Homeಮುಖಪುಟಬಾಂಬೆ ಹೈಕೋರ್ಟ್‌ನ ವಿವಾದಾತ್ಮಕ ನ್ಯಾಯಮೂರ್ತಿ ಪುಷ್ಪಾ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ

ಬಾಂಬೆ ಹೈಕೋರ್ಟ್‌ನ ವಿವಾದಾತ್ಮಕ ನ್ಯಾಯಮೂರ್ತಿ ಪುಷ್ಪಾ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ

‘ಚರ್ಮ ಸ್ಪರ್ಶವಾದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂದು ಪೋಸ್ಕೊ ಪ್ರಕರಣದಲ್ಲಿ ಅವರು ವಿವಾದಾತ್ಮಕವಾಗಿ ತೀರ್ಪು ನೀಡಿದ್ದರು

- Advertisement -
- Advertisement -

ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರ ಕಚೇರಿಯಿಂದ ನ್ಯಾಯಮೂರ್ತಿ ಪುಷ್ಪಾ ವೀರೇಂದ್ರ ಗಣೆಡಿವಾಲಾ ಅವರ ಅಧಿಕೃತ ರಾಜೀನಾಮೆಯನ್ನು ಖಚಿತಪಡಿಸಿ ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆಯನ್ನು ಹೊರಡಿಸಿದೆ. ಅಧಿಸೂಚನೆಯನ್ನು ಸಂವಿಧಾನದ 217 ನೇ ವಿಧಿಯ ಷರತ್ತು (1) ರ ನಿಬಂಧನೆ (ಎ) ಯ ಅನುಸಾರವಾಗಿ ಹೊರಡಿಸಲಾಗಿದ್ದು, ಅಧಿಸೂಚನೆಯ ಪ್ರಕಾರ, ರಾಜೀನಾಮೆಯು ಫೆಬ್ರವರಿ 11, 2022 ರಿಂದ ಜಾರಿಗೆ ಬರುತ್ತದೆ.

ಬಾಂಬೆ ಹೈಕೋರ್ಟ್‌ನ (ನಾಗ್ಪುರ ಪೀಠ) ಹೆಚ್ಚುವರಿ ನ್ಯಾಯಾಧೀಶರಾಗಿದ್ದ ಪುಷ್ಪಾ ಅವರು ಲೈಂಗಿಕ ಪ್ರಕರಣದ ಕುರಿತು ವಿವಾದಾತ್ಮಕ ತೀರ್ಪು ನೀಡಿದ್ದರು. ಪುಷ್ಪಾ ಅವರ ಸೇವಾ ಅವಧಿಯನ್ನು ವಿಸ್ತರಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡದ ಕಾರಣ, ಅವರ ಅಧಿಕಾರಾವಧಿಯು 12 ಫೆಬ್ರವರಿ 2022 ರಂದು ಮುಕ್ತಾಯಗೊಳ್ಳಲಿತ್ತು.

ಇದನ್ನೂ ಓದಿ: ಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ನ್ಯಾಯಮೂರ್ತಿ ಗಣೇಡಿವಾಲಾ ಅವರು ಮಕ್ಕಳ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಎರಡು ವಿವಾದಾತ್ಮಕ ತೀರ್ಪುಗಳನ್ನು ನೀಡಿದ್ದರು. ಪೋಕ್ಸೊ ಕಾಯ್ದೆಯಡಿ ಲೈಂಗಿಕ ದೌರ್ಜನ್ಯದ ಅಪರಾಧವನ್ನು ರೂಪಿಸಲು ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆಗಿರಬೇಕು ಎಂಬ ಪ್ರತಿಪಾದನೆಯನ್ನು ಮಾಡಿದ್ದರು. ಈ ತೀರ್ಪು ವ್ಯಾಪಕ ಟೀಕೆಗೆ ಗುರಿಯಾಯಿತ್ತು. ಈ ವಿವಾದದ ನಂತರ, ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರನ್ನು ಬಾಂಬೆ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರನ್ನಾಗಿ ಮಾಡಲು ಜನವರಿ 20 ರಂದು ಮಾಡಿದ್ದ ಶಿಫಾರಸನ್ನು ರದ್ದುಗೊಳಿಸಿತ್ತು.

ಇದಾಗಿ ಒಂದು ತಿಂಗಳ ನಂತರ, ಫೆಬ್ರವರಿ 2021 ರಲ್ಲಿ, ಕೊಲಿಜಿಯಂ ಅವರನ್ನು ಕಾಯಂ ನ್ಯಾಯಾಧೀಶರನ್ನಾಗಿ ಮಾಡಲು ಪ್ರಸ್ತಾಪಿಸುವ ಬದಲು ಹೆಚ್ಚುವರಿ ನ್ಯಾಯಾಧೀಶರಾಗಿ ಅವರ ಅವಧಿಯನ್ನು ಇನ್ನೂ ಒಂದು ವರ್ಷಕ್ಕೆ ವಿಸ್ತರಿಸಲು ಶಿಫಾರಸು ಮಾಡಿತ್ತು.

ಕಳೆದ ವರ್ಷ ಭಾರತದ ಅಟಾರ್ನಿ ಜನರಲ್ ಸಲ್ಲಿಸಿದ ಮೇಲ್ಮನವಿಯನ್ನು ಪರಿಗಣಿಸಿ ಅವರ ವಿವಾದಾತ್ಮಕ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿತ್ತು.

ಇದನ್ನೂ ಓದಿ: ‘ಚರ್ಮ ಸ್ಪರ್ಶವಾದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂದು ತೀರ್ಪು ನೀಡಿದ್ದ ನ್ಯಾಯಾಧೀಶೆಗೆ ಮತ್ತೊಮ್ಮೆ ಹಿನ್ನಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...