Homeರಾಷ್ಟ್ರೀಯರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಶರದ್‌ ಪವಾರ್‌‌ ಸಾಧ್ಯತೆ

ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಶರದ್‌ ಪವಾರ್‌‌ ಸಾಧ್ಯತೆ

- Advertisement -
- Advertisement -

ರಾಷ್ಟ್ರಪತಿ ಚುನಾವಣೆಗೆ ಮುನ್ನ, ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಸರಣೆ ಸಭೆಯು ಒಮ್ಮತದ ಅಭ್ಯರ್ಥಿಯ ಹುಡುಕಾಟವನ್ನು ತೀವ್ರಗೊಳಿಸುತ್ತಿದೆ ಎಂದು ಸೂಚಿಸುತ್ತದೆ. ಈ ಸಭೆಗಳು ಒಕ್ಕೂಟ ಸರ್ಕಾರದ ಮಾಜಿ ಸಚಿವ ಶರದ್ ಪವಾರ್ ಅವರನ್ನು ಸುತ್ತುವರೆದಿರುವುದರಿಂದ, ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಹುದ್ದೆಯ ಚುನಾವಣೆಗೆ ಅವರು ವಿರೋಧ ಪಕ್ಷದ ಅಭ್ಯರ್ಥಿಯಾಗಿ ಹೊರಹೊಮ್ಮಲಿದ್ದಾರೆ ಎಂಬ ಊಹೆಯಿದೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

ರಾಷ್ಟ್ರಪತಿ ಹುದ್ದೆಗೆ ಶರದ್ ಪವಾರ್ ಅವರಿಗೆ ಕಾಂಗ್ರೆಸ್ ತನ್ನ ಬೆಂಬಲವನ್ನು ನೀಡಿದೆ ಎಂದು ವರದಿಯಾಗಿದೆ. ಕಳೆದ ಗುರುವಾರ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ಸಂದೇಶದೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶರದ್ ಪವಾರ್ ಅವರನ್ನು ಮುಂಬೈನಲ್ಲಿ ಭೇಟಿಯಾಗಿದ್ದರು.ಈ ಸಲಹೆಗೆ ಎನ್‌ಸಿಪಿ ನಾಯಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ, ಶರದ್‌ ಪವಾರ್ ಅವರು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸಂಜಯ್ ಸಿಂಗ್ ಅವರಿಂದ ಕರೆ ಸ್ವೀಕರಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಹೇಳಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರೊಂದಿಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರದ ಕುರಿತು ಚರ್ಚಿಸಲು ಬುಧವಾರ ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಪ್ರತಿಪಕ್ಷಗಳ ಸಭೆಗೆ ಕರೆದಿರುವ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೂರವಾಣಿಯಲ್ಲಿ ಮಾತನಾಡಿದ್ದಾರೆ.

ರಾಷ್ಟ್ರಪತಿ ಚುನಾವಣೆ ಜುಲೈ 18 ರಂದು ನಡೆಯಲಿದೆ. ಇದಾಗಿ ಮೂರು ದಿನಗಳ ನಂತರ ಮತ ಎಣಿಕೆ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದೆ.

ಭಾರತದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಶರದ್‌ ಪವಾರ್ ಅವರು ಅನೇಕ ಮೈತ್ರಿಗಳು ಮತ್ತು ಸಮ್ಮಿಶ್ರ ಸರ್ಕಾರಗಳನ್ನು ಮಾಡಿದ ಮತ್ತು ಮುರಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಬಿಜೆಪಿಯನ್ನು ವಿಫಲಗೊಳಿಸಲು ಸೈದ್ಧಾಂತಿಕ ವಿರೋಧ ಪಕ್ಷಗಳಾದ ಶಿವಸೇನೆ ಮತ್ತು ಕಾಂಗ್ರೆಸ್‌ಗಳನ್ನು ಒಟ್ಟುಗೂಡಿಸಿ ಮಹಾರಾಷ್ಟ್ರದಲ್ಲಿ ಮೈತ್ರಿ ಆಡಳಿತ ಒಕ್ಕೂಟವನ್ನು ರಚಿಸಿದ್ದಾರೆ.

ಇದನ್ನೂ ಓದಿ: ಬಾಂಬೆ ಹೈಕೋರ್ಟ್‌ನ ವಿವಾದಾತ್ಮಕ ನ್ಯಾಯಮೂರ್ತಿ ಪುಷ್ಪಾ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ

ಬಿಜೆಪಿಯು ತನ್ನ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಸಚಿವ ರಾಜನಾಥ್ ಸಿಂಗ್ ಅವರಿಗೆ ವಿವಿಧ ಪಕ್ಷಗಳೊಂದಿಗೆ ಚರ್ಚೆ ನಡೆಸಿ ಅವಿರೋಧ ಆಯ್ಕೆ ನಡೆಯುವಂತೆ ನೋಡಿಕೊಳ್ಳಲು ನೇಮಿಸಿದೆ.

2017 ರಲ್ಲಿ ಬಿಜೆಪಿ ರಾಜನಾಥ್ ಸಿಂಗ್ ಮತ್ತು ವೆಂಕಯ್ಯ ನಾಯ್ಡು ಅವರನ್ನು ಪ್ರಚಾರಕ್ಕಾಗಿ ನಾಮನಿರ್ದೇಶನ ಮಾಡಿತ್ತು. ನಂತರ ವೆಂಕಯ್ಯ ನಾಯ್ಡು ಅವರನ್ನು ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಹೆಸರಿಸಲಾಯಿತು. ಒಮ್ಮತ ಮೂಡದಿದ್ದರೆ ಬಿಜೆಪಿ ಚುನಾವಣೆಗೆ ತಯಾರಿ ನಡೆಸಲಿದೆ. ಅನೇಕ ಹೆಸರುಗಳು ಮುನ್ನಲೆಗೆ ಬಂದಿದ್ದರೂ, ಬಿಜೆಪಿ ಯಾವುದನ್ನೂ ಖಚಿತಪಡಿಸಿಲ್ಲ.

ಶಾಸಕರು ಮತ್ತು ಸಂಸದರ ಮತಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ ಆಧಾರದ ಮೇಲೆ ಅಧ್ಯಕ್ಷೀಯ ಚುನಾವಣೆ ನಡೆಯುತ್ತದೆ. ಸಂಸದರು ಮತ್ತು ಶಾಸಕರು ಸೇರಿದಂತೆ ಸುಮಾರು 4,809 ಮತದಾರರು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಮತ ಚಲಾಯಿಸುತ್ತಾರೆ.

ಪ್ರತಿ ಶಾಸಕರ ಮತ ಮೌಲ್ಯವು ರಾಜ್ಯದ ಜನಸಂಖ್ಯೆ ಮತ್ತು ವಿಧಾನಸಭಾ ಸ್ಥಾನಗಳ ಸಂಖ್ಯೆಯನ್ನು ಅವಲಂಬಿಸಿರುತ್ತದೆ. ಚುನಾವಣಾ ಕಾಲೇಜಿನ ಒಟ್ಟು ಸಾಮರ್ಥ್ಯ 10,86,431 ಆಗಿದ್ದು, ಇದರಲ್ಲಿ 50% ದಷ್ಟು ಮತಗಳನ್ನು ದಾಟಿದ ಯಾವುದೇ ಅಭ್ಯರ್ಥಿ ಗೆಲ್ಲುತ್ತಾರೆ.

ಇದನ್ನೂ ಓದಿ: ಧರ್ಮ ಆಚರಿಸಿ, ದ್ವೇಷ ಭಾಷಣವನ್ನಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಬಹುಮತಕ್ಕೆ 13,000 ಮತಗಳ ಕೊರತೆಯಿದೆ.

2017 ರಲ್ಲಿ, ಆಡಳಿತಾರೂಢ ಒಕ್ಕೂಟವು ಕೆ. ಚಂದ್ರಶೇಖರ ರಾವ್ ಅವರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್), ಜಗನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಬಿಜೆಡಿ ಬೆಂಬಲವನ್ನು ಪಡೆದಿತ್ತು.

ಆದರೆ ಈ ಬಾರಿ, ಚಂದ್ರಶೇಖರ ರಾವ್ ಅವರ ಕೆಸಿಆರ್ ಪಕ್ಷವೂ, ಬಿಜೆಪಿಯನ್ನು ಜಂಟಿಯಾಗಿ ಎದುರಿಸಲು ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನಗಳನ್ನು ಮಾಡುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ...

0
ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು...