Homeಮುಖಪುಟಅಶ್ಲೀಲ ಚಿತ್ರ ತಯಾರಿಸಿ ಪ್ರಸಾರ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಬಂಧನ

ಅಶ್ಲೀಲ ಚಿತ್ರ ತಯಾರಿಸಿ ಪ್ರಸಾರ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಬಂಧನ

- Advertisement -
- Advertisement -

ಅಶ್ಲೀಲ ಚಿತ್ರಗಳನ್ನು ತಯಾರಿಸಿ ಅವುಗಳನ್ನು ಆ್ಯಪ್‌ಗಳ ಮೂಲಕ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಬಾಲಿವುಡ್‌‌‌‌ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್‌ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, 45 ವರ್ಷದ ರಾಜ್‌ಕುಂದ್ರಾ ಈ ಪ್ರಕರಣದ ಪ್ರಮುಖ ಆರೋಪಿ ಎಂದು ಅವರು ಹೇಳಿದ್ದಾರೆ.

“ಅಶ್ಲೀಲ ಚಿತ್ರಗಳ ತಯಾರಿಕೆ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಪ್ರಸಾರ ಮಾಡುವ ಬಗ್ಗೆ, ಫೆಬ್ರವರಿಯಲ್ಲಿ ಮುಂಬಯಿಯ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು 19/7/2021 ರಂದು ಬಂಧಿಸಿದ್ದೇವೆ. ಈ ಬಗ್ಗೆ ನಮಲ್ಲಿ ಸಾಕಷ್ಟು ಪುರಾವೆಗಳಿವೆ” ಎಂದು ಮುಂಬೈ ಪೊಲೀಸ್ ಆಯುಕ್ತರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸೇರುತ್ತಿರುವ ಕೊಳ್ಳೇಗಾಲ ಶಾಸಕ ಎನ್‌. ಮಹೇಶ್‌; ಆಪ್ತರ ಹೇಳಿಕೆ

ಫೆಬ್ರವರಿ 4 ರಂದು ಮುಂಬೈನ ಉಪನಗರ ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಮಹಿಳೆಯೊಬ್ಬರು ಪೊಲೀಸರನ್ನು ಸಂಪರ್ಕಿಸಿ ತನ್ನ ದೂರಿನಲ್ಲಿ ಕೆಲವು ಆರೋಪಗಳನ್ನು ಮಾಡಿದ ನಂತರ ರಾಜ್‌ ಕುಂದ್ರಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ.

“ಮಹಿಳೆಯ ದೂರಿನ ಆಧಾರದ ಮೇಲೆ ಎಫ್ಐಆರ್ ನೋಂದಾಯಿಸಲಾಗಿದೆ. ಪ್ರಕರಣವನ್ನು ಅಪರಾಧ ಶಾಖೆಗೆ ವರ್ಗಾಯಿಸಲಾಗಿದೆ. ಈ ಹಿಂದೆಯೆ ನಾವು ಅಶ್ಲೀಲ ಚಿತ್ರಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ದಾಖಲಿಸಿದ್ದೇವೆ. ಅದರಲ್ಲಿ ಒಬ್ಬ ನಟಿ ಮತ್ತು ಇತರ ಕೆಲವು ವ್ಯಕ್ತಿಗಳನ್ನು ಆರೋಪಿಗಳನ್ನಾಗಿ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

“ರಾಜ್ ಕುಂದ್ರಾ ಪ್ರಕರಣದ ತನಿಖೆ ನಡೆಸುತ್ತೇವೆ. ಈ ಹಿಂದೆ ನೋಂದಾಯಿಸಿದ್ದ ಅಶ್ಲೀಲ ಪ್ರಕರಣಗಳ ನಡುವೆ ಈ ಪ್ರಕರಣಕ್ಕೆ ಯಾವುದೇ ಸಂಬಂಧವಿದೆಯೇ ಎಂದು ಕಂಡುಹಿಡಿಯುತ್ತೇವೆ” ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಮೇಕೆದಾಟು: ಕರ್ನಾಟಕದೊಂದಿಗೆ ಯಾವುದೇ ಮಾತುಕತೆಯಿಲ್ಲ, ಕೇಂದ್ರದ ಭರವಸೆಯಿದೆ ಎಂದ ತಮಿಳುನಾಡು ಸಿಎಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೈದರಾಬಾದ್: ಸೇಂಟ್ ಮದರ್ ತೆರೇಸಾ ಶಾಲೆ ಮೇಲೆ ಕೇಸರಿ ವಸ್ತ್ರಧಾರಿಗಳಿಂದ ದಾಳಿ: ಜೈಶ್ರೀರಾಮ್‌ ಘೋಷಣೆ...

0
ಕೇಸರಿ ಬಣ್ಣದ ಅಂಗಿ ಮತ್ತು ಶಾಲುಗಳನ್ನು ಧರಿಸಿದ್ಧ ಗುಂಪೊಂದು ಹೈದರಾಬಾದ್‌ ಮಂಚೇರಿಯಲ್ ಜಿಲ್ಲೆಯ ಕನ್ನೆಪಲ್ಲಿಯಲ್ಲಿರುವ ಸೇಂಟ್ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಯ ಆವರಣಕ್ಕೆ ನುಗ್ಗಿ ಶಾಲೆಯಲ್ಲಿ ದಾಂಧಲೆ ನಡೆಸಿ ಪಾದ್ರಿಯ ಮೇಲೆ...