Homeಮುಖಪುಟಕಾಶ್ಮೀರಿ ಪತ್ರಕರ್ತ ಫಹಾದ್ ಶಾ ಬಿಡುಗಡೆಗೆ ಪತ್ರಿಕಾ ಸಂಸ್ಥೆಗಳ ಒತ್ತಾಯ

ಕಾಶ್ಮೀರಿ ಪತ್ರಕರ್ತ ಫಹಾದ್ ಶಾ ಬಿಡುಗಡೆಗೆ ಪತ್ರಿಕಾ ಸಂಸ್ಥೆಗಳ ಒತ್ತಾಯ

- Advertisement -
- Advertisement -

‘ದಿ ಕಾಶ್ಮೀರ ವಾಲಾ’ ನ್ಯೂಸ್ ಪೋರ್ಟಲ್ ಸಂಪಾದಕರಾದ ಕಾಶ್ಮೀರಿ ಪತ್ರಕರ್ತ ಫಹಾದ್ ಶಾ ಬಂಧನವನ್ನು ಖಂಡಿಸಿರುವ ಹಲವಾರು ಪತ್ರಿಕಾ ಸಂಸ್ಥೆಗಳು ತಕ್ಷಣವೇ ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿವೆ.

ಜಮ್ಮು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವಂತೆ ಸಾರ್ವಜನಿಕರನ್ನು ಪ್ರಚೋದಿಸುವ ಉದ್ದೇಶದೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ದೇಶ ವಿರೋಧಿ ವಿಷಯವನ್ನು ಅಪ್ಲೋಡ್ ಮಾಡಿದ್ದಾರೆ ಎಂದು ಆರೋಪಿಸಿ ಕಾಶ್ಮೀರದ ಪತ್ರಕರ್ತ ಫಹಾದ್ ಶಾ ಅವರನ್ನು ಪೊಲೀಸರು ಶುಕ್ರವಾರ (ಫೆ.4) ಬಂಧಿಸಿದ್ದಾರೆ.

‘ದಿ ಕಾಶ್ಮೀರ ವಾಲಾ’ ನ್ಯೂಸ್ ಪೋರ್ಟಲ್ ಸಂಪಾದಕರಾದ ಫಹಾದ್ ಅವರ ಮೇಲೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜನವರಿ 30 ರಂದು ಪುಲ್ವಾಮಾದ ನೈರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಭಯೋತ್ಪಾದಕನ ಕುಟುಂಬದ ಹೇಳಿಕೆಯನ್ನು ಆಧರಿಸಿ ಸುದ್ದಿ ಮಾಡಿ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಿದ ನಂತರ ಅವರನ್ನು ಈ ಹಿಂದೆ ಪೊಲೀಸರು ಪ್ರಶ್ನಿಸಿದ್ದರು. ಅವರ ಪೋಸ್ಟ್‌ಗಳು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟುಮಾಡುತ್ತವೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ: ಚರಣ್‌ಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ- ರಾಹುಲ್ ಗಾಂಧಿ ಘೋಷಣೆ

ಭಾನುವಾರ ಹೇಳಿಕೆ ಬಿಡುಗಡೆ ಮಾಡಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಹೇಳಿಕೆಯಲ್ಲಿ ಫಹಾದ್ ಶಾ ಬಂಧನವನ್ನು ಬಲವಾಗಿ ಖಂಡಿಸಿದೆ. “ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಕಾಶ್ಮೀರ ವಾಲಾ ಪತ್ರಿಕೆಯ ಸಂಪಾದಕ ಫಹಾದ್ ಶಾ ಅವರ ಬಂಧನವನ್ನು ಬಲವಾಗಿ ಖಂಡಿಸುತ್ತದೆ. ಅವರನ್ನು ತಕ್ಷಣವೇ ಬಿಡುಗಡೆ ಮಾಡಲು ಒತ್ತಾಯಿಸುತ್ತದೆ. ಎಫ್‌ಐಆರ್‌ಗಳು, ಬೆದರಿಸುವ ಪ್ರಶ್ನೆಗಳು ಮತ್ತು ತಪ್ಪಾದ ಬಂಧನವನ್ನು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಸಾಧನಗಳಾಗಿ ಬಳಸುವುದಿಲ್ಲ ಎಂದು ರಾಜ್ಯದ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು” ಎಂದು ಒತ್ತಾಯಿಸಿದೆ.

ಕಾಶ್ಮೀರದಲ್ಲಿ ಪತ್ರಕರ್ತರನ್ನು ಭದ್ರತಾ ಪಡೆಗಳು ಪ್ರಶ್ನಿಸಲು ಕರೆಯುವುದು ಮತ್ತು ವಿಮರ್ಶಾತ್ಮಕವಾಗಿ ವರದಿ ಮಾಡಿದ ಕಾರಣ ಅವರನ್ನು ಆಗಾಗ್ಗೆ ಬಂಧಿಸುವುದು ದೊಡ್ಡ ಕೆಲಸ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದೆ.

“ಕಳೆದ ತಿಂಗಳು, ಕಾಶ್ಮೀರ ಪ್ರೆಸ್ ಕ್ಲಬ್ ಆಡಳಿತದಲ್ಲಿ ಮೂಗು ತೂರಿಸಿದ ಭದ್ರತಾ ಪಡೆಗಳು ಕೆಲವು ಪತ್ರಕರ್ತರಿಗೆ ಕುಮ್ಮಕ್ಕು ನೀಡಿದ್ದವು. ನಂತರ ರಾಜ್ಯದ ಆಡಳಿತಾಧಿಕಾರಿಗಳು ಕ್ಲಬ್ ಅನ್ನು ಸಂಪೂರ್ಣವಾಗಿ ಮುಚ್ಚಿದ್ದು, ಆ ಸ್ಥಳವನ್ನು ಎಸ್ಟೇಟ್ ಇಲಾಖೆಗೆ ಹಿಂತಿರುಗಿಸಿದ್ದಾರೆ” ಎಂದು ಎಡಿಟರ್ಸ್ ಗಿಲ್ಡ್ ತಿಳಿಸಿದೆ.

ಹಲವಾರು ಮಾಧ್ಯಮ ಸಂಸ್ಥೆಗಳ ಸಂಘ ಡಿಜಿಪಬ್ ತನ್ನ ಹೇಳಿಕೆಯಲ್ಲಿ ಫಹಾದ್ ಶಾ ಅವರು ಕಾನೂನುಬಾಹಿರವಾದ ಯಾವುದೇ ಕೆಲಸದಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಯಿಲ್ಲ ಎಂದು ಹೇಳಿದೆ.

ಪತ್ರಕರ್ತರ ಬಂಧನದ ನಂತರ, ಪತ್ರಕರ್ತರ ರಕ್ಷಣಾ ಸಮಿತಿ ಕೂಡ ಅವರನ್ನು ಬಿಡುಗಡೆ ಮಾಡಲು ಒತ್ತಾಯಿಸಿತ್ತು. “ಫಹಾದ್ ಶಾ ಬಂಧನದಿಂದ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿಗಳು ಪತ್ರಿಕಾ ಸ್ವಾತಂತ್ರ್ಯ ಮತ್ತು ಪತ್ರಕರ್ತರ ಮೂಲಭೂತ ಹಕ್ಕನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿ ವರದಿ ಮಾಡುವ ಹಕ್ಕನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ” ಎಂದು ಪತ್ರಕರ್ತರ ರಕ್ಷಣಾ ಸಮಿತಿಯ ಏಷ್ಯಾ ಕಾರ್ಯಕ್ರಮ ಸಂಯೋಜಕ ಸ್ಟೀವನ್ ಬಟ್ಲರ್ ಹೇಳಿದ್ದಾರೆ.

ಶ್ರೀನಗರದ ಹೊರವಲಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಸಲೀಂ ಪರ್ರೆ ಅವರ ಸಾವಿನ ನಂತರ ಅವರ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಪ್ರತಿಭಟಿಸುವ ವೀಡಿಯೊವನ್ನು ಪೋಸ್ಟ್ ಮಾಡಿದ್ದ ಬಳಿಕ ಪತ್ರಕರ್ತರನ್ನು ಜನವರಿ 6 ರಂದು ಬಂಧಿಸಲಾಗಿತ್ತು.  ಈಗ ಮತ್ತೆ ಪುಲ್ವಾಮಾದ ನೈರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಉಗ್ರರ ಕುಟುಂಬದ ಹೇಳಿಕೆಯನ್ನು ಆಧರಿಸಿ ಸುದ್ದಿ ಮಾಡಿ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಿದಕ್ಕೆ ಬಂಧಿಸಲಾಗಿದೆ.


ಇದನ್ನೂ ಓದಿ: ಕಾಶ್ಮೀರದ ಪತ್ರಕರ್ತ ಫಹಾದ್ ಶಾ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...