Homeಮುಖಪುಟರಾಷ್ಟ್ರಪತಿ ಚುನಾವಣೆ: ಮಾಜಿ ಕೇಂದ್ರ ಸಚಿವ ಯಶವಂತ್‌ ಸಿನ್ಹಾ ಕಣಕ್ಕಿಳಿಯುವ ಸಾಧ್ಯತೆ

ರಾಷ್ಟ್ರಪತಿ ಚುನಾವಣೆ: ಮಾಜಿ ಕೇಂದ್ರ ಸಚಿವ ಯಶವಂತ್‌ ಸಿನ್ಹಾ ಕಣಕ್ಕಿಳಿಯುವ ಸಾಧ್ಯತೆ

- Advertisement -
- Advertisement -

ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಯಶವಂತ್‌ ಸಿನ್ಹಾ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಬಗ್ಗೆ ತಮ್ಮ ಟ್ವೀಟ್‌ನಲ್ಲಿ ಯಶವಂತ್ ಸಿನ್ಹಾ ಸುಳಿವು ನೀಡಿದ್ದಾರೆ.

ಇಂದು ಮುಂಬರುವ ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಇದಕ್ಕೆ ಮುಂಚಿತವಾಗಿ,  ಮಾಜಿ ಕೇಂದ್ರ ಸಚಿವ ಯಶವಂತ್‌ ಸಿನ್ಹಾ ಅವರು ತಮ್ಮ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಇಂದು ಟ್ವೀಟ್ ಮಾಡಿರುವ ಅವರು, “ಟಿಎಂಸಿಯಲ್ಲಿ ಮಮತಾಜಿ ಅವರು ನನಗೆ ನೀಡಿದ ಗೌರವ ಮತ್ತು ಪ್ರತಿಷ್ಠೆಗೆ ನಾನು ಆಭಾರಿಯಾಗಿದ್ದೇನೆ. ಈಗ ಒಂದು ದೊಡ್ಡ ರಾಷ್ಟ್ರೀಯ ಉದ್ದೇಶಕ್ಕಾಗಿ ಮತ್ತು ಪ್ರತಿಪಕ್ಷಗಳ ಒಗ್ಗಟಿಗಾಗಿ ಕೆಲಸ ಮಾಡಲು ನಾನು ಪಕ್ಷದಿಂದ ದೂರ ಸರಿಯಬೇಕಾದ ಸಮಯ ಬಂದಿದೆ. ಮಮತಾ ಬ್ಯಾನರ್ಜಿ ಅವರು ನನ್ನ ನಿರ್ಧಾರವನ್ನು ಗೌರವಿಸುತ್ತಾರೆ ಎಂದು ನನಗೆ ಖಾತ್ರಿಯಿದೆ” ಎಂದಿದ್ದಾರೆ.

ಇದನ್ನೂ ಓದಿ: Explained: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ತಮ್ಮ ರಾಜೀನಾಮೆಯನ್ನು ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರಿಗೆ ಕಳುಹಿಸಿದ್ದಾರೆ ಎಂದು ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ. ಯಶವಂತ್ ಸಿನ್ಹಾ ಅವರು 2018 ರಲ್ಲಿ ಬಿಜೆಪಿ ತೊರೆದು, 2021 ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದರು. ನಂತರ ಅವರನ್ನು ಟಿಎಂಸಿ ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವ ವಿರೋಧ ಪಕ್ಷಗಳ ಮನವಿಯನ್ನು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಸೋಮವಾರ ತಿರಸ್ಕರಿಸಿದ್ದಾರೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಕೂಡಾ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಿರ್ಧಾರ ಪ್ರಕಟಿಸಿದ್ದರು.

ಗೋಪಾಲಕೃಷ್ಣ ಗಾಂಧಿ ಅವರು ತಮ್ಮ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಸೋಮವಾರ ಯಶವಂತ್ ಸಿನ್ಹಾ ಅವರ ಹೆಸರನ್ನು ವಿರೋಧ ಪಕ್ಷಗಳು ಚರ್ಚಿಸಿವೆ ಎಂದು ವರದಿಗಳು ತಿಳಿಸಿವೆ.

ಶರದ್ ಪವಾರ್ ಅವರು ಇಂದು ಕರೆದಿರುವ ವಿರೋಧ ಪಕ್ಷದ ಸಭೆಗೆ ಮಮತಾ ಬ್ಯಾನರ್ಜಿ ಗೈರುಹಾಜರಾಗುವ ಸಾಧ್ಯತೆಯಿದೆ. ಬದಲಾಗಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ತೃಣಮೂಲ ಕಾಂಗ್ರೆಸ್ ಪ್ರತಿನಿಧಿಯಾಗಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದರ ಜೊತೆಗೆ ಬಿಜೆಪಿ ಕೂಡ ಇಂದು ತನ್ನ ಸಂಸದೀಯ ಮಂಡಳಿ ಸಭೆಯನ್ನು ನಡೆಸಲಿದ್ದು, ರಾಷ್ಟ್ರಪತಿ ಚುನಾವಣೆಗೆ ತನ್ನ ಆಯ್ಕೆಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.


ಇದನ್ನೂ ಓದಿ:  ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಮನವಿ ತಿರಸ್ಕರಿಸಿದ ಮಹಾತ್ಮ ಗಾಂಧಿ ಮೊಮ್ಮಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 60 ವರ್ಷ ದೇಶ ಆಳಿದ ಪಕ್ಷಕ್ಕೆ ರಾಷ್ಟ್ರಪತಿ ಅಭ್ಯರ್ಥಿ ಇಲ್ಲಾ ಎಂಬುದು ಆ ಪಕ್ಷದ ಅಳಿವು ಉಳಿವನ್ನು ಸೂಚಿಸಿದೆ.ಜೈ ಹಿಂದೂ ರಾಷ್ಟ್ರ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...