Homeಮುಖಪುಟಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ : ಕಪ್ಪುಪಟ್ಟಿ ಧರಿಸಿ ಪ್ರತಿಪಕ್ಷ ಸದಸ್ಯರ ವಿರೋಧ

ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ : ಕಪ್ಪುಪಟ್ಟಿ ಧರಿಸಿ ಪ್ರತಿಪಕ್ಷ ಸದಸ್ಯರ ವಿರೋಧ

- Advertisement -
- Advertisement -

ಬಜೆಟ್ ಮಂಡಿಸುವ ಮುನ್ನಾ ದಿನ ರಾಷ್ಟ್ರಪತಿಗಳು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಿದರು. ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮುಸ್ಲೀಂ ಮಹಿಳೆಯರಿಗೆ ಸ್ವಾತಂತ್ರ್ಯ ಕಲ್ಪಿಸುವ ತ್ರಿವಳಿ ತಲಾಖ್ ಮಸೂದೆ, ರಾಮ ಮಂದಿರ ನಿರ್ಮಾಣಕ್ಕೆ ಪೂರಕ ವಾತಾವರಣ ನಿರ್ಮಾಣ ಮಾಡಿದ್ದು ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿದ್ದು ಹೀಗೆ ಹಲವು ವಿಷಯಗಳನ್ನು ಪ್ರಸ್ತಾಪಿಸಿದರು. ಆಡಳಿತ ಪಕ್ಷದ ಸದಸ್ಯರು ಪ್ರತಿ ಪ್ಯಾರಾ ಓದುತ್ತಿದ್ದಂತೆಯೇ ಮೇಜು ಕುಟ್ಟಿ ಸ್ವಾಗತಿಸಿದರು.

ಪ್ರತಿಪಕ್ಷ ಸದಸ್ಯರು ಕಪ್ಪಪಟ್ಟಿಗಳನ್ನು ಧರಿಸಿ ರಾಷ್ಟ್ರಪತಿಗಳ ಭಾಷಣಕ್ಕೆ ವಿರೋಧ ವ್ಯಕ್ತಪಡಿಸಿದರು. ಜೊತೆಗೆ ಮೊದಲ ಸಾಲಿನಲ್ಲಿ ಕುಳಿತುಕೊಳ್ಳಲು ನಿರಾಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ ತಮ್ಮ ಭಾಷಣದಲ್ಲಿ ಗಾಂಧೀ, ಡಾ.ಬಿ.ಆರ್. ಅಂಭೆಡ್ಕರ್, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು, ಶಾಮ್ ಪ್ರಸಾದ್ ಮುಖರ್ಜಿ, ಸರ್ದಾರ್ ಪಟೇಲ್ ಅವರನ್ನು ಸ್ಮರಿಸಿದರು. ಈ ವೇಳೆ ಗಾಂಧೀಜಿ, ಶಾಮ್ ಪ್ರಸಾದ್ ಮುಖರ್ಜಿ ಮತ್ತು ಪಟೇಲ್ ಅವರ ಭಾವಚಿತ್ರಗಳನ್ನು ತೋರಿಸಲಾಯಿತು. ಆದರೆ ಡಾ.ಬಿ.ಅರ್. ಅಂಬೇಡ್ಕರ್ ಮತ್ತು ಜವಾಹರಲಾಲ್ ನೆಹರು ಅವರ ಭಾವಚಿತ್ರಗಳನ್ನು ಲೋಕಸಭಾ ಟಿವಿಯಲ್ಲಿ ತೋರಿಸಲಿಲ್ಲ.

ಕೇಂದ್ರ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಸ್ವಚ್ಛ ಭಾರತ, ಉಜ್ವಲ, ಪ್ರಧಾನಮಂತ್ರಿ ಆವಾಸ್ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿರುವುದನ್ನು ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.

ಸಂವಿಧಾನ ನಮಗೆ ಮಾರ್ಗದರ್ಶನ ನೀಡುತ್ತದೆ. ಅದರಂತೆ ನಾವು ನಡೆಯಬೇಕು. ಹಿಂಸೆಯಿಂದ ಪ್ರಜಾ ಪ್ರಭುತ್ವ ದುರ್ಬಲಗೊಳ್ಳುತ್ತದೆ. ಚರ್ಚೆ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತದೆ. ನಾವು ಚರ್ಚೆಯನ್ನು ಸ್ವಾಗತಿಸುತ್ತೇವೆ. ರಾಷ್ಟ್ರೀಯ ಪೌರತ್ವ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಐತಿಹಾಸಿಕ. ಗಾಂಧೀ ಅವರ ಕನಸನ್ನು ನನಸು ಮಾಡುತ್ತಿದ್ದೇವೆ. ಗಾಂಧೀಜಿ ರಾಷ್ಟ್ರೀಯ ನಾಗರಿಕ ನೋಂದಣಿ ಜಾರಿಗೆ ತರಬೇಕು ಎಂದು ಹೇಳಿದ್ದರು. ಅವರ ಮಾತುಗಳನ್ನು ಸರ್ಕಾರ ಸಾಕಾರಗೊಳಿಸಿದೆ ಎಂದು ಹೇಳಿದರು.

ರಾಷ್ಟ್ರಪತಿಗಳು ಭಾಷಣ ನಿಲ್ಲಿಸುವವರೆಗೂ ಮೇಜು ತಟ್ಟಿ ಸ್ವಾಗತಿಸುವುದನ್ನು ನಿಲ್ಲಿಸಲೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಆಡಳಿತ ಪಕ್ಷದ ಸದಸ್ಯರು ರಾಷ್ಟ್ರಪತಿ ಭಾಷಣವನ್ನು ಸ್ವಾಗತಿಸಿದರು. ಆದರೆ ಪ್ರತಿಪಕ್ಷದ ಸದಸ್ಯರು ಮೌನವಾಗಿ ರಾಷ್ಟ್ರಪತಿಗಳ ಭಾಷಣವನ್ನು ಆಲಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...