Homeಮುಖಪುಟವಂದೆ ಮಾತರಂ ಹೇಳದವರಿಗೆ ಭಾರತದಲ್ಲಿ ವಾಸಿಸುವ ಹಕ್ಕಿದೆಯೇ? - ಪ್ರತಾಪ ಚಂದ್ರ ಸಾರಂಗಿ ಪ್ರಶ್ನೆ

ವಂದೆ ಮಾತರಂ ಹೇಳದವರಿಗೆ ಭಾರತದಲ್ಲಿ ವಾಸಿಸುವ ಹಕ್ಕಿದೆಯೇ? – ಪ್ರತಾಪ ಚಂದ್ರ ಸಾರಂಗಿ ಪ್ರಶ್ನೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕೇಂದ್ರ ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆ ಹಾಗೂ ಪಶುಸಂಗೋಪನಾ ಇಲಾಖೆ ಸಚಿವರಾದ ಒಡಿಸ್ಸಾದ ಪ್ರತಾಪ ಚಂದ್ರ ಸಾರಂಗಿಯವರು ತಮ್ಮ ಮೊದಲ ಸಂಸತ್ ಭಾಷಣದಲ್ಲಿ ವಂದೆ ಮಾತರಂ ಹೇಳದವರಿಗೆ ಭಾರತದಲ್ಲಿ ವಾಸಿಸುವ ಹಕ್ಕಿದೆಯೇ? ಸಂಸತ್ ದಾಳಿಯ ಆಪಾದಿತ ಅಫ್ಜಲ್ ಗುರು ಹೊಗಳುವವರಿಗೆ ಭಾರತದಲ್ಲಿ ವಾಸಿಸುವ ಹಕ್ಕಿದೆಯೇ ಎಂದು ಪ್ರಶ್ನಿಸಿದ್ದಾರೆ.

ತುಕ್ಡೆ ತುಕ್ಡೆ ಗ್ಯಾಂಗ್ ಅನ್ನು ಎಂದಿಗೂ ಭಾರತ ಸ್ವೀಕರಿಸುವುದಿಲ್ಲ ಎಂದ ಅವರು ದೇಶವು ಪ್ರಧಾನಿಯೊಂದಿಗಿದೆ ಎಂಬುದನ್ನು ಪುನರುಚ್ಚರಿಸಿದ್ದಾರೆ. ಅವರ ಈ ಭಾಷಣವನ್ನು ಮೇಜು ಕುಟ್ಟಿ ಸ್ವಾಗತಿಸಿರುವ ಬಿಜೆಪಿ ಸಂಸದರು ಅವರ ಪ್ರಶ್ನೆಗಳಿಗೆ ಇಲ್ಲ, ಸಾಧ್ಯವೇ ಇಲ್ಲ ಎಂದು ಕೂಗುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಓರಿಸ್ಸಾದ ಮೋದಿಯವರ ಮತ್ತೊಂದು ಮುಖ ತೋರಿಸದ ಮಾಧ್ಯಮಗಳು

ಕಳೆದ ವಾರ ಸಂಸತ್ ನಲ್ಲಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ವಂದೆ ಮಾತರಂ ಕುರಿತು ಸಮಾಜವಾದ ಪಕ್ಷದ ಸಂಸದರಾದ ಶಫಿಕೂರ್ ರಹಮಾನ್ ಬಾರ್ಕ್ ರವರು ಇದು ಇಸ್ಲಾಂಗೆ ವಿರುದ್ಧವಾಗಿದೆ ಎಂದು ಹೇಳಿದ್ದು ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿಯೇ ಸಾರಂಗಿಯವರು ಮಾತನಾಡಿದ್ದಾರೆ.

ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್ ಅನ್ನು ತೀವ್ರವಾಗಿ ಟೀಕಿಸಿದ ಅವರು ಬಿಜೆಪಿ ಎಲ್ಲಾ ವರ್ಗದ ಜನರ ವಿಶ್ವಾಸವನ್ನು ಗೆದ್ದಿದೆ ಮತ್ತು ಅವರ ಪಾಲ್ಗೊಳ್ಳುವಿಕೆಯೊಂದಿಗೆ ಸರ್ಕಾರವನ್ನು ನಡೆಸಲಾಗುತ್ತಿದೆ ಬಿಜೆಪಿಯನ್ನು ಹೊಗಳಿದ್ದಾರೆ.

ಪ್ರಖರ ಹಿಂದೂತ್ವವಾದಿ ನಿಲುವಿಗೆ ಹೆಸರಾದ ಇವರ ಮೇಲೆ ಹಲವು ಆರೋಪಗಳು ಇವೆ. 2002ರ ಮಾರ್ಚ್ ನಲ್ಲಿ ಒರಿಸ್ಸಾದ ವಿಧಾನಸಭೆಯ ಮೇಲೆ ಭಜರಂಗದಳದ ಸುಮಾರು 500 ಶಸ್ತ್ರದಾರಿ ಸದಸ್ಯರು ದಾಳಿ ನಡೆಸಿದಾಗ ಅದರ ರಾಜ್ಯ ಅಧ್ಯಕ್ಷರಾಗಿದ್ದು ಇದೇ ಸಾರಂಗಿ. 1999ರ ಫೆಬ್ರವರಿಯಲ್ಲಿ ಕ್ರೈಸ್ತ ಧರ್ಮದ ಪ್ರಚಾರಕ ಗ್ರಹಾಂ ಸ್ಟೈನ್ ಅವರ ಪುಟ್ಟ ಮಕ್ಕಳು ಮತ್ತು ಒಬ್ಬ ಕ್ರೈಸ್ತ ಪಾದ್ರಿಯನ್ನು ವಾಹನಕ್ಕೆ ದೂಡಿ ಬೆಂಕಿ ಹಚ್ಚಿ ಸುಟ್ಟುಹಾಕಿದ ದಾರಾಸಿಂಗನ ಗುರು ಈ ಸಾರಂಗಿ ಎಂದು ಹೇಳಲಾಗಿದೆ.

ಸಾರಂಗಿಯವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಚುನಾವಣಾ ಅಫಿಡವಿಟ್ ನಲ್ಲಿ ತನ್ನ ಮೇಲೆ 10 ಕ್ರಿಮಿನಲ್ ಪ್ರಕರಣಗಳಿವೆ ಎಂದು ಹೇಳಿಕೊಂಡಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...