ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಗಂಭೀರ ಆರೋಪ ಮಾಡಿದ್ದ ‘ರಾಜ್ಯ ಗುತ್ತಿಗೆದಾರರ ಸಂಘ’ದ ಅಧ್ಯಕ್ಷ ಡಿ. ಕೆಂಪಣ್ಣ (84) ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಗಂಭೀರ ಆರೋಪ ಮಾಡಿದ್ದ ಕೆಂಪಣ್ಣ ಅವರು, ಹಿಂದಿನ ಸರ್ಕಾರದ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯಪಾಲರಿಗೆ ಪತ್ರ ಬರೆದು ದೇಶದಾದ್ಯಂತ ದೊಡ್ಡ ಸುದ್ದಿಯಾಗಿದ್ದರು.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಇತ್ತೀಚೆಗಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಸು, ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದರು. ಇಂದು (ಸೆ.19) ಬೆಳಗ್ಗೆ 10 ಗಂಟೆಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಡಿ. ಕೆಂಪಣ್ಣ ಅವರು ಹಿಂದಿನ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪ ರಾಜ್ಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿತ್ತು. ಕೆಂಪಣ್ಣ ಅವರ ಆರೋಪವನ್ನು ಕಾಂಗ್ರೆಸ್ ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು, ಬಿಜೆಪಿ ವಿರುದ್ಧ‘ಪೇ ಸಿಎಂ’ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿತ್ತು.
ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ
“ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು” ಎಂದು ಸಿಎಂ ಸಿದ್ದರಾಮಯ್ಯ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು.
ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ… pic.twitter.com/MTZKOZKR4K
— Siddaramaiah (@siddaramaiah) September 19, 2024
“ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ತಿಳಿಸಿದ್ದಾರೆ.
ಇದನ್ನೂ ಓದಿ; ಆಂಬ್ಯುಲೆನ್ಸ್ ಇಲ್ಲದೆ ತಂದೆಯ ಶವ ಬೈಕ್‌ನಲ್ಲೆ ಕೊಂಡೊಯ್ದ ಮಕ್ಕಳು | ಯುಪಿ ಅಲ್ಲ, ಕರ್ನಾಟಕ!


