Homeಮುಖಪುಟಎನ್‌ಹೆಚ್‌ಆರ್‌ಸಿ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್ ನೇಮಕ

ಎನ್‌ಹೆಚ್‌ಆರ್‌ಸಿ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್ ನೇಮಕ

- Advertisement -
- Advertisement -

ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್‌ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಹೆಚ್‌ಆರ್‌ಸಿ) ಅಧ್ಯಕ್ಷರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ (ಡಿ.23) ನೇಮಿಸಿದ್ದಾರೆ.

ಎನ್‌ಹೆಚ್‌ಆರ್‌ಸಿ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಜೂನ್ 1 ರಂದು ಹುದ್ದೆಯಿಂದ ನಿವೃತ್ತರಾಗಿದ್ದರು. ನಂತರ ಖಾಲಿ ಇದ್ದ ಹುದ್ದೆಯನ್ನು ಇದೀಗ ಭರ್ತಿ ಮಾಡಲಾಗಿದೆ. ಎನ್‌ಹೆಚ್‌ಆರ್‌ಸಿ ಸದಸ್ಯೆ ವಿಜಯಭಾರತಿ ಸಯಾನಿ ಅವರು ಈ ಅವಧಿಯಲ್ಲಿ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸುಪ್ರೀಂ ಕೋರ್ಟ್‌ನ ನಿಕಟಪೂರ್ವ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರನ್ನು ಈ ಹುದ್ದೆಗೆ ನೇಮಕ ಮಾಡುವ ಮಾತುಗಳು ಕೇಳಿ ಬಂದಿದ್ದವು. ಆದರೆ ಅದನ್ನು ಅವರು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ಮದ್ರಾಸ್ ಕಾನೂನು ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ರಾಮಸುಬ್ರಮಣಿಯನ್ ಅವರು ಮದ್ರಾಸ್ ಹೈಕೋರ್ಟ್‌ನಲ್ಲಿ ಸುಮಾರು 23 ವರ್ಷಗಳ ಕಾಲ ವಕೀಲಿಕೆ ಮಾಡಿದ್ದರು. ಜುಲೈ 31,2006ರಂದು ಮದ್ರಾಸ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು, ನವೆಂಬರ್ 9, 2009 ರಂದು ಕಾಯಂಗೊಂಡಿದ್ದರು.

ಅವರ ಸ್ವಯಂ ಕೋರಿಕೆಯ ಹಿನ್ನೆಲೆಯಲ್ಲಿ ಏಪ್ರಿಲ್ 27, 2016 ರಂದು ಅವರನ್ನು ಹೈದರಾಬಾದ್‌ನ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿತ್ತು.

ಅವಿಭಜಿತ ಆಂಧ್ರ ಪ್ರದೇಶ ವಿಭಜನೆಯಾಗಿ ತೆಲಂಗಾಣ ರಾಜ್ಯ ರಚನೆಯಾದ ಬಳಿಕ, ಜನವರಿ 1, 2019ರಿಂದ ತೆಲಂಗಾಣ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ರಾಮಸುಬ್ರಮಣಿಯನ್ ಅವರನ್ನು ನಿಯುಕ್ತಿ ಮಾಡಲಾಯಿತು. ನಂತರ ಜೂನ್ 22,2019ರಿಂದ ಅವರು ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದರು. ಸೆಪ್ಟೆಂಬರ್ 23,2019 ರಂದು ಅವರಿಗೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ನೀಡಲಾಯಿತು. ಜೂನ್ 29, 2023ರಂದು ಅವರು ಸೇವೆಯಿಂದ ನಿವೃತ್ತರಾದರು.

ಇದನ್ನೂ ಓದಿ : 5, 8ನೇ ತರಗತಿ ವಿದ್ಯಾರ್ಥಿಗಳ ಕಡ್ಡಾಯ ಪಾಸ್ ನಿಯಮ ರದ್ದು : ಅನುತ್ತೀರ್ಣಕ್ಕೆ ಅವಕಾಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...