ಕೊಲೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಭೇಟಿ ನೀಡಿದ ವೇಳೆ ಪ್ರತಿಭಟನೆಯನ್ನು ಎದುರಿಸಬೇಕಾಯಿತು.
ಬಿಜೆಪಿ ಕಾರ್ಯಕರ್ತರು ನಳಿನ್ ಕುಮಾರ್ ಅವರಿಗೆ ಧಿಕ್ಕಾರ ಕೂಗಿದರು. ‘ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಪಕ್ಷದ ಕಾರ್ಯಕರ್ತನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಏಕೆ’ ಎಂದು ಪ್ರಶ್ನಿಸಿದ ಅವರು, ಪಕ್ಷದ ಅಮಾಯಕ ಕಾರ್ಯಕರ್ತನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಕೊಲೆಗೀಡಾಗಿರುವ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಅವರ ಅಂತಿಮ ದರ್ಶನಕ್ಕಾಗಿ ಬೆಳ್ಳಾರೆಗೆ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಒಟ್ಟಿಗೆ ಬಂದರು. ಅವರು ಕಾರಿನಿಂದ ಇಳಿಯುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್ ಮತ್ತು ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ.
#Karnataka #BJP Yuva Morcha workers attack party president Nalin Kateel and heckle district incharge minister Sunil Kumar in #Puttur #DakshinKannada when they went to pay his last respects to murdered yuva morcha president #Praveen Nettar. pic.twitter.com/EqdnIPFbi6
— Imran Khan (@KeypadGuerilla) July 27, 2022
“ಕಾರನ್ನು ಉರುಳಿಸಲೂ ಕಾರ್ಯಕರ್ತರು ಯತ್ನಿಸಿದರು. ಟೈರ್ಗಳಿಂದ ಗಾಳಿ ಹೊರಬಿಟ್ಟರು. ಪರಿಸ್ಥಿತಿ ಕೈಮೀರುವುದು ಮನಗಂಡ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚೆದುರಿಸಿದರು. ಪೊಲೀಸ್ ಭದ್ರತೆಯಲ್ಲಿಯೇ ನಳಿನ್ ಕುಮಾರ್ ಕಟೀಲ್ ಸ್ಥಳದಿಂದ ಹೊರನಡೆದರು” ಎಂದು ವರದಿಯಾಗಿದೆ.
ಪೊಲೀಸರೊಂದಿಗೆ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ‘ಬೇಕೇ ಬೇಕು, ನ್ಯಾಯ ಬೇಕು’ ಎಂಬ ಘೋಷಣೆ ಮೊಳಗಿಸಿದರು. ಬೆಳ್ಳಾರೆ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಬಿಗಿ ಬಂದೋಬಸ್ತ್ ಹಾಕಲಾಗಿದೆ. ಅಂಗಡಿಗಳನ್ನು ಮುಚ್ಚಿಸುತ್ತಿರುವ ಪೊಲೀಸರು ಗುಂಪು ಸೇರಿದ್ದ ಕಾರ್ಯಕರ್ತರನ್ನು ಲಾಠಿ ಬೀಸಿ ಚೆದುರಿಸುತ್ತಿದ್ದಾರೆ. ಘಟನೆಯಲ್ಲಿ ಕೆಲವು ಕಾರ್ಯಕರ್ತರಿಗೆ ಪೆಟ್ಟುಬಿದ್ದಿದ್ದು ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಪೊಲೀಸರ ವಿರುದ್ಧ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
#BJP yuva morcha workers shout anti BJP slogans angry over state government not able to stop the killing of #Hindu workers. pic.twitter.com/XAXoT75W8m
— Imran Khan (@KeypadGuerilla) July 27, 2022
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿಲಾಗಿದೆ. ನಿಷೇಧಾಜ್ಞೆ ಜಾರಿ ಬಗ್ಗೆ ಪೊಲೀಸರು ಘೋಷಣೆ ಮಾಡುತ್ತಿದ್ದರೂ ಕಾರ್ಯಕರ್ತರು ಹೊರಬಂದಿದ್ದಾರೆ. ಹೀಗಾಗಿ ಕರಾವಳಿ ಕೆಲವು ಅಹಿತಕರ ಘಟನೆಗೆ ಸಾಕ್ಷಿಯಾಗಿದೆ.
Cops had to resort to lathicharge to disperse #BJP yuva morcha workers who had ghearoed party president's car and heckled other leaders. pic.twitter.com/awUlPgVOjK
— Imran Khan (@KeypadGuerilla) July 27, 2022


