Homeಮುಖಪುಟಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ : ಹೊಸ ಸರ್ಕಾರ ರಚನೆಗೆ ಹಾದಿ ಸುಗಮ

ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ : ಹೊಸ ಸರ್ಕಾರ ರಚನೆಗೆ ಹಾದಿ ಸುಗಮ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಹಿಂಪಡೆಯಲಾಗಿದೆ ಎಂದು ಕೇಂದ್ರ ಸರ್ಕಾರ ಭಾನುವಾರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಹೊಸ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ.

ರಾಷ್ಟ್ರಪತಿ ಆಡಳಿತ ವಾಪಸ್ ಪಡೆಯುವ ಆದೇಶಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ. 2018ರಲ್ಲಿ, ರಾಜ್ಯಪಾಲರ ಆಡಳಿತ ಆರು ತಿಂಗಳ ಪೂರ್ಣಗೊಂಡ ನಂತರ, ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿದ್ದರು. ಮೆಹಬೂಬಾ ಮುಫ್ತಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ಜೂನ್‌ನಲ್ಲಿ ರಾಜಕೀಯ ಬಿಕ್ಕಟ್ಟಿಗೆ ಸಿಲುಕಿದ ರಾಜ್ಯದಲ್ಲಿ ಕೇಂದ್ರದ ಆಡಳಿತವನ್ನು ಹೇರುವ ಆದೇಶಕ್ಕೆ ಕೋವಿಂದ್ ಸಹಿ ಹಾಕಿದ್ದರು.

1996ರ ನಂತರ, 2018ರಲ್ಲಿ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಕೇಂದ್ರದ ಆಡಳಿತವನ್ನು ಹೇರಲಾಗಿತ್ತು. ಗೆಜೆಟ್ ಅಧಿಸೂಚನೆಯ ಪ್ರಕಾರ, ರಾಷ್ಟ್ರಪತಿಗಳು ಅಂದಿನ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರಿಂದ  ಸ್ವೀಕರಿಸಿದ ವರದಿ ಪರಿಗಣಿಸಿದ ರಾಷ್ಟ್ರಪತಿ ಆಳ್ವಿಕೆ ಹೇರಿದ್ದರು.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಕಾಂಗ್ರೆಸ್ ಮೈತ್ರಿಕೂಟ ಜಯಬೇರಿ ಭಾರಿಸಿದ್ದು, ಸರ್ಕಾರ ರಚನೆಗೆ ಅಣಿಯಾಗಿದೆ. ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರು ತನ್ನ ಮಗ ಉಮರ್ ಅಬ್ದುಲ್ಲಾ ಅವರು ಮುಂದಿನ ಸಿಎಂ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. ಉಮರ್ ಅಬ್ದುಲ್ಲಾ ಈಗಾಗಲೇ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಇದನ್ನೂ ಓದಿ : ಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...