ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ತಿಳಿಸಿದ್ದಾರೆ. ಬಂಧಿತರನ್ನು ಶಫೀಕ್ ಮತ್ತು ಝಾಕೀರ್ ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಹಂತದ ತನಿಖೆ ನಡೆಯುತ್ತಿದೆ. ಅದರ ಆಧಾರಲ್ಲಿ ಇಬ್ಬರನ್ನು ಬಂಧಿಸಿದ್ದೇವೆ. ಆರೋಪಿಗಳು ಯಾವ ಸಂಘಟನೆಗೆ ಸೇರಿದ್ದಾರೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಒಬ್ಬ ಆರೋಪಿಯ ಮೇಲೆ ಈಗಾಗಲೇ ಕ್ರಿಮಿನಲ್ ಪ್ರಕರಣವೊಂದು ದಾಖಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್
20 ಜನರನ್ನು ವಿಚಾರಣೆ ನಡೆಸಿದ್ದೇವೆ. ಅದರಲ್ಲಿ ಇಬ್ಬರ ಮೇಲೆ ಹೆಚ್ಚಿನ ಸಂಶಯ ಬಂದು ಬಂಧಿಸಿದ್ದೇವೆ ಎಂದು ಅವರು ಹೇಳಿದ್ದಾರೆ.
ನಿನ್ನೆ ಸಾಯಂಕಾಲ ಇಬ್ಬರನ್ನು ದಸ್ತಗಿರಿ ಮಾಡಿದ್ದೇವೆ. ಇಂದು ಅವರನ್ನು ನ್ಯಾಯಾಲಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ತನಿಖೆ ನಡೆಸುತ್ತಿದ್ದೇವೆ. ಪೂರ್ಣ ವಿಚಾರಣೆಯ ನಂತರವಷ್ಟೇ ಕೊಲೆ ಹಿಂದಿನ ಉದ್ದೇಶ, ಯಾವ ಸಂಘಟನೆಗಳಿವೆ ಎಂಬುದು ತಿಳಿದುಬರುತ್ತದೆ ಎಂದಿದ್ದಾರೆ.
ಇದನ್ನೂ ಓದಿ: ರಾಷ್ಟ್ರಪತ್ನಿ ಹೇಳಿಕೆಗೆ ಬಿಜೆಪಿ ಪ್ರತಿಭಟನೆ: ಕ್ಷಮೆಯಾಚಿಸಿ, ಸ್ಪಷ್ಟನೆ ನೀಡಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ



ಡ್ರೋಣ್ ಮೂಲಖಾ ಅಬ್ಬಿಗೇರೆಯಲ್ಲಿ ಪೆಗಾಸಸ್ ಸ್ಪೈವೇರ್ ಬಳಸಿಕೋಂಡು ಚೀನದ ಕೃತಿಕಾ ಚಂದ್ರ ತಂತ್ರಙ್ನಾನ ದ ಸೌಂಡ್ ಕೇಳುತ್ತಾದ ಇದು ಸೋಲಾರ್ ತರಂಗಗಳು ಅರಡುತ್ತಾವೆ ಇದರಿಂರ ಮಾಹಿತಿಗಳು ತಿಳಿಯಬಹು ಒಬ್ಬ ಅಘೋರಿ ಟೇರೆರಿಸ್ಟ್ ಕರ್ನಾಟಕ ಕನ್ನಡದವ ಮೂರು ಜನ ಸಿಗುತ್ತಾರೆ.