Homeಕೊರೊನಾಓಮಿಕ್ರಾನ್ ಆತಂಕ: ಇಂದಿನಿಂದ ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್

ಓಮಿಕ್ರಾನ್ ಆತಂಕ: ಇಂದಿನಿಂದ ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್

- Advertisement -
- Advertisement -

ದೇಶದಲ್ಲಿ ಕೊರೊನಾ ಪ್ರಕರಣಗಳು ಮತ್ತು ಓಮಿಕ್ರಾನ್ ರೂಪಾಂತಕ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿಯ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ಹಿರಿಯರಿಗೂ ಇಂದಿನಿಂದ (ಜ.10) ಮೂರನೇ ಲಸಿಕೆ ಅಥವಾ ಬೂಸ್ಟರ್‌ ಡೋಸ್ ನೀಡಲಾಗುತ್ತಿದೆ. ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಘೋಷಿಸಿದ್ದರು.

ಇಂದಿನಿಂದ ಆರಂಭವಾಗುತ್ತಿರುವ ಲಸಿಕಾ ಅಭಿಯಾನದಲ್ಲಿ ಸುಮಾರು 5.75 ಕೋಟಿ ಜನರು ಮೂರನೇ ಡೋಸ್‌ ತೆಗೆದುಕೊಳ್ಳಲು ಅರ್ಹರಾಗಿದ್ದಾರೆ. ಇದರಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ 2.75 ಕೋಟಿ, 1 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು 2 ಕೋಟಿ ಮುಂಚೂಣಿ ಕಾರ್ಯಕರ್ತರು ಸೇರಿದ್ದಾರೆ.

ಮುನ್ನೆಚ್ಚರಿಕೆಯ ಲಸಿಕೆ ಡೋಸ್‌ಗಳಿಗೆ ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಅರ್ಹರು ನೇರವಾಗಿ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳಬಹುದು ಅಥವಾ ಯಾವುದೇ ಲಸಿಕೆ ಕೇಂದ್ರಕ್ಕೆ ತೆರಳಬಹುದು. ಇನ್ನು ಎಲ್ಲಾ ವಯಸ್ಕರಿಗೆ ಬೂಸ್ಟರ್ ಡೋಸ್‌ಗಳನ್ನು ನೀಡುವ ಕುರಿತು ಇನ್ನೂ ಯಾವುದೇ ನಿರ್ಧಾರವಾಗಿಲ್ಲ.

ಇದನ್ನೂ ಓದಿ: ಉತ್ತರಾಖಂಡ ಕೊರೊನಾ ಆತಂಕ: ಜ.16 ರ ವರೆಗೆ ರಾಜಕೀಯ ರ್‍ಯಾಲಿ, ಶಾಲೆಗಳು ಬಂದ್

ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಇತರ ದೀರ್ಘಕಾಲದ ಕಾಯಿಲೆಗಳನ್ನು ಹೊಂದಿರುವ 60 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ವೈದ್ಯರ ಸಲಹೆಯ ಮೇರೆಗೆ “ಮುನ್ನೆಚ್ಚರಿಕೆ ಡೋಸ್” ಅನ್ನು ಪಡೆಯುವ ಆಯ್ಕೆಯನ್ನು ಹೊಂದಿರುತ್ತಾರೆ.

ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದ 9 ತಿಂಗಳ ನಂತರ ಮಾತ್ರ ಬೂಸ್ಟರ್ ಶಾಟ್‌ಗಳನ್ನು ಪಡೆಯಬಹುದು. ಮೊದಲು ತಾವು ಯಾವ ಎರಡು ಡೋಸ್ ಲಸಿಕೆ ಪಡೆದಿರುತ್ತಾರೋ ಅದೇ ಲಸಿಕೆಯನ್ನೆ ಮೂರನೇ ಡೋಸ್ ಆಗಿ ನೀಡಲಾಗುತ್ತದೆ. ಕೋವಿಶೀಲ್ಡ್ ಪಡೆದವರಿಗೆ ಕೋವಿಶೀಲ್ಡ್. ಕೋವಾಕ್ಸಿನ್ ಪಡೆದವರಿಗೆ ಕೋವಾಕ್ಸಿನ್ ಲಸಿಕೆ ನೀಡಲಾಗುತ್ತದೆ.

“ದೇಶವನ್ನು ಸುರಕ್ಷಿತವಾಗಿಡುವಲ್ಲಿ ಕೊರೊನಾ ವಾರಿಯರ್ಸ್, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿಯ ಕಾರ್ಯಕರ್ತರು ಭಾರಿ ಕೊಡುಗೆ ನೀಡಿದ್ದಾರೆ. ಆದ್ದರಿಂದ, ಮುನ್ನೆಚ್ಚರಿಕೆಯ ದೃಷ್ಟಿಯಿಂದ, ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ ಮುನ್ನೆಚ್ಚರಿಕೆ ಡೋಸ್ ಅನ್ನು ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ” ಎಂದು ಪ್ರಧಾನಿ ಮೋದಿ ಡಿಸೆಂಬರ್ 25 ರಂದು ಹೇಳಿದ್ದರು.

ಆದರೆ ಈಗಾಗಲೇ, ಓಮಿಕ್ರಾನ್ ಮತ್ತು ಕೋವಿಡ್ ದೇಶದಲ್ಲಿ ಉಲ್ಬಣಗೊಂಡಿದ್ದು, ಅನೇಕ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಸೋಂಕಿಗೆ ತುತ್ತಾಗಿದ್ದಾರೆ. ಅವರಲ್ಲಿ ಹಲವರು ಎರಡನೇ ಬಾರಿಗೆ ಕೊರೊನಾಗೆ ತುತ್ತಾಗಿದ್ದಾರೆ.


ಇದನ್ನೂ ಓದಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...