Homeಮುಖಪುಟಮದುವೆಗೂ ಮುನ್ನ ಗರ್ಭಿಣಿಯಾದ ಯುವತಿಗೆ ಬೆಂಕಿ ಹಚ್ಚಿ ಹತ್ಯೆಗೈದ ತಾಯಿ, ಸಹೋದರನ ಬಂಧನ

ಮದುವೆಗೂ ಮುನ್ನ ಗರ್ಭಿಣಿಯಾದ ಯುವತಿಗೆ ಬೆಂಕಿ ಹಚ್ಚಿ ಹತ್ಯೆಗೈದ ತಾಯಿ, ಸಹೋದರನ ಬಂಧನ

- Advertisement -
- Advertisement -

ಮದುವೆಗೂ ಮುನ್ನ ಮಗಳು ಗರ್ಭಿಣಿಯಾಗಿದ್ದಾಳೆ ಎನ್ನುವ ವಿಚಾರ ತಿಳಿದ ತಾಯಿ ಹಾಗೂ ಯುವತಿಯ ಸಹೋದರ ಆಕೆಗೆ ಬೆಂಕಿ ಹಚ್ಚಿದ ಘಟನೆ ಮೀರತ್‌ನಲ್ಲಿ ನಡೆದಿತ್ತು. ತೀವ್ರ ಗಾಯಗೊಂಡಿದ್ದ 19 ವರ್ಷ ವಯಸ್ಸಿನ ಗರ್ಭಿಣಿ ಐದು ದಿನಗಳ ಜೀವನ್ಮರಣ ಹೋರಾಟದ ಬಳಿಕ ಇಲ್ಲಿನ ಲಾಲಾ ಲಜಪತ್ ರಾಯ್ ಸ್ಮಾರಕ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾಳೆ.

ಈ ಘಟನೆ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಉತ್ತರ ಪ್ರದೇಶದ ಬಹದ್ದೂರ್‌ಗಢದ ನವಾಡ ಗ್ರಾಮದ ಸಂತ್ರಸ್ತೆಯ ತಾಯಿ ಮತ್ತು ಸಹೋದರ ಅವಳನ್ನು ಕಾಡಿಗೆ ಕರೆದೊಯ್ದರು, ಅಲ್ಲಿ ಅವರು ಮೊದಲು ಕತ್ತು ಸೀಳಿ ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ತಿಳಿಸಿದ್ದಾರೆ.

LLRM ಆಸ್ಪತ್ರೆಯ ಜನರಲ್ ಸರ್ಜನ್ ಡಾ ಹಿಮಾಂಶು ಸಂಘವಾನ್ ಮಾತನಾಡಿ, ”ಯುವತಿಯು 80% ಕ್ಕಿಂತ ಹೆಚ್ಚು ಸುಟ್ಟಗಾಯಗಳಿಂದ ಬಳಲುತ್ತಿದ್ದಳು. ತೀವ್ರವಾಗಿ ಸುಟ್ಟ ಸ್ಥಿತಿಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಕ್ಷಣವೇ ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ಆಕೆಯ ಎದೆ ಮತ್ತು ದೇಹದ ಮೇಲ್ಭಾಗವು ಸಂಪೂರ್ಣವಾಗಿ ಸುಟ್ಟುಹೋಗಿದ್ದರಿಂದ ಆಕೆ ಉಸಿರಾಡಲು ಸಾಧ್ಯವಾಗಲಿಲ್ಲ. ಬುಧವಾರ ನಸುಕಿನ 2 ಗಂಟೆ ಸುಮಾರಿಗೆ ಗಾಯಗೊಂಡು ಸಾವನ್ನಪ್ಪಿದ್ದಾಳೆ” ಎಂದು ಹೇಳಿದ್ದಾರೆ.

”ಆಕೆಗೆ ಚಿಕಿತ್ಸೆ ನೀಡುತ್ತಿದ್ದ LLRM ಆಸ್ಪತ್ರೆಯ ಜನರಲ್ ಸರ್ಜನ್ ಮಾತನಾಡಿ, ”ಅವಳು ಗರ್ಭಿಣಿಯಾಗಿದ್ದಳು, ಆದರೆ ಆಕೆಯನ್ನು ಆಸ್ಪತ್ರೆಗೆ ಕರೆತರುವಾಗ ಭ್ರೂಣವು ಸತ್ತಿತ್ತು. ಆಕೆಯ ಸ್ಥಿತಿಯು ಸ್ಥಿರವಾದ ನಂತರ ನಾವು ಭ್ರೂಣವನ್ನು ತೆಗೆದುಹಾಕಲು ಯೋಜಿಸಿದ್ದೇವೆ, ಆದರೆ ಐದು ದಿನಗಳ ತೀವ್ರ ನಿಗಾದಲ್ಲಿ ಅವಳು ಹೃದಯ ಸ್ತಂಭನದಿಂದ ಬಳಲುತ್ತಿದ್ದಳು” ಎಂದು ತಿಳಿಸಿದ್ದಾರೆ.

ಬುಧವಾರ ಆಕೆಯ ಸಾವಿನ ಬಗ್ಗೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಕೆಯ ತಾಯಿ ಅಸರ್ಫೀ ದೇವಿ ಮತ್ತು ಸಹೋದರ ಸುನೀಲ್ ಕುಮಾರ್ ಅವರನ್ನು ಬಂಧಿಸಲಾಗಿದೆ ಮತ್ತು ಇದೀಗ ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗುವುದು ಎಂದು ಎಎಸ್‌ಪಿ ಹಪುರ್ ರಾಜ್ ಕುಮಾರ್ ಅಗರ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಉ.ಪ್ರದೇಶ: ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ತಂದೆಯಿಂದಲೇ ನಿರಂತರವಾಗಿ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...