Homeಮುಖಪುಟಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ, 21ರಂದು ಮತ ಎಣಿಕೆ: ಚುನಾವಣಾ ಆಯೋಗ

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ, 21ರಂದು ಮತ ಎಣಿಕೆ: ಚುನಾವಣಾ ಆಯೋಗ

- Advertisement -
- Advertisement -

16ನೇ ರಾಷ್ಟ್ರಪತಿ ಚುನಾವಣೆ ಜುಲೈ 18ರಂದು ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಗುರುವಾರ ತಿಳಿಸಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳಲಿದೆ.

ಜೂನ್ 15 ರಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಜೂನ್ 29 ಕೊನೆಯ ದಿನಾಂಕ. ನಾಮಪತ್ರಗಳ ಪರಿಶೀಲನೆಯ ಜೂನ್ 30 ಮತ್ತು ನಾಮಪತ್ರ ಹಿಂತೆಗೆದುಕೊಳ್ಳುವ ಕೊನೆಯ ದಿನಾಂಕ ಜುಲೈ 2 ಎಂದು  ಚುನಾವಣಾ ಆಯೋಗ ಪ್ರಕಟಿಸಿದೆ.

“ಸಂವಿಧಾನದ ಪರಿಚ್ಛೇದ 62 ರ ಪ್ರಕಾರ, ಅಧ್ಯಕ್ಷರ ಅವಧಿ ಪೂರ್ಣಗೊಳ್ಳುವ ಮೊದಲು ಮುಂದಿನ ಅಧ್ಯಕ್ಷರ ಚುನಾವಣೆಯನ್ನು ನಡೆಸಬೇಕು. 2022 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಒಟ್ಟು 4,809 ಮತದಾರರು ಮತ ಚಲಾಯಿಸಲಿದ್ದಾರೆ. ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸಲು ಸಾಧ್ಯವಿಲ್ಲ” ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್: ಗರಿಷ್ಠ ಶಿಕ್ಷೆಗಾಗಿ ಅಪ್ರಾಪ್ತ ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಲು ಪೊಲೀಸರ ಮನವಿ

ಭಾರತದ ಸಂವಿಧಾನದ 54 ನೇ ವಿಧಿಯ ಪ್ರಕಾರ, ಸಂಸತ್ತಿನ ಉಭಯ ಸದನಗಳ ಚುನಾಯಿತ ಸದಸ್ಯರು ಮತ್ತು ದೆಹಲಿ, ಪುದುಚೇರಿಯ ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳ ಶಾಸಕಾಂಗ ಸಭೆಗಳ ಚುನಾಯಿತ ಸದಸ್ಯರು ಮತದಾನದಲ್ಲಿ ಭಾಗವಹಿಸಬಹುದು.

ರಾಜ್ಯಸಭೆ ಮತ್ತು ಲೋಕಸಭೆ ಅಥವಾ ರಾಜ್ಯಗಳ ವಿಧಾನಸಭೆಗಳ ನಾಮನಿರ್ದೇಶಿತ ಸದಸ್ಯರು ಚುನಾವಣೆಯಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ. ಅದೇ ರೀತಿ ವಿಧಾನ ಪರಿಷತ್ತಿನ ಸದಸ್ಯರು ಕೂಡ ರಾಷ್ಟ್ರಪತಿ ಚುನಾವಣೆಗೆ ಮತದಾರರಲ್ಲ.

“ಜೈಲಿನಲ್ಲಿರುವವರು ಸಂಸದರು ಪೆರೋಲ್‌ಗೆ ಅರ್ಜಿ ಸಲ್ಲಿಸಿ, ಪೆರೋಲ್ ಪಡೆದರೆ ಮತ ಚಲಾಯಿಸಬಹುದು” ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಬಿಹಾರ: ಮಗನ ಮೃತದೇಹ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ 50 ಸಾವಿರಕ್ಕೆ ಬೇಡಿಕೆ, ಹಣಕ್ಕಾಗಿ ಭಿಕ್ಷೆ ಎತ್ತಿದ ವೃದ್ಧ ದಂಪತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...