Homeರಾಜಕೀಯರಾಷ್ಟ್ರಪತಿ ಚುನಾವಣೆ - ‘ದ್ರೌಪದಿ ಮುರ್ಮು ಬಗ್ಗೆ ಗೌರವವಿದೆ, ಆದರೆ...’: ಯಶವಂತ ಸಿನ್ಹಾ ಬೆಂಬಲಿಸಿದ ಆಮ್‌...

ರಾಷ್ಟ್ರಪತಿ ಚುನಾವಣೆ – ‘ದ್ರೌಪದಿ ಮುರ್ಮು ಬಗ್ಗೆ ಗೌರವವಿದೆ, ಆದರೆ…’: ಯಶವಂತ ಸಿನ್ಹಾ ಬೆಂಬಲಿಸಿದ ಆಮ್‌ ಆದ್ಮಿ ಪಕ್ಷ

- Advertisement -
- Advertisement -

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಜಂಟಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುವುದಾಗಿ ಆಮ್ ಆದ್ಮಿ ಪಕ್ಷ ಶನಿವಾರ ಘೋಷಿಸಿದೆ. ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಈ ಘೋಷಣೆ ಮಾಡಿದ್ದಾರೆ.

“ನಮಗೆ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಬಗ್ಗೆ ಗೌರವವಿದೆ. ಆದರೆ ನಾವು ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುತ್ತೇವೆ” ಎಂದು ಪಕ್ಷದ ರಾಜಕೀಯ ಸಲಹಾ ಸಮಿತಿ (ಪಿಎಸಿ) ಸಭೆಯ ನಂತರ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಮ್‌ ಆದ್ಮಿ ಪಕ್ಷವೂ ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ಸರ್ಕಾರವನ್ನು ಹೊಂದಿದೆ. ದೆಹಲಿಯ ಮೂವರು ಸೇರಿದಂತೆ ಎರಡು ರಾಜ್ಯಗಳಲ್ಲಿ ಪಕ್ಷವೂ 10 ರಾಜ್ಯಸಭಾ ಸಂಸದರನ್ನು ಹೊಂದಿದೆ. ಅಲ್ಲದೆ, ಪಕ್ಷವು ಪಂಜಾಬ್‌ನಲ್ಲಿ 92, ದೆಹಲಿಯಲ್ಲಿ 62 ಮತ್ತು ಗೋವಾದಲ್ಲಿ ಇಬ್ಬರು ಸೇರಿದಂತೆ ಒಟ್ಟು 156 ಶಾಸಕರನ್ನು ಹೊಂದಿದೆ.

ಇದನ್ನೂ ಓದಿ: ಬಿಜೆಪಿ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಅಮರಿಂದರ್ ಸಿಂಗ್ ಸಾಧ್ಯತೆ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಗೋಪಾಲಕೃಷ್ಣ ಗಾಂಧಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ ನಂತರ ಯಶವಂತ ಸಿನ್ಹಾ ಅವರು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಆಯ್ಕೆಯಾದ ಅಭ್ಯರ್ಥಿ ದ್ರೌಪದಿ ಮುರ್ಮು ವಿರುದ್ಧ ಸ್ಪರ್ಧಿಸಲಿದ್ದಾರೆ.

ಬಿಜೆಡಿ, ವೈಎಸ್ಆರ್ ಕಾಂಗ್ರೆಸ್, ಬಿಜು ಜನತಾ ದಳ, ಬಹುಜನ ಸಮಾಜ ಪಕ್ಷ, ಶಿರೋಮಣಿ ಅಕಾಲಿದಳ ಮತ್ತು ಶಿವಸೇನೆಯಂತಹ ಕೆಲವು ಪ್ರಾದೇಶಿಕ ಪಕ್ಷಗಳ ಬೆಂಬಲವನ್ನು ದ್ರೌಪದಿ ಮುರ್ಮು ಅವರು ಪಡೆದಿದ್ದಾರೆ. ಹೀಗಾಗಿ ಅವರು ಬೆಂಬಲದ ಮತಗಳ ಪ್ರಮಾಣವು ಈಗಾಗಲೇ 60% ದಾಟಿದೆ. ಅವರು ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆಯಾಗುವ ಮುಂಚೆ ಎನ್‌ಡಿಎ ಬೆಂಬಲಕ್ಕೆ 50% ಮತಗಳು ಮಾತ್ರವಿತ್ತು.

ಇದನ್ನೂ ಓದಿ: Explained: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

64 ವರ್ಷದ ದ್ರೌಪದಿ ಮುರ್ಮು ಅವರು ಆಯ್ಕೆಯಾದರೆ ಭಾರತದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಮಹಿಳೆಯಾಗಲಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಸೋಮವಾರ ಮತದಾನ ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...