Homeಮುಖಪುಟರಂಝಾನ್ ಹಬ್ಬದಂದು ರಸ್ತೆಯಲ್ಲಿ ನಮಾಝ್ ಮಾಡಿದ್ರೆ ಕ್ರಿಮಿನಲ್ ಕೇಸ್, ಪಾಸ್‌ಪೋರ್ಟ್‌- ಲೈಸನ್ಸ್ ರದ್ದು!

ರಂಝಾನ್ ಹಬ್ಬದಂದು ರಸ್ತೆಯಲ್ಲಿ ನಮಾಝ್ ಮಾಡಿದ್ರೆ ಕ್ರಿಮಿನಲ್ ಕೇಸ್, ಪಾಸ್‌ಪೋರ್ಟ್‌- ಲೈಸನ್ಸ್ ರದ್ದು!

- Advertisement -
- Advertisement -

ಈದುಲ್ ಫಿತರ್ (ರಂಝಾನ್‌) ಹಬ್ಬಕ್ಕೂ ಮುನ್ನ ನಗರದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಿರುವ ಉತ್ತರ ಪ್ರದೇಶದ ಮೀರತ್ ಪೊಲೀಸರು, ರಸ್ತೆಯಲ್ಲಿ ನಮಾಝ್ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಪಾಸ್‌ಪೋರ್ಟ್‌ ಮತ್ತು ಡ್ರೈವಿಂಗ್ ಲೈಸನ್ಸ್ ರದ್ದುಗೊಳಿಸಲಾಗುವುದು ಎಂದಿದ್ದಾರೆ.

ಬುಧವಾರ, ಮೀರತ್ ಪೊಲೀಸರು ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ವಿಜಯ್ ಕುಮಾರ್ ಸಿಂಗ್ ಅವರಿಗೆ ಎಂಟು ಜನರ ಪಟ್ಟಿಯನ್ನು ಸಲ್ಲಿಸಿದ್ದು, ಅವರು ಕಳೆದ ವರ್ಷದ ಈದ್ ಸಮಯದಲ್ಲಿ ರಸ್ತೆಯಲ್ಲಿ ನಮಾಝ್ ಮಾಡಬಾರದು ಎಂಬ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರು ಆ ಎಂಟು ಜನರ ಡ್ರೈವಿಂಗ್ ಲೈಸನ್ಸ್ ಮತ್ತು ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ.

“ಜನರು ಹತ್ತಿರದ ಮಸೀದಿಯಲ್ಲಿ ನಮಾಝ್ ಮಾಡಬೇಕು ಅಥವಾ ಸಮಯಕ್ಕೆ ಸರಿಯಾಗಿ ಈದ್ಗಾ ತಲುಪಬೇಕು ಎಂದು ನಾವು ಮನವಿ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ರಸ್ತೆಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ನಾವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದೇವೆ” ಎಂದು ಮೀರತ್ ನಗರ ಎಸ್ಪಿ ಆಯುಷ್ ವಿಕ್ರಮ್ ಸಿಂಗ್ ಹೇಳಿದ್ದಾರೆ.

“ಕಳೆದ ವರ್ಷ ಈದ್ ಹಬ್ಬದಂದು ಕೆಲವರು ರಸ್ತೆಯಲ್ಲಿ ನಮಾಝ್ ಮಾಡಿದ್ದರು. ನಾವು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಈ ಬಾರಿಯೂ ಯಾರಾದರೂ ಓಪನ್ ಜಾಗದಲ್ಲಿ ಪ್ರಾರ್ಥನೆಗೆ ಕುಳಿತರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಾವು ನಿರಂತರವಾಗಿ ಮನವಿ ಮಾಡುತ್ತಿದ್ದೇವೆ” ಎಂದಿದ್ದಾರೆ.

ಒಬ್ಬ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾದರೆ, ಅದು ಅವರ ಲೈಸನ್ಸ್ ಮತ್ತು ಪಾಸ್‌ಪೋರ್ಟ್ ರದ್ದತಿಗೆ ಕಾರಣವಾಗಬಹುದು. ಪ್ರಕರಣ ದಾಖಲಾದ ವ್ಯಕ್ತಿಗೆ ಪಾಸ್‌ಪೋರ್ಟ್ ಅಥವಾ ಲೈಸನ್ಸ್‌ಗೆ ಅರ್ಜಿ ಸಲ್ಲಿಸಲು ಎನ್‌ಒಸಿ (ನಿರಾಕ್ಷೇಪಣಾ ಪ್ರಮಾಣಪತ್ರ) ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.

ನಿಯಮಗಳನ್ನು ಉಲ್ಲಂಘಿಸುವವರು ಪ್ರಕರಣ ದಾಖಲಿಸುವುದು ಮತ್ತು ಬಂಧನ ಸೇರಿದಂತೆ ತಕ್ಷಣದ ದಂಡನಾತ್ಮಕ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮೀರತ್ ವಲಯದ ಡಿಐಜಿ ಕಲಾನಿಧಿ ನೈಥಾನಿ ಹೇಳಿದ್ದಾರೆ.

ಸಂಭಾಲ್‌ನಲ್ಲಿ, ಎಸ್‌ಪಿ ಕೃಷ್ಣ ಕುಮಾರ್ ಬಿಷ್ಣೋಯ್ ಅವರು, ರಸ್ತೆಗಳಲ್ಲಿ ಪ್ರಾರ್ಥನೆ ಸಲ್ಲಿಸುವುದರ ವಿರುದ್ಧ ಪೊಲೀಸರು ಸೂಚನೆ ನೀಡಿದ್ದಾರೆ. ಯಾರೂ ರಸ್ತೆಗಳಲ್ಲಿ ನಮಾಝ್ ಮಾಡಬಾರದು. ಮನೆಗಳಲ್ಲಿ ಸಾಮೂಹಿಕ ನಮಾಝ್‌ಗೆ ಅವಕಾಶವಿಲ್ಲ. ಜನರು ತಮ್ಮ ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಆದರೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಅವರು ಜಾಗರೂಕರಾಗಿರಬೇಕು” ಎಂದಿದ್ದಾರೆ.

ಈದ್ ಪ್ರಾರ್ಥನೆಗಳಿಗೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಆದೇಶ ಹೊರಡಿಸಲಾಗಿಲ್ಲ ಎಂದು ಅಲಿಘರ್ ಎಸ್ಪಿ ಮೃಗಾನಿಕ್ ಶೇಖರ್ ಪಾಠಕ್ ಹೇಳಿದ್ದಾರೆ. “ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಪ್ರಾರ್ಥನೆ ಸಲ್ಲಿಸಬಾರದು ಎಂಬ ಯುಪಿ ಸರ್ಕಾರದ ಸಲಹೆಯನ್ನು ನಾವು ಪಾಲಿಸುತ್ತೇವೆ. ಶಾಂತಿ ಸಮಿತಿ ಸಭೆಯನ್ನು ಕರೆಯಲಾಗಿದೆ ಮತ್ತು ಜನರಿಗೆ ಸಲಹೆಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ನಾವು ಯಾವುದೇ ನಿರ್ದಿಷ್ಟ ಆದೇಶವನ್ನು ಹೊರಡಿಸಿಲ್ಲ ಎಂದು ಹತ್ರಾಸ್ ಎಸ್ಪಿ ಚಿರಂಜೀವ್ ನಾಥ್ ಸಿನ್ಹಾ ಹೇಳಿದ್ದಾರೆ. “ಸಮುದಾಯವನ್ನು ಲೆಕ್ಕಿಸದೆ ಯಾರಿಗೂ ರಸ್ತೆಗಳಲ್ಲಿ ಅಥವಾ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ನಾವು ಅವಕಾಶ ನೀಡುವುದಿಲ್ಲ. ಇದು ಜನರ ಹಬ್ಬ ಮತ್ತು ಅವರು ತಮ್ಮ ಮನೆಯಲ್ಲಿ ಆಚರಿಸಬಹುದು” ಎಂದು ಎಂದಿದ್ದಾರೆ.

ಜನದಟ್ಟಣೆ ಇದ್ದಲ್ಲಿ, ಜನರು ಪಾಳಿಯಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಮನವಿ ಮಾಡಿದ್ದೇವೆ ಎಂದು ಗಾಝಿಯಾಬಾದ್ ಪೊಲೀಸರು ತಿಳಿಸಿದ್ದಾರೆ. “ನಾವು ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಮಸೀದಿಗಳು ಮತ್ತು ಈದ್ಗಾ ಬಳಿ ಭದ್ರತಾ ಪಡೆಗಳನ್ನು ನಿಯೋಜಿಸಿದ್ದೇವೆ. ಡ್ರೋನ್‌ಗಳ ಮೂಲಕ ನಿರಂತರ ಕಣ್ಗಾವಲು ಇರುತ್ತದೆ” ಎಂದು ಟ್ರಾನ್ಸ್-ಹಿಂಡನ್‌ನ ಡಿಸಿಪಿ ದಶರಥ್ ನಿಮಿಷ್ ಪಾಟೀಲ್ ತಿಳಿಸಿದ್ದಾರೆ.

ಈದ್ ಶಾಪಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಮುಸ್ಲಿಂ ಬಾಲಕನ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ: ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...