Homeಮುಖಪುಟಸಂವಿಧಾನದ ಪೀಠಿಕೆ ಮಕ್ಕಳಿಗೆ ಪೋಷಕರಿದ್ದಂತೆ, ಎಷ್ಟೇ ಪ್ರಯತ್ನಿಸಿದರೂ ಬದಲಿಸಲು ಸಾಧ್ಯವಿಲ್ಲ: ಜಗದೀಪ್ ಧನ್ಖರ್

ಸಂವಿಧಾನದ ಪೀಠಿಕೆ ಮಕ್ಕಳಿಗೆ ಪೋಷಕರಿದ್ದಂತೆ, ಎಷ್ಟೇ ಪ್ರಯತ್ನಿಸಿದರೂ ಬದಲಿಸಲು ಸಾಧ್ಯವಿಲ್ಲ: ಜಗದೀಪ್ ಧನ್ಖರ್

- Advertisement -
- Advertisement -

ಭಾರತೀಯ ಸಂವಿಧಾನದ ಪೀಠಿಕೆ ಮಕ್ಕಳಿಗೆ ಪೋಷಕರಿದ್ದಂತೆ, ನೀವು ಎಷ್ಟೇ ಪ್ರಯತ್ನಿಸಿದರೂ ಅದನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನ್ಖರ್ ಸೋಮವಾರ ಹೇಳಿದ್ದಾರೆ.

“ಸಂವಿಧಾನದ ಪೀಠಿಕೆಯ ಬಗ್ಗೆ ಬಹಳಷ್ಟು ಸಮಸ್ಯೆಗಳಿವೆ; ಭಾರತೀಯ ಸಂವಿಧಾನದ ಪೀಠಿಕೆ ಮಕ್ಕಳಿಗೆ ಪೋಷಕರಂತೆ. ನೀವು ಎಷ್ಟೇ ಪ್ರಯತ್ನಿಸಿದರೂ, ನಿಮ್ಮ ಪೋಷಕರನ್ನು ಬದಲಾಯಿಸಲು ಸಾಧ್ಯವಿಲ್ಲ. ಪೀಠಿಕೆಯನ್ನೂ ಬದಲಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ಕೊಚ್ಚಿಯ ರಾಷ್ಟ್ರೀಯ ಸುಧಾರಿತ ಕಾನೂನು ಅಧ್ಯಯನ ವಿಶ್ವವಿದ್ಯಾಲಯದ (ಎನ್‌ಯುಎಎಲ್‌ಎಸ್‌) ವಿದ್ಯಾರ್ಥಿಗಳು ಮತ್ತು ಅಧ್ಯಾಪಕರೊಂದಿಗೆ ಸಂವಹನ ನಡೆಸುವಾಗ ಮಾತನಾಡಿದ ಅವರು, ಐತಿಹಾಸಿಕವಾಗಿ, ಯಾವುದೇ ದೇಶದ ಪೀಠಿಕೆಯನ್ನು ಎಂದಿಗೂ ಬದಲಾಯಿಸಲಾಗಿಲ್ಲ. ಆದರೆ, ತುರ್ತು ಪರಿಸ್ಥಿತಿಯ ಸಮಯದಲ್ಲಿ ಭಾರತೀಯ ಸಂವಿಧಾನದ ಪೀಠಿಕೆಯನ್ನು ಬದಲಾಯಿಸಲಾಗಿದೆ ಎಂದು ಹೇಳಿದರು.

“ನಮ್ಮ ಸಂವಿಧಾನದ ಪೀಠಿಕೆಯನ್ನು ನೂರಾರು ಮತ್ತು ಸಾವಿರಾರು ಜನರು ಜೈಲಿನಲ್ಲಿದ್ದ ಸಮಯದಲ್ಲಿ ಬದಲಾಯಿಸಲಾಯಿತು, ಇದು ನಮ್ಮ ಪ್ರಜಾಪ್ರಭುತ್ವದ ಕರಾಳ ಅವಧಿ” ಎಂದು ಅವರು ಹೇಳಿದರು.

ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನು ಆರ್‌ಎಸ್‌ಎಸ್ ಪರಿಶೀಲಿಸಬೇಕೆಂದು ಕರೆ ನೀಡಿರುವ ಹಿನ್ನೆಲೆಯಲ್ಲಿ ಅವರ ಹೇಳಿಕೆ ಬಂದಿದೆ. ತುರ್ತು ಪರಿಸ್ಥಿತಿಯ ಸಮಯದಲ್ಲಿ ಇವುಗಳನ್ನು ಸೇರಿಸಲಾಗಿತ್ತು, ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಭಾಗವಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಜೂನ್ 26 ರಂದು ನವದೆಹಲಿಯಲ್ಲಿ ನಡೆದ ತುರ್ತು ಪರಿಸ್ಥಿತಿಯ 50 ವರ್ಷಗಳ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, “ಬಾಬಾಸಾಹೇಬ್ ಅಂಬೇಡ್ಕರ್ ಸಂವಿಧಾನದ ಪೀಠಿಕೆಯಲ್ಲಿ ಈ ಪದಗಳನ್ನು ಎಂದಿಗೂ ಬಳಸಿಲ್ಲ. ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದಾಗ, ಸಂಸತ್ತು ಕಾರ್ಯನಿರ್ವಹಿಸದಿದ್ದಾಗ ಮತ್ತು ನ್ಯಾಯಾಂಗವು ಕುಂಟುತ್ತಾ ಹೋದಾಗ ತುರ್ತು ಪರಿಸ್ಥಿತಿಯ ಸಮಯದಲ್ಲಿ ಈ ಪದಗಳನ್ನು ಸೇರಿಸಲಾಯಿತು” ಎಂದು ಹೇಳಿದರು.

ನ್ಯಾಯಾಂಗದ ಸ್ವಾತಂತ್ರ್ಯ, ಕಾನೂನು ಭ್ರಾತೃತ್ವಕ್ಕಾಗಿ ನಾವೆಲ್ಲರೂ ಎದ್ದು ನಿಲ್ಲಬೇಕಾಗಿದೆ: ಸುಪ್ರೀಂಕೋರ್ಟ್ ಮಾಜಿ ನ್ಯಾಯಮೂರ್ತಿ ಲೋಕೂರ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಔಷಧ ತಯಾರಕರ ಪರವಾಗಿ ಇಡೀ ವ್ಯವಸ್ಥೆ ಕೆಲಸ ಮಾಡುತ್ತಿರುವುದೇಕೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮತ್ತು ಚಿಲ್ಲರೆ ವ್ಯಾಪಾರಿಗಳು ಅವುಗಳನ್ನು ಖರೀದಿಸುವ ಬೆಲೆಯ ನಡುವಿನ ಭಾರಿ ವ್ಯತ್ಯಾಸದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಔಷಧ ತಯಾರಕರಿಗೆ...

ಚುನಾವಣಾ ಆಯೋಗದ ಅಫಿಡವಿಟ್ ಕುರಿತ ‘ಲೈವ್ ಲಾ’ ರೀಲ್ ತೆಗೆದುಹಾಕಿದ ಇನ್‌ಸ್ಟಾಗ್ರಾಮ್

ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ (ಅ.26) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್ ಕುರಿತು ವಿವರಿಸುವ ತನ್ನ ರೀಲ್ ಅನ್ನು ಇನ್‌ಸ್ಟಾಗ್ರಾಂ ತೆಗೆದುಹಾಕಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್ ಲಾ (Livelaw.in)...

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ (Declaration not a part of...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...