Homeಮುಖಪುಟಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ; ಇನ್ನೂ ಆರು ತಿಂಗಳು ವಿಸ್ತರಣೆ

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ; ಇನ್ನೂ ಆರು ತಿಂಗಳು ವಿಸ್ತರಣೆ

- Advertisement -
- Advertisement -

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಆಗಸ್ಟ್ 13 ರಿಂದ ಆರು ತಿಂಗಳು ವಿಸ್ತರಿಸುವ ಶಾಸನಬದ್ಧ ನಿರ್ಣಯವನ್ನು ಸಂಸತ್ತು ಮಂಗಳವಾರ ಅಂಗೀಕರಿಸಿದೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಷಯದ ಕುರಿತು ಗದ್ದಲದ ನಡುವೆ, ಕಳೆದ ವಾರ ಲೋಕಸಭೆ ಅಂಗೀಕರಿಸಿದ ನಿರ್ಣಯವನ್ನು ರಾಜ್ಯಸಭೆ ಅಂಗೀಕರಿಸಿತು.

ವಿಪಕ್ಷ ಸಂಸದರ ಪ್ರತಿಭಟನೆಯ ನಡುವೆ, ನಿರ್ಣಯವನ್ನು ಅಂಗೀಕರಿಸುವುದು ‘ಸಾಂವಿಧಾನಿಕ ಬಾಧ್ಯತೆ’ ಎಂದು ಅಧ್ಯಕ್ಷ ಹರಿವಂಶ್ ಹೇಳಿದರು.

ಸದನದಲ್ಲಿ ಅಂಗೀಕಾರಕ್ಕಾಗಿ ನಿರ್ಣಯವನ್ನು ಮಂಡಿಸಿದ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ, ನ್ಯಾಯಾಲಯದ ಆದೇಶದಿಂದಾಗಿ ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ಬಿರುಕು ಉಂಟಾಗಿದೆ ಎಂದು ಹೇಳಿದರು.

“ನ್ಯಾಯಾಲಯದ ಆದೇಶದಿಂದಾಗಿ ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ಬಿರುಕು ಸೃಷ್ಟಿಯಾಗಿದೆ. ಇದು ಕೋಮು ಹಿಂಸಾಚಾರ ಎಂದು ಹೇಳುವವರು ತಪ್ಪು…” ಎಂದು ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆ ರೈ ಹೇಳಿದರು.

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿ ಎಂಟು ತಿಂಗಳಾಗಿದೆ ಎಂದು ಅವರು ಹೇಳಿದರು. ಕೇವಲ ಒಂದು ಹಿಂಸಾಚಾರದ ಘಟನೆ ಮಾತ್ರ ವರದಿಯಾಗಿದೆ ಎಂದು ಹೇಳಿದರು. ನಂತರ, ರಾಜ್ಯಸಭೆಯು ಧ್ವನಿ ಮತದೊಂದಿಗೆ ನಿರ್ಣಯವನ್ನು ಅಂಗೀಕರಿಸಿತು.

‘ಎಸ್‌ಐಆರ್‌’ ವಿರುದ್ಧ ವಿಪಕ್ಷಗಳ ‘ಇಂಡಿಯಾ’ ಬಣ ಮೆರವಣಿ; ಆಗಸ್ಟ್ 11 ಕ್ಕೆ ಮರು ನಿಗದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...

ಕುವೈತ್ ವಿದ್ಯುತ್ ಸ್ಥಾವರ, ಉಪ್ಪು ನಿವಾರಣಾ ಘಟಕದ ಮೇಲೆ ಇರಾನ್ ದಾಳಿ: ಭಾರತ ಮೂಲದ ಕಾರ್ಮಿಕ ಸಾವು

ದುಬೈ: ಕುವೈತ್‌ನಲ್ಲಿ ವಿದ್ಯುತ್ ಮತ್ತು ನೀರು ನಿವಾರಣಾ ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸುದ್ದಿ ಸಂಸ್ಥೆ ಕುನಾ ಸೋಮವಾರ ವರದಿ ಮಾಡಿದೆ. ದಾಳಿಯ ಸಮಯದಲ್ಲಿ...

1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಆರೋಪ; ದೆಹಲಿ ಪೊಲೀಸರಿಂದ ಮೈಸೂರಿನ ವ್ಯಕ್ತಿ ಬಂಧನ

ದೇಶಾದ್ಯಂತ ಹಲವು ಶಾಲೆಗಳು, ಹೈಕೋರ್ಟ್‌ ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮೈಸೂರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೆಹಲಿ...

ಬಾಂಗ್ಲಾದೇಶದಿಂದ ಭಾರತದಲ್ಲಿ ಭಯೋತ್ಪಾದಕ ದಾಳಿ ನಿರ್ವಹಿಸುತ್ತಿದ್ದ ಲಷ್ಕರ್ ಕಮಾಂಡರ್ ಶಬ್ಬೀರ್ ಅಹ್ಮದ್ ಲೋನ್ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಮುಖ ಪ್ರಗತಿಯಲ್ಲಿ, ಬಾಂಗ್ಲಾದೇಶದಲ್ಲಿ ನೆಲೆಸಿದ್ದು, ಭಾರತದಲ್ಲಿ ದಾಳಿಗಳನ್ನು ಯೋಜಿಸುತ್ತಿದ್ದ ಆರೋಪ ಹೊತ್ತಿರುವ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. ಆರೋಪಿ...

‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 'ಖಬರ್ ರಾಜ್‌ಕೋಟ್ ಕಿ ನ್ಯೂಸ್' ಎಂಬ ಆನ್‌ಲೈನ್...