Homeದಲಿತ್ ಫೈಲ್ಸ್ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಮತಾಂತರವಾದ ದಲಿತರಿಗೆ ಎಸ್‌ಸಿ ಮೀಸಲಾತಿ ನೀಡಬೇಕೇ, ಬೇಡವೇ ಎಂಬ ಪ್ರಶ್ನೆ ಸುಪ್ರೀಂಕೋರ್ಟ್‌ನಲ್ಲಿರುವ ಕಾರಣ, ಆಯೋಗ ರಚನೆಯ ಪ್ರಸ್ತಾಪ ಮಹತ್ವ ಪಡೆದಿದೆ.

- Advertisement -
- Advertisement -

ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಸಿಖ್ ಧರ್ಮವನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಂಡ ಪರಿಶಿಷ್ಟ ಜಾತಿಗಳ ಅಥವಾ ದಲಿತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅಧ್ಯಯನ ಮಾಡಲು ರಾಷ್ಟ್ರೀಯ ಆಯೋಗವನ್ನು ರಚಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಇಂತಹ ಆಯೋಗವನ್ನು ರಚಿಸುವ ಪ್ರಸ್ತಾವನೆ ಕೇಂದ್ರದಲ್ಲಿ ಸಕ್ರಿಯವಾಗಿ ಚರ್ಚೆಯಾಗುತ್ತಿದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿರುವುದಾಗಿ ‘ಇಂಡಿಯನ್‌ ಎಕ್ಸ್‌ಪ್ರೆಸ್’ ಸುದ್ದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಆಯೋಗ ರಚನೆಗೆ ಹಸಿರು ನಿಶಾನೆ ತೋರಿವೆ. ಗೃಹ, ಕಾನೂನು, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಹಾಗೂ ಹಣಕಾಸು ಸಚಿವಾಲಯಗಳ ನಡುವೆ ಈ ಪ್ರಸ್ತಾವನೆಯ ಕುರಿತು ಸಮಾಲೋಚನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರಿಗೆ ಎಸ್‌ಸಿ ಮೀಸಲಾತಿ ಕಲ್ಪಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಇಂತಹದೊಂದು ಆಯೋಗವನ್ನು ಸ್ಥಾಪಿಸಲು ಮುಂದಾಗಿರುವುದು ಮಹತ್ವ ಪಡೆದಿದೆ.

ಸಂವಿಧಾನದ ವಿಧಿ 341ರ ಪ್ರಕಾರ ಹಿಂದೂ ಧರ್ಮ, ಸಿಖ್ ಧರ್ಮ ಅಥವಾ ಬೌದ್ಧ ಧರ್ಮಕ್ಕಿಂತ ಭಿನ್ನವಾದ ಯಾವುದೇ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ. ಹಿಂದೂಧರ್ಮವನ್ನು ಮಾತ್ರ ಕೇಂದ್ರೀಕರಿಸಿ ‘ಎಸ್‌ಸಿ’ ಎಂದು ವರ್ಗೀಕರಿಸಿದ ಮೂಲ ಆದೇಶವನ್ನು 1956ರಲ್ಲಿ ತಿದ್ದುಪಡಿ ಮಾಡಿ ಸಿಖ್ಖರನ್ನು ಸೇರಿಸಲಾಯಿತು. 1990ರಲ್ಲಿ ಮತ್ತೆ ತಿದ್ದುಪಡಿ ಮಾಡಿ ಬೌದ್ಧರನ್ನೂ ಸೇರಿಸಲಾಯಿತು.

ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ, ವಿಕ್ರಮ್ ನಾಥ್ ಅವರನ್ನು ಒಳಗೊಂಡಂತೆ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ 30ರಂದು ನಡೆಸಿತು. ಅರ್ಜಿದಾರರು ಎತ್ತಿರುವ ವಿಷಯದ ಬಗ್ಗೆ ಸರ್ಕಾರದ ನಿಲುವನ್ನು ದಾಖಲಿಸುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು. ಪೀಠವು ಸಾಲಿಸಿಟರ್ ಜನರಲ್‌ಗೆ ಮೂರು ವಾರಗಳ ಕಾಲಾವಕಾಶ ನೀಡಿತು. ಅಕ್ಟೋಬರ್ 11 ಮತ್ತೆ ವಿಚಾರಣೆ ನಡೆಯಲಿದೆ.

ಪ್ರಸ್ತಾವಿತ ಆಯೋಗವು ಮೂರು ಅಥವಾ ನಾಲ್ಕು ಸದಸ್ಯರನ್ನು ಒಳಗೊಳ್ಳಬಹುದು, ಆಯೋಗದ ಅಧ್ಯಕ್ಷರು ಕೇಂದ್ರ ಕ್ಯಾಬಿನೆಟ್ ಮಂತ್ರಿಯ ಶ್ರೇಣಿಯನ್ನು ಹೊಂದಿರಬಹುದು. ಆಯೋಗದ ವರದಿಯನ್ನು ಸಲ್ಲಿಸಲು ಒಂದು ವರ್ಷಕ್ಕಿಂತ ಹೆಚ್ಚಿನ ಕಾಲಾವಧಿಯನ್ನು ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರ ಸ್ಥಿತಿಯಲ್ಲಿನ ಬದಲಾವಣೆಗಳನ್ನು ಅಧ್ಯಯನ ಮಾಡುವುದರ ಜೊತೆಗೆ, ಪ್ರಸ್ತುತ ಎಸ್‌ಸಿ ಪಟ್ಟಿಗೆ ಹೆಚ್ಚಿನ ಸಮುದಾಯಗಳನ್ನು ಸೇರಿಸುವ ಪರಿಣಾಮದ ಕುರಿತು ಪ್ರಸ್ತಾವಿತ ಆಯೋಗ ಚರ್ಚಿಸಲಿದೆ.

ಎಸ್ಟಿಗಳು ಮತ್ತು ಒಬಿಸಿಗಳಿಗೆ ಯಾವುದೇ ಧಾರ್ಮಿಕ ಚೌಕಟ್ಟು ಇಲ್ಲದ ಕಾರಣ ಈ ಆಯೋಗ ದಲಿತರಿಗೆ ಮಾತ್ರ ಸೀಮಿತವಾಗಿದೆ. “ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಯ ಹಕ್ಕುಗಳು ಧಾರ್ಮಿಕ ನಂಬಿಕೆಗೆ ಸಂಬಂಧಪಡುವುದಿಲ್ಲ” ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ವೆಬ್‌ಸೈಟ್ ಸ್ಪಷ್ಟಪಡಿಸುತ್ತದೆ.

ಇದಲ್ಲದೆ, ಮಂಡಲ್ ಆಯೋಗದ ವರದಿಯ ಅನುಷ್ಠಾನದ ನಂತರ, ಹಲವಾರು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸಮುದಾಯಗಳು ಕೇಂದ್ರ ಅಥವಾ ರಾಜ್ಯಗಳ ಒಬಿಸಿ ಪಟ್ಟಿಗಳಲ್ಲಿ ಸ್ಥಾನ ಪಡೆದಿವೆ.

ಎಸ್‌ಸಿ ಸಮುದಾಯಕ್ಕೆ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 15 ರಷ್ಟು ಮೀಸಲಾತಿ ಮತ್ತು ಎಸ್‌ಟಿಗಳಿಗೆ ಶೇಕಡಾ 7.5 ಮೀಸಲಾತಿ, ಒಬಿಸಿಗಳಿಗೆ ಶೇಕಡಾ 27 ಮೀಸಲಾತಿ ನೀಡಲಾಗಿದೆ.

ಮುಖ್ಯವಾಗಿ ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರಿಗೆ ಎಸ್‌ಸಿ ಮೀಸಲಾತಿ ನೀಡಬೇಕೇ ಎಂಬ ಪ್ರಶ್ನೆ ಹಿಂದಿನ ಸರ್ಕಾರಗಳ ಮುಂದೆಯೂ ಬಂದಿತ್ತು.

ಇದನ್ನೂ ಓದಿರಿ: ದಲಿತ ಮಕ್ಕಳ ಮೇಲೆ ಮುಂದುವರಿದ ದೌರ್ಜನ್ಯ: ಪ್ರಕರಣ 1, 2, 3, 4

ಅಕ್ಟೋಬರ್ 2004ರಲ್ಲಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಆಗಿನ ಯುಪಿಎ ಸರ್ಕಾರವು, ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಸ್ಥಿತಿಯ ಉನ್ನತಿಗೆ ಕ್ರಮ ವಹಿಸಲು ಮುಂದಾಗಿತ್ತು. ಸೂಕ್ತ ಶಿಫಾರಸು ನೀಡುವಂತೆ ಮಾಜಿ ಮುಖ್ಯ ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಅವರ ನೇತೃತ್ವದಲ್ಲಿ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗವನ್ನು ರಚಿಸಲಾಗಿತ್ತು.

ಮೇ 2007ರಲ್ಲಿ ರಂಗನಾಥ್ ಮಿಶ್ರಾ ಆಯೋಗವು ತನ್ನ ವರದಿಯನ್ನು ಸಲ್ಲಿಸಿತು. ಎಸ್‌ಸಿ ಸ್ಥಾನಮಾನವನ್ನು ಸಂಪೂರ್ಣವಾಗಿ ಧರ್ಮದಿಂದ ಬೇರ್ಪಡಿಸಬೇಕು. ಎಸ್‌ಟಿ ಸ್ಥಾನಮಾನದಂತೆ ಇಲ್ಲಿ ಧರ್ಮ-ತಟಸ್ಥವಾಗಿರಬೇಕು ಎಂದು ಶಿಫಾರಸು ಮಾಡಿತು. ಶಿಫಾರಸ್ಸುಗಳು ಕ್ಷೇತ್ರ ಅಧ್ಯಯನದಿಂದ ರುಜುವಾತಾಗಿಲ್ಲ ಎಂಬ ಕಾರಣಕ್ಕೆ ಅಂದಿನ ಯುಪಿಎ ಸರಕಾರ ಶಿಫಾರಸಗಳನ್ನು ಅಂಗೀಕರಿಸಿರಲಿಲ್ಲ.

ಪ್ರತ್ಯೇಕವಾಗಿ, 2007ರಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ನೀಡಿದ ಅಧ್ಯಯನವು ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನವನ್ನು ನೀಡಬೇಕೆಂದು ತೀರ್ಮಾನಿಸಿದೆ. ಆ ಶೋಧನೆಯು ಸಹ, ವಿಶ್ವಾಸಾರ್ಹವಾಗಿಲ್ಲವೆಂದು ಅಂಗೀಕರಿಸಲ್ಪಟ್ಟಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...