ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಯಶವಂತ್ ಸಿನ್ಹಾ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿಯಿಂದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭ್ಯರ್ಥಿಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
“ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ನಾವು ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದ್ದೇವೆ. ಮೋದಿ ಸರ್ಕಾರ ಮತ್ತಷ್ಟು ಹಾನಿ ಮಾಡದಂತೆ ತಡೆಯಲು ನಿರ್ಧರಿಸಿದ್ದೇವೆ. ಇಂದು ನಡೆದ ಸಭೆಯಲ್ಲಿ ನಾವು ಯಶವಂತ್ ಸಿನ್ಹಾ ಅವರನ್ನು ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇವೆ. ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಯಶವಂತ್ ಸಿನ್ಹಾ ಅವರಿಗೆ ಮತ ನೀಡುವಂತೆ ಮನವಿ ಮಾಡುತ್ತೇವೆ” ಎಂದು ಪ್ರತಿಪಕ್ಷಗಳ ಜಂಟಿ ಹೇಳಿಕೆಯನ್ನು ಓದಿದ ಕಾಂಗ್ರೆಸ್‌ನ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಇದನ್ನೂ ಓದಿ: Explained: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?
We (opposition parties) have unanimously decided that Yashwant Sinha will be the common candidate of the Opposition for the Presidential elections: Congress leader Jairam Ramesh pic.twitter.com/lhnfE7Vj8d
— ANI (@ANI) June 21, 2022
ಜಂಟಿ ಹೇಳಿಕೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದೆ. ಇದರಿಂದಾಗಿ “ಅರ್ಹ ರಾಷ್ಟ್ರಪತಿಯನ್ನು ಅವಿರೋಧವಾಗಿ ಆಯ್ಕೆ ಮಾಡಬಹುದಾಗಿದೆ” ಎಂದು ಹೇಳಲಾಗಿದೆ. ರಾಷ್ಟ್ರಪತಿ ಅಭ್ಯರ್ಥಿ ಸಿನ್ಹಾ ಅವರ ಪ್ರಚಾರಕ್ಕೆ ಸಮಿತಿ ರಚಿಸಲಾಗಿದೆ.
ರಾಷ್ಟ್ರಪತಿ ಚುನಾವಣೆಗೆ ಜೂನ್ 27ರಂದು ಬೆಳಗ್ಗೆ 11.30ಕ್ಕೆ ನಾಮಪತ್ರ ಸಲ್ಲಿಸಲಿದ್ದೇವೆ ಎಂದು ಎನ್‌ಸಿಪಿ ನಾಯಕ ಶರದ್ ಪವಾರ್ ತಿಳಿಸಿದ್ದಾರೆ.
ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮನವಿಯನ್ನು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಸೋಮವಾರ ತಿರಸ್ಕರಿಸಿದ್ದರು. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಕೂಡಾ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಿರ್ಧಾರ ಪ್ರಕಟಿಸಿದ್ದರು.
ಗೋಪಾಲಕೃಷ್ಣ ಗಾಂಧಿ ಅವರು ತಮ್ಮ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಸೋಮವಾರ ಯಶವಂತ್ ಸಿನ್ಹಾ ಅವರ ಹೆಸರನ್ನು ವಿರೋಧ ಪಕ್ಷಗಳು ಚರ್ಚಿಸಿದ್ದವು ಎಂದು ವರದಿಗಳು ತಿಳಿಸಿವೆ. ಈ ಬಗ್ಗೆ ಟ್ವೀಟ್‌ನಲ್ಲಿ ಸುಳಿವು ನೀಡಿದ್ದ ಯಶವಂತ್ ಸಿನ್ಹಾ ಅವರು ತಮ್ಮ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
ಇದನ್ನೂ ಓದಿ: ಮಹಾರಾಷ್ಟ್ರ: ಅಧಿಕಾರಕ್ಕಾಗಿ ನಾನು ಎಂದಿಗೂ ಮೋಸ ಮಾಡುವುದಿಲ್ಲ ಎಂದ ಏಕನಾಥ್ ಶಿಂಧೆ