Homeಕರ್ನಾಟಕಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ: ಕೋರ್ಟ್‌ಗೆ 600 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ

ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ: ಕೋರ್ಟ್‌ಗೆ 600 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ

- Advertisement -
- Advertisement -

ರಾಜ್ಯದಲ್ಲಿ ಭಾರೀ ಸುದ್ದಿಯಾಗಿದ್ದ ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೆ.ಎಸ್.ಪ್ರತಿಮಾ ಕೊಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ದೊಡ್ಡ ಕಲ್ಲಸಂದ್ರದ ಕುವೆಂಪು ನಗರದಲ್ಲಿ ನಡೆದಿದ್ದ ಪ್ರತಿಮಾ ಅವರ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಇನ್ಸ್‌ಪೆಕ್ಟರ್‌ ಎನ್‌ ಜಗದೀಶ್‌ ಅವರು, ಆರೋಪಿ ಕಿರಣ್‌ನಿಂದ ಪಡೆದ ಹೇಳಿಕೆ, 70 ಸಾಕ್ಷಿಗಳ ಹೇಳಿಕೆ, ಸಿಸಿಟಿವಿ ದೃಶ್ಯಾವಳಿ, ಡಿಜಿಟಲ್‌ ಸಾಕ್ಷ್ಯಾಧಾರ, ಸಾಂದರ್ಭಿಕ ಸಾಕ್ಷ್ಯ ಸೇರಿ ಸುಮಾರು 600 ಪುಟಗಳ ದೋಷಾರೋಪ ಪಟ್ಟಿಯನ್ನು ನಗರದ 2ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ದೊಡ್ಡಕಲ್ಲಸಂದ್ರದ ಕುವೆಂಪು ನಗರದ ಪ್ರತಿಮಾ ಅವರ ನಿವಾಸಕ್ಕೆ ನ.4ರಂದು ರಾತ್ರಿ ನುಗ್ಗಿದ್ದ ಆರೋಪಿ, ಕೊಲೆ ಮಾಡಿ ಪರಾರಿಯಾಗಿದ್ದ. ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.

ಕಿರಣ್‌ ಅಪರಾಧದ ಹಿನ್ನೆಲೆಯನ್ನು ಹೊಂದಿದ್ದ ಕಾರಣಕ್ಕೆ ಪ್ರತಿಮಾ ಅವರು ಕಿರಣ್‌ನನ್ನು ಕೆಲಸದಿಂದ ವಜಾಗೊಳಿಸಿದ್ದರು. ಪುನಃ ಕೆಲಸ ಕೊಡಿಸುವಂತೆ ಕಿರಣ್‌ ಕೇಳಿಕೊಂಡಿದ್ದ, ಆದರೆ ಪ್ರತಿಮಾ ಇದಕ್ಕೆ ಪ್ರತಿಕ್ರಿಯಿಸಿರಲಿಲ್ಲ. ಇದೇ ವೈಷಮ್ಯದಿಂದ ನ.4ರಂದು ಪ್ರತಿಮಾ ಮನೆಗೆ ತೆರಳಿದ್ದ ಆರೋಪಿ ಮಹಡಿಯಲ್ಲಿ ಅವಿತು ಕುಳಿತಿದ್ದ. ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ಪ್ರತಿಮಾ ಅವರನ್ನು ಹಿಂಬಾಲಿಸಿದ್ದ ಆರೋಪಿ, ಅವರ ಬಾಯಿ ಮುಚ್ಚಿ ವೇಲ್‌ನಿಂದ ಕುತ್ತಿಗೆಯನ್ನು ಬಿಗಿದು ನಂತರ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಪ್ರತಿಮಾ ಕೈಯ್ಯಲ್ಲಿದ್ದ ಚಿನ್ನದ ಬಳೆ, ಚಿನ್ನದ ಸರ, ಕಬೋರ್ಡ್‌ನಲ್ಲಿದ್ದ 5 ಲಕ್ಷ ನಗದು ದೋಚಿ ಪರಾರಿಯಾಗಿದ್ದ.

ಆರೋಪಿ ಕೃತ್ಯ ನಡೆಸಲು 8 ನಿಮಿಷ ತೆಗೆದುಕೊಂಡಿದ್ದ. ಅದಾದ ಮೇಲೆ ಇಬ್ಬರು ಸ್ನೇಹಿತರ ಜೊತೆಗೆ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ. ಅಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ಕಿರಣ್‌ ಕೃತ್ಯ ಎಸಗಿರುವುದಕ್ಕೆ ಪೂರಕ ಸಾಕ್ಷ್ಯಾಧಾರಗಳನ್ನು ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿ ಸಿಬ್ಬಂದಿಯ ಹೇಳಿಕೆಗಳನ್ನು ದಾಖಲಿಸಿ ದೋಷಾರೋಪ ಪಟ್ಟಿಯನ್ನು ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದೆ.

ಇದನ್ನು ಓದಿ: ಮೆಹ್ರೌಲಿಯಲ್ಲಿ ‘ಅಕ್ರಮವೆಂದು’ DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

 

 

 

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...