Homeಮುಖಪುಟರಾಷ್ಟ್ರಪತಿ ಚುನಾವಣೆ: ಮೊದಲ ದಿನವೇ 11 ನಾಮಪತ್ರ ಸಲ್ಲಿಕೆ

ರಾಷ್ಟ್ರಪತಿ ಚುನಾವಣೆ: ಮೊದಲ ದಿನವೇ 11 ನಾಮಪತ್ರ ಸಲ್ಲಿಕೆ

- Advertisement -
- Advertisement -

ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ದಿನವೇ ಹನ್ನೊಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸರಿಯಾದ ದಾಖಲೆಗಳಿಲ್ಲದ ಕಾರಣ ಒಂದು ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಮೂಲಗಳು ತಿಳಿಸಿರುವುದಾಗಿ ‘ಡಿಎನ್‌ಎ ಇಂಡಿಯಾ’ ಸುದ್ದಿ ಜಾಲತಾಣ ವರದಿ ಮಾಡಿದೆ.

ಬುಧವಾರ ಅಧಿಸೂಚನೆ ಹೊರಡಿಸುವ ಮೂಲಕ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಜೂನ್ 29ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಜೂನ್ 30ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಜುಲೈ 2 ಕೊನೆಯ ದಿನವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಲೈ 18 ರಂದು ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಿದವರಲ್ಲಿ ಬಿಹಾರದ ಸರನ್‌ ಪ್ರಾಂತ್ಯದ ಲಾಲು ಪ್ರಸಾದ್ ಯಾದವ್ ಎಂಬ ವ್ಯಕ್ತಿ ಕೂಡ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರಪತಿ ಚುನಾವಣೆಯ ಚುನಾವಣಾಧಿಕಾರಿಯಾಗಿರುವ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗೆ ಬುಧವಾರ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ವ್ಯಕ್ತಿಗಳು ತಮಿಳುನಾಡು, ದೆಹಲಿ, ಮಹಾರಾಷ್ಟ್ರ, ಬಿಹಾರ, ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಸೇರಿದವರಾಗಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಜುಲೈ 24 ರಂದು ಕೊನೆಗೊಳ್ಳುತ್ತದೆ.

ವಿರೋಧ ಪಕ್ಷಗಳು ಸಜ್ಜು

ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಯ ವಿರುದ್ಧ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಹಲವು ವಿರೋಧ ಪಕ್ಷಗಳ ನಾಯಕರು ಬುಧವಾರ ಒಪ್ಪಿಗೆ ಸೂಚಿಸಿದ್ದಾರೆ. ರಾಜಕೀಯ ಪಕ್ಷಗಳ ಜಂಟಿ ಸಮಾವೇಶವನ್ನು ಕರೆದಿದ್ದ ಟಿಎಂಸಿ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದು, “ಹಲವು ಪಕ್ಷಗಳು ಇಂದು ಇಲ್ಲಿವೆ. ನಾವು ಒಬ್ಬ ಒಮ್ಮತದ ಅಭ್ಯರ್ಥಿಯನ್ನು ಮಾತ್ರ ಆಯ್ಕೆ ಮಾಡಲು ನಿರ್ಧರಿಸಿದ್ದೇವೆ. ಎಲ್ಲರೂ ಈ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ” ಎಂದು ತಿಳಿಸಿದ್ದಾರೆ.

“ನಾವು ಇತರ ಪಕ್ಷಗಳೊಂದಿಗೆ ಸಮಾಲೋಚಿಸುತ್ತೇವೆ. ಇದೊಂದು ಉತ್ತಮ ಆರಂಭ. ಹಲವಾರು ತಿಂಗಳ ನಂತರ ನಾವು ಒಟ್ಟಿಗೆ ಕುಳಿತಿದ್ದು, ಈ ಒಗ್ಗಟ್ಟನ್ನು ಮತ್ತೆ ರೂಪಿಸುತ್ತೇವೆ” ಎಂದಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಚುನಾವಣೆಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡುವಂತೆ ಸಭೆಯಲ್ಲಿದ್ದ ವಿರೋಧ ಪಕ್ಷದ ನಾಯಕರು ಒತ್ತಾಯಿಸಿದರು. ಆದರೆ, ಅವರು ಮತ್ತೊಮ್ಮೆ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿರಿ: Explained: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ವಿರೋಧ ಪಕ್ಷದ ಸಂಭಾವ್ಯ ಅಭ್ಯರ್ಥಿಗಳಾಗಿ ಫಾರೂಕ್ ಅಬ್ದುಲ್ಲಾ ಮತ್ತು ಗೋಪಾಲಕೃಷ್ಣ ಗಾಂಧಿ ಅವರ ಹೆಸರನ್ನು ಮಮತಾ ಬ್ಯಾನರ್ಜಿ ಸೂಚಿಸಿದ್ದಾರೆ ಎಂದು ಆರ್‌ಎಸ್‌ಪಿಯ ಎನ್‌ಕೆ ಪ್ರೇಮಚಂದ್ರನ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕಾಂಗ್ರೆಸ್, ಸಮಾಜವಾದಿ ಪಕ್ಷ, ಎನ್‌ಸಿಪಿ, ಡಿಎಂಕೆ, ಆರ್‌ಜೆಡಿ ಮತ್ತು ಎಡಪಕ್ಷಗಳ ನಾಯಕರು ಟಿಎಂಸಿ ವರಿಷ್ಠರು ಕರೆದ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಎಎಪಿ, ಎಸ್‌ಎಡಿ, ಎಐಎಂಐಎಂ, ಟಿಆರ್‌ಎಸ್ ಮತ್ತು ಒಡಿಶಾದ ಆಡಳಿತಾರೂಢ ಬಿಜೆಡಿ ಈ ಸಭೆಗೆ ಹಾಜರಾಗಲಿಲ್ಲ.

ಶಿವಸೇನೆ, ಸಿಪಿಐ, ಸಿಪಿಐ(ಎಂ), ಸಿಪಿಐ(ಎಂಎಲ್), ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಜೆಡಿ(ಎಸ್), ಆರ್‌ಎಸ್‌ಪಿ, ಐಯುಎಂಎಲ್, ಆರ್‌ಎಲ್‌ಡಿ ಮತ್ತು ಜೆಎಂಎಂ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

“ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗದಿದ್ದರೆ ಮತ್ತೆ ಹಾಗೆ ಮಾಡ್ತಾರೆ”: ಅತ್ಯಾಚಾರ ಸಂತ್ರಸ್ತೆಯ ಸಹೋದರಿ ಹೇಳಿಕೆ

0
"ಪ್ರಜ್ವಲ್ ಮತ್ತು ರೇವಣ್ಣ ಯಾವತ್ತೂ ತಲೆ ಎತ್ತಿ ನಡೆಯಬಾರದು, ಅಂತಹ ಶಿಕ್ಷೆಯಾಗಬೇಕು" ಎಂದು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯೊಬ್ಬರ ಸಹೋದರಿ ಮಾಲಾ (ಹೆಸರು ಬದಲಿಸಲಾಗಿದೆ) ಹೇಳಿರುವುದಾಗಿ thenewsminute.com ವರದಿ ಮಾಡಿದೆ. ಮಾಲಾಗೆ ತನ್ನ ಸಹೋದರಿ...