Homeಮುಖಪುಟಪ್ರತಾಪ್ ಸಿಂಹರವರೆ ಸುಳ್ಳು ಹೇಳುವುದನ್ನು ನಿಲ್ಲಿಸಿ: ದಶಪಥ ರಸ್ತೆ ಕಿತ್ತುಹೋದ ಬಗ್ಗೆ ಕಾಂಗ್ರೆಸ್, ಪ್ರಜ್ಞಾವಂತರ ಕಿಡಿ

ಪ್ರತಾಪ್ ಸಿಂಹರವರೆ ಸುಳ್ಳು ಹೇಳುವುದನ್ನು ನಿಲ್ಲಿಸಿ: ದಶಪಥ ರಸ್ತೆ ಕಿತ್ತುಹೋದ ಬಗ್ಗೆ ಕಾಂಗ್ರೆಸ್, ಪ್ರಜ್ಞಾವಂತರ ಕಿಡಿ

ಮಾಧ್ಯಮಗಳೇ, ರಸ್ತೆ ಕಿತ್ತು ಬಂದಿಲ್ಲ, Expansion joint ಬಳಿ ಇದ್ದ ಸಣ್ಣ ನ್ಯೂನ್ಯತೆಯನ್ನು ಅನ್ನು ಸರಿಪಡಿಸಲಾಗುತ್ತಿದೆ ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದರು.

- Advertisement -
- Advertisement -

ಮಾಧ್ಯಮಗಳೇ, ರಸ್ತೆ ಕಿತ್ತು ಬಂದಿಲ್ಲ, Expansion joint ಬಳಿ ಇದ್ದ ಸಣ್ಣ ನ್ಯೂನ್ಯತೆಯನ್ನು ಅನ್ನು ಸರಿಪಡಿಸಲಾಗುತ್ತಿದೆ ಎಂಬ ಸಂಸದ ಪ್ರತಾಪ್ ಸಿಂಹರವರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ರಸ್ತೆ ಕಿತ್ತು ಬಂದಿರುವುದು ನಿಜವಾಗಿದ್ದರೂ ಸುಳ್ಳು ಹೇಳಿ ಜನರನ್ನು ಮಂಗ ಮಾಡಬೇಡಿ ಎಂಬ ಆಕ್ರೋಶ ವ್ಯಕ್ತವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದರು. ಆದರೆ ಉದ್ಘಾಟನೆಯಾದ ಮರುದಿನವೇ ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ರಸ್ತೆಯ ಟಾರ್ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆಯುತ್ತಿದ್ದು, ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ.

ಈ ಕುರಿತು ಹಲವು ಮಾಧ್ಯಮಗಳು ಚಿತ್ರ ಸಮೇತ ವರದಿ ಪ್ರಕಟಿಸಿದ್ದವು. ಇದೇ ಜಾಗದಲ್ಲಿ ಹಿಂದೆ ಲಾರಿ ಪಲ್ಟಿಯಾಗಿತ್ತು ಮತ್ತು ಕೆಎಸ್‌ಆರ್‌ಟಿಸಿ ಬಸ್ ಸೇರಿದಂತೆ ಅನೇಕ ಅಪಘಾತಗಳು ಸಂಭವಿಸಿದ್ದವು ಎಂದು ವರದಿಯಾಗಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರವರ ರಸ್ತೆಯು ಹಿಂದೆ ಹೀಗಿತ್ತು ಎಂದು ಚಿತ್ರವೊಂದನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಆ ಮೂಲಕ ರಸ್ತೆ ಕಿತ್ತು ಬಂದಿರುವ ಆರೋಪವನ್ನು ನಿರಾಕರಿಸಿದ್ದರು.

ಆದರೆ ಸಂಸದ ಪ್ರತಾಪ್ ಸಿಂಹರವರು ಬೇರೆ ಫೋಟೊ ತೋರಿಸಿ, ರಸ್ತೆ ಸರಿಯಾಗಿತ್ತು ಎಂದು ಸುಳ್ಳು ಹೇಳುತ್ತಿದ್ದಾರೆ. ಅವರು ಹಂಚಿಕೊಂಡಿರುವ ಫೋಟೊದಲ್ಲಿನ ರಸ್ತೆ ಬದಿಯ ಡಿವೈಡರ್‌ಗೆ ಹಳದಿ – ಕಪ್ಪು ಬಣ್ಣ ಬಳಿಯಲಾಗಿದೆ. ಆದರೆ ಸದ್ಯ ಕಿತ್ತು ಹೋಗಿರುವ ರಸ್ತೆ ಬದಿಯ ಡಿವೈಡರ್‌ಗೆ ಬಿಳಿ ಮತ್ತು ಕಪ್ಪು ಬಣ್ಣ ಬಳಿಯಲಾಗಿದೆ. ಅಂದರೆ ಸಂಸದರು ತಮ್ಮ ಹುಳುಕು ಮುಚ್ಚಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಸೇರಿ ಹಲವು ಪ್ರಜ್ಞಾವಂತರು ಆರೋಪಿಸಿದ್ದಾರೆ.

ಎಷ್ಟು ಸುಲಭವಾಗಿ ಸಂಸದರು ಸುಳ್ಳು ಹೇಳ್ತಿದ್ದಾರೆ.
ಮೊದಲ ಫೋಟೋದಲ್ಲಿ ರಸ್ತೆಯ ಬದಿಯಲ್ಲಿ ಹಳದಿ, ಕಪ್ಪು ಬಣ್ಣವೇ ಇಲ್ಲ.
ಎರಡನೆಯ ಫೋಟೋದಲ್ಲಿ ಹಳದಿ, ಕಪ್ಪು ಬಣ್ಣ ಇದೆ.
ಎಷ್ಟು ಚನ್ನಾಗಿ ಒಂದಕ್ಕೊಂದು ಸಂಬಂಧವೇ ಇಲ್ಲದ ಬೇರೆ ಬೇರೆ ಫೋಟೋಗಳನ್ನ ತೋರಿಸಿ ಜನರನ್ನ ಮಂಗ ಮಾಡ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರಾದ ಶರತ್ ಚಂದ್ರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕರ್ನಾಟಕ ಕಾಂಗ್ರೆಸ್ ಸಹ ಕಿಡಿಕಾರಿದೆ. “ಮಾನ್ಯ ಸಂಸದರೇ, ಯಾರ ಕಿವ ಮೇಲೆ ಹೂವ ಇಡ್ತೀದಿರಿ? ಒಂದರಲ್ಲಿ ಹಳದಿ ಪಟ್ಟಿ, ಮತ್ತೊಂದರಲ್ಲಿ ಬಿಳಿ ಪಟ್ಟಿ, ಜನರ ದಿಕ್ಕು ತಪ್ಪಿಸುವುದಕ್ಕೂ ಮಿತಿ ಬೇಡವೇ? ಅಂದಹಾಗೆ
◆ನ್ಯೂನ್ಯತೆಗಳಿರುವ ರಸ್ತೆಯನ್ನು ತುರತುರಿಯಲ್ಲಿ ಉದ್ಘಾಟಿಸಿದ್ದೇಕೆ?
◆ಇಂತಹ ಹಲವು ನ್ಯೂನ್ಯತೆಗಳಿಗೆ 80 ಅಪಘಾತಗಳಾದವೇ?
◆ನ್ಯೂನ್ಯತೆಯ ರಸ್ತೆಗೆ ಜನ ಟೋಲ್ ನೀಡಬೇಕೆ?” ಎಂದು ಟ್ವೀಟ್ ಮೂಲಕ ಪ್ರಶ್ನಿಸಿದೆ.

ಒಟ್ಟಿನಲ್ಲಿ ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣದ ಕ್ರೆಡಿಟ್ ಪಡೆಯಲು ಬಿಜೆಪಿ ಸರ್ಕಾರ ಮತ್ತು ಸಂಸದ ಪ್ರತಾಪ್ ಸಿಂಹರವರು ಹಲವಾರು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಪ್ರತಾಪ್ ಸಿಂಹರವರಂತೂ ವಾರಕ್ಕೊಮ್ಮೆಯಾದರೂ ಫೇಸ್‌ಬುಕ್ ಲೈವ್ ಬಂದು ಕಾಮಗಾರಿ ಕುರಿತು ಮಾತನಾಡುತ್ತಿದ್ದರು. ಆದರೆ ಕಳಪೆ ಮತ್ತು ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಲಾಗಿದೆ, ಕಮಿಷನ್ ಹೊಡೆಯಲಾಗಿದೆ, ಅಧಿಕ ಟೋಲ್ ಮೂಲಕ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪಗಳು ಪ್ರತಿನಿತ್ಯ ಕೇಳಿ ಬರುತ್ತಿವೆ. ಈಗಾಗಲೇ 80ಕ್ಕೆ ಹೆಚ್ಚು ಅಪಘಾತಗಳು ಸಂಭವಿಸಿದ್ದು ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರ ಕ್ರೆಡಿಟ್ ಸಹ ಬಿಜೆಪಿಯವರಿಗೆ ಸಲ್ಲಬೇಕೆಲ್ಲವೆ ಎಂಬ ಆಕ್ರೋಶ ಸಹ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...