ಸುಮಲತಾ

ಮಂಡ್ಯದ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ. ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ. ಆ ಯಮ್ಮನ ನಾನು ಹ್ಯಾಂಡಲ್ ಮಾಡುತ್ತೇನೆ. ಇವು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮೈಸೂರು ಕೊಡುಗು ಸಂಸದ ಪ್ರತಾಪ್‌ ಸಿಂಹರವರು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದಾಗ ದೂರವಾಣಿ ಕರೆಯೊಂದರಲ್ಲಿ ಮಾತನಾಡಿದ ಅಣಿಮುತ್ತುಗಳು. ಈ ಹೇಳಿಕೆಯೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವಿವಾದವೆಬ್ಬಿಸಿದೆ.

ಸಂಸದ ಪ್ರತಾಪ್ ಸಿಂಹ ಬೆಂಗಳೂರಿಗೆ ತೆರಳುತ್ತಿದ್ದಾಗ ಯಲಿಯೂರು ಬಳಿ ಕಾರ್ಯಕರ್ತರ ಅಹವಾಲು ಸ್ವೀಕರಿಸುತ್ತಿದ್ದರು. ಆ ವೇಳೆ ಕಾರ್ಯಕ್ರಮದ ವೇದಿಕೆಯಲ್ಲಿದ್ದಾಗಲೇ ಸುಮಲತಾ ವಿರುದ್ಧ ಅಧಿಕಾರಿಯೊಬ್ಬರು ಪ್ರತಾಪ್ ಸಿಂಹರವರಿಗೆ ಫೋನ್ ಮಾಡಿ ದೂರು ಹೇಳಿದಾಗ, ಸುಮಲತಾ ವಿರುದ್ಧವೇ ಮಾತನಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ದೇವೇಗೌಡರ ಕುಟುಂಬದವರನ್ನು ಸೋಲಿಸಲು ಸುಮಲತಾ ಅವರನ್ನು ಗೆಲ್ಲಿಸಿದ್ದಾರೆ. ಅವರು ಯಾವ ಕೆಲಸ ಮಾಡುವುದಕ್ಕೂ ಬಿಡುವುದಿಲ್ಲ. ನನ್ನದೊಂದು ಪ್ರಪೋಸಲ್. ಮಂಡ್ಯದ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ. ಆ ಯಮ್ಮನಾ ನಾನು ಹ್ಯಾಂಡಲ್ ಮಾಡುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಬೆಂಗಳೂರು–ಮೈಸೂರು ದಶಪಥ ಕಾಮಗಾರಿಯ ಬಗ್ಗೆ ಅಧಿಕಾರಿಯೊಬ್ಬರ ಜೊತೆ ಫೋನ್‌ನಲ್ಲಿ ಈ ಸಂಭಾಷಣೆ ನಡೆದಿದ್ದು, ಯಾರೋ ಅದನ್ನು ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ. ಈ ಕುರಿತು ಸುಮಲತಾರವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಪ್ರತಾಪ್ ಸಿಂಹ ಒಬ್ಬ ಬ್ಲೂ ಫಿಲ್ಮ್ ಹೀರೋ: ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಆರೋಪ

ಇದನ್ನೂ ಓದಿ: ಮೋದಿ ಹೆಸರೇಳದಿದ್ದರೆ ಸೂಲಿಬೆಲೆ ಭಾಷಣ ಕೇಳಲು ಯಾರು ಬರುತ್ತಾರೆ? ಪ್ರತಾಪ್ ಸಿಂಹ ತಿರುಗೇಟು..

LEAVE A REPLY

Please enter your comment!
Please enter your name here