Homeಕರ್ನಾಟಕಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

- Advertisement -
- Advertisement -

ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಿಕ್ಷಣ ನೀಡುವುದಕ್ಕೆ ಮತ್ತು ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಎಲ್‌ಕೆಜಿ, ಯುಕೆಜಿ ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ” ಎಂದರು.

“ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೇ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು” ಎಂದರು.

“ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಪೂರ್ವ ಪ್ರಾಥಮಿಕ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

“ಪೂರ್ವ‌ ಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು ಎಂದು ಹೇಳಿದರು.

ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣದ ಸಚಿವ ಮಧು ಬಂಗಾರಪ್ಪ‌, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ; ಎಲ್‌ಕೆಜಿ-ಯುಕೆಜಿ ಪ್ರಾರಂಭಿಸಲು ಮುಂದಾದ ಶಿಕ್ಷಣ ಇಲಾಖೆ; ‘ಐಸಿಡಿಎಸ್‌ ಉಳಿಸಿ, ಮಕ್ಕಳನ್ನು ರಕ್ಷಿಸಿ’ ಸಮಿತಿಯಿಂದ ಸರ್ಕಾರಕ್ಕೆ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...