್ರಶಾಂತ್‌ ಕಿಶೋರ್‌ ಯಾರು ಎಂದು ಕರೆಯುವ ಮೂಲಕ ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...