Homeಕರ್ನಾಟಕಜೈಲಿನಲ್ಲಿ ವಿಶೇಷ ಸೌಲಭ್ಯ: ಶಶಿಕಲಾ, ಜೈಲು ಅಧಿಕಾರಿಗಳ ವಿರುದ್ಧ ಎಸಿಪಿ ದೋಷಾರೋಪ ಪಟ್ಟಿ ಸಲ್ಲಿಕೆ

ಜೈಲಿನಲ್ಲಿ ವಿಶೇಷ ಸೌಲಭ್ಯ: ಶಶಿಕಲಾ, ಜೈಲು ಅಧಿಕಾರಿಗಳ ವಿರುದ್ಧ ಎಸಿಪಿ ದೋಷಾರೋಪ ಪಟ್ಟಿ ಸಲ್ಲಿಕೆ

- Advertisement -
- Advertisement -

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಆಪ್ತ ಸಹಾಯಕಿ ವಿ.ಕೆ.ಶಶಿಕಲಾ ಮತ್ತು ಇಳವರಸಿ ಅವರಿಗೆ ಅನಧಿಕೃತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಪ್ರಕರಣದ ಮೊದಲನೇ ಆರೋಪಿ ಬೆಳಗಾವಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಮತ್ತು ಎರಡನೇ ಆರೋಪಿ ಕರ್ನಾಟಕ ಕಾರಾಗೃಹ ಅಕಾಡೆಮಿಯ ಉಪ ನಿರ್ದೇಶಕಿ ಡಾ. ಆರ್ ಅನಿತಾ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಬುಧವಾರ ಮಾಹಿತಿ ನೀಡಿದೆ.

ಪ್ರಕರಣದ ತನಿಖೆ ಪೂರ್ಣಗೊಳಿಸಿ, ವರದಿ ಸಲ್ಲಿಸಲು ವಿಧಿಸಲಾಗಿರುವ ಗಡುವು ವಿಸ್ತರಣೆಗೆ ಕೋರಿ ಎಸಿಬಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ನೇತೃತ್ವದ ವಿಭಾಗೀಯ ಪೀಠ ನಡೆಸಿತು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ವಿಚಾರಣಾ ನ್ಯಾಯಾಲಯಕ್ಕೆ 2022 ರ ಜನವರಿ 7ರಂದು ದೋಷಾರೋಪ ಪಟ್ಟಿ ಸಲ್ಲಿಸಿದ ಬಗ್ಗೆ ಎಸಿಬಿ ಪರ ವಕೀಲ ಪಿ.ಎನ್‌.ಮನಮೋಹನ್‌ ಅವರ ಹೇಳಿಕೆ ದಾಖಲಿಸಿಕೊಂಡಿದೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್‌ ಮುಚ್ಚಿದ ಕುಂದಾಪುರ ಕಾಲೇಜ್‌: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ

“ಆರೋಪಿಗಳಾದ ಕೃಷ್ಣ ಕುಮಾರ್ ಮತ್ತು ಡಾ. ಆರ್.ಅನಿತಾ ಅವರು ಶಶಿಕಲಾ ಮತ್ತು ಇಳವರಸಿ ಅವರಿಗೆ ಅನಧಿಕೃತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ್ದಾರೆ. ಮಹಿಳಾ ಕೈದಿಗಳ ವಿಭಾಗದ ಕಾರಿಡಾರ್‌ ಅನ್ನು ಬಳಸಿಕೊಳ್ಳಲು, ಇತರೆ ಕೈದಿಗಳಿಂದ ಸ್ವತಂತ್ರವಾಗಿ ವಾಸಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಇಬ್ಬರಿಗೂ ಮಂಚ ಹಾಗೂ ಹಾಸಿಗೆ ವ್ಯವಸ್ಥೆ ಒದಗಿಸಿದ್ದಾರೆ. ಅವರ ಸಂದರ್ಶನಕ್ಕೆ ಬಂದವರಿಗೆ ಜೈಲು ಅಧಿಕಾರಿಗಳ ಕಚೇರಿಯಲ್ಲಿಯೇ, ಹೆಚ್ಚಿನ ಸಮಯಾವಕಾಶ ನೀಡಿ, ಅವಕಾಶ ಮಾಡಿಕೊಟ್ಟಿರುವ ಬಗ್ಗೆ ದೃಢಪಟ್ಟಿರುತ್ತದೆ. ಇವರ ವಿರುದ್ಧ ಐಪಿಸಿ ಕಲಂ 120(ಬಿ) ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ -1988ರ ಕಲಂ 13(1)(ಸಿ) ಅಡಿಯಲ್ಲಿ ವಿಚಾರಣೆ ನಡೆಸಲು ಪೂರ್ವಾನುಮತಿ ನೀಡಲಾಗಿದೆ” ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಅಲ್ಲದೆ, ಶಶಿಕಲಾಗೆ ವಿಶೇಷ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ ಸಂಬಂಧ ಕಾರಾಗೃಹ ಡಿಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ಎಚ್.ಎನ್. ಸತ್ಯನಾರಾಯಣ ಅವರು ನಿರ್ದೋಷಿಯಾಗಿದ್ದಾರೆ ಎಂದು ಎಸಿಬಿ ತನ್ನ ವರದಿಯಲ್ಲಿ ತಿಳಿಸಿದೆ” ಎಂದು ಸರ್ಕಾರ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಶಶಿಕಲಾ, ಮತ್ತವರ ಸಂಬಂಧಿ ಇಳವರಸಿಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಜೈಲಿನ ಅಧಿಕಾರಿಗಳು 2 ಕೋಟಿ ರೂಪಾಯಿ ಲಂಚ ಪಡೆದ ಆರೋಪವಿತ್ತು. ಈ ಪ್ರಕರಣವನ್ನು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದ ಏಕ ಸದಸ್ಯ ಸಮಿತಿ ವಿಚಾರಣೆ ನಡೆಸಿ ವರದಿ ಸಲ್ಲಿಸಿತ್ತು. ನಂತರ ಎಸಿಬಿ ಪ್ರಕರಣದ ತನಿಖೆ ನಡೆಸಿತು. ಎಸಿಬಿ ವಿಳಂಬ ಮಾಡುತ್ತಿರುವುದಾಗಿ ಆಕ್ಷೇಪಿಸಿ, ತಮಿಳುನಾಡಿನ ಸಾಮಾಜಿಕ ಕಾರ್ಯಕರ್ತೆ ಕೆ.ಎಸ್.ಗೀತಾ ಎಂಬುವರು ಹೈಕೋರ್ಟ್‌ಗೆ 2021ರ ಮಾರ್ಚ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿದ್ದರು.

ಎರಡು ತಿಂಗಳಲ್ಲಿ ಪ್ರಕರಣದ ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ 2021ರ ಜೂನ್‌ 11 ರಂದು ಹೈಕೋರ್ಟ್ ಎಸಿಬಿಗೆ ನಿರ್ದೇಶಿಸಿತ್ತು. ಹೈಕೋರ್ಟ್ ನೀಡಿದ್ದ ಗಡುವಿನಲ್ಲಿ ತನಿಖೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಎಸಿಬಿ ಮಧ್ಯಂತರ ಅರ್ಜಿ ಸಲ್ಲಿಸಿ, ಗಡುವು ವಿಸ್ತರಣೆಗೆ ಕೋರಿತ್ತು. 2017 ರಲ್ಲಿ ಅಕ್ರಮ ಆಸ್ತಿ ಗಳಿಗೆ ಪ್ರಕರಣದಡಿ ಜೈಲು ಸೇರಿದ್ದ ಶಶಿಕಲಾ ಹಾಗೂ ಇಳವರಸಿ 2021 ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.

ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ: ಪ್ರಕರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಿದ ಸರ್ಕಾರದ ಆದೇಶ ರದ್ದು ಕೋರಿ ಆರೋಪಿ ಡಾ.ಆರ್ ಅನಿತಾ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ನೇತೃತ್ವದ ಏಕ ಸದಸ್ಯ ಪೀಠ ಅನಿತಾ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.


ಇದನ್ನೂ ಓದಿ: ಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...