ಗರ್ಭಿಣಿಯರು ಕೊರೊನಾ ವ್ಯಾಕ್ಸಿನೇಷನ್‌ಗೆ ಅರ್ಹರು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಘೋಷಿಸಿದೆ. ರೋಗನಿರೋಧಕ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮೂಹದ (ಎನ್‌ಟಿಎಜಿಐ) ಶಿಫಾರಸುಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ವೀಕರಿಸಿದೆ. “ಗರ್ಭಿಣಿಯರು ಈಗ ಕೋವಿನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಅಥವಾ ಲಸಿಕೆ ಪಡೆಯಲು ಹತ್ತಿರದ ಕೋವಿಡ್ ವ್ಯಾಕ್ಸಿನೇಷನ್ ಸೆಂಟರ್ (ಸಿವಿಸಿ) ಗೆ ತೆರಳಬಹುದು” ಎಂದು ಸಚಿವಾಲಯ ತಿಳಿಸಿದೆ.
ಕೊರೊನಾ ಲಸಿಕೆ ಗರ್ಭಿಣಿಯರಿಗೆ ಉಪಯುಕ್ತವಾದ ಕಾರಣ ಅವರಿಗೆ ನೀಡಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಈ ಹಿಂದೆಯೆ ಹೇಳಿದ್ದರು.
ಇದನ್ನೂ ಓದಿ: ಪುಸ್ತಕ ಪ್ರೇಮಿ ಸೈಯದ್ ಇಸಾಕ್‌ಗೆ ರಾಜರತ್ನಂ ಪ್ರಶಸ್ತಿ, ಸುಧೀಂದ್ರ ಹಾಲ್ದೊಡ್ಡೇರಿಗೆ ವಿಜ್ಞಾನ ಸಾಹಿತ್ಯ ಪುರಸ್ಕಾರ
ಐಸಿಎಂಆರ್ ಇತ್ತೀಚಿನ ಅಧ್ಯಯನವೊಂದರಲ್ಲಿ ಗರ್ಭಿಣಿ ಮತ್ತು ಪ್ರಸವಾನಂತರದ ಮಹಿಳೆಯರು ಭಾರತದ ಎರಡನೇ ಕೊರೊನಾ ಅಲೆಯಲ್ಲಿ ಮೊದಲ ಅಲೆಗಿಂತ ಹೆಚ್ಚು ತೀವ್ರವಾಗಿ ಬಾಧಿತರಾಗಿದ್ದಾರೆಂದು ತಿಳಿದುಬಂದಿದೆ. ಈ ವರ್ಷ ಪ್ರಕರಣಗಳ ಸಾವಿನ ಪ್ರಮಾಣ ಮತ್ತು ರೋಗಲಕ್ಷಣದ ಪ್ರಕರಣಗಳು ಗಮನಾರ್ಹವಾಗಿ ಹೆಚ್ಚಿವೆ.
ದೇಶದಲ್ಲಿ ಇದುವರೆಗೂ 27.56 ಕೋಟಿ ಜನರು ಒಂದು ಡೋಸ್ ಕೊರೊನಾ ವ್ಯಾಕ್ಸೀನ್ ಪಡೆದುಕೊಂಡಿದ್ದು, 5.9 ಕೋಟಿ ಜನರು ಎರಡು ಡೋಸ್ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಹಾಗಾಗಿ ದೇಶದಲ್ಲಿ ಲಸಿಕೆ ಪಡೆಯಲು ಅರ್ಹರಾಗಿರುವ 4.3% ಜನರಷ್ಟೇ ಕೊರೊನಾ ಲಸಿಕೆ ಪಡೆದುಕೊಂಡಂತಾಗಿದೆ.
ದೇಶದಲ್ಲಿ ಇದುವರೆಗೂ 3.05 ಕೋಟಿ ಜನರು ಸೋಂಕಿಗೆ ಒಳಗಾಗಿದ್ದು, 4 ಲಕ್ಷ ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ಸೋಂಕಿನಿಂದ ಇದುವರೆಗೂ 2.95 ಕೋಟಿ ಜನರು ಚೇತರಿಸಿಕೊಂಡಿದ್ದು, 5.17 ಲಕ್ಷ ಸಕ್ರಿಯ ಸೋಂಕಿತರಿದ್ದಾರೆ.
ಇದನ್ನೂ ಓದಿ: ‘ದೇವರೆ ಶಿಕ್ಷೆ ಕೊಡುವ ಕಾಲ ಬರುತ್ತದೆ’: ಯಡಿಯೂರಪ್ಪ ವಿರುದ್ದ ರೇವಣ್ಣ ಕಿಡಿ